ಬೆಂಗಳೂರು: ನಾಡಿನಾದ್ಯಂತ ಇಂದು ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ನವರಾತ್ರಿ ಮಹೋತ್ಸವದ ಪ್ರಮುಖ ಆಚರಣೆಗಳಲ್ಲಿ ಒಂದಾದ ಆಯುಧ ಪೂಜೆಯನ್ನು ಜನರು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸುತ್ತಿದ್ದಾರೆ. ತಮ್ಮ ದಿನನಿತ್ಯದ ಕೆಲಸಗಳಿಗೆ ನೆರವಾಗುವ ಉಪಕರಣಗಳು, ಯಂತ್ರಗಳು ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಆಯುಧ ಪೂಜೆಯ ಶುಭದಿನದಂದು ಗ್ಯಾರಂಟಿ ನ್ಯೂಸ್ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಗ್ಯಾರಂಟಿ ನ್ಯೂಸ್ ಕಚೇರಿಯಲ್ಲಿ ಆಯುಧ ಪೂಜೆಯನ್ನು ಭಕ್ತಿ ಭಾವದಿಂದ ಹಾಗೂ ಅದ್ಧೂರಿಯಾಗಿ ನೆರವೇರಿಸಲಾಯಿತು. ಗ್ಯಾರಂಟಿ ನ್ಯೂಸ್ ಸಂಸ್ಥೆಯ ಎಂಡಿ ಶಿವಸ್ವಾಮಿ ಹಾಗೂ ಸಿಇಒ ನಮ್ರತಾ ಶಿವಸ್ವಾಮಿ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.
ಗ್ಯಾರಂಟಿ ನ್ಯೂಸ್ ಕಚೇರಿಯಲ್ಲಿ ದಸರಾ ಸಂಭ್ರಮ
ಆಯುಧ ಪೂಜೆಯ ಹಿನ್ನೆಲೆ ಗ್ಯಾರಂಟಿ ನ್ಯೂಸ್ ಕಚೇರಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಕಚೇರಿಯ ಕೆಲಸಗಳಿಗೆ ಬಳಸುವ ಉಪಕರಣಗಳು ಹಾಗೂ ಅಗತ್ಯ ಸಾಮಗ್ರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಂಪ್ರದಾಯವನ್ನು ಗೌರವಿಸಲಾಯಿತು.
ಸಂಸ್ಥೆಯ ವಾಹನಗಳಿಗೂ ವಿಶೇಷ ಪೂಜೆ
ಕಚೇರಿಯಲ್ಲಿ ಪೂಜೆ ನೆರವೇರಿದ ಬಳಿಕ ಗ್ಯಾರಂಟಿ ನ್ಯೂಸ್ ಸಂಸ್ಥೆಯ ಎಲ್ಲ ವಾಹನಗಳಿಗೂ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ವಾಹನಗಳಿಗೂ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಆಯುಧ ಪೂಜೆಯ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಿಬ್ಬಂದಿಯ ಪಾಲ್ಗೊಳ್ಳುವಿಕೆಯಿಂದ ಹೆಚ್ಚಿದ ಸಂಭ್ರಮ
ಈ ಪೂಜಾ ಕಾರ್ಯಕ್ರಮದಲ್ಲಿ ಗ್ಯಾರಂಟಿ ನ್ಯೂಸ್ ಸಂಪಾದಕರಾದ ಸತೀಶ್ ಆಂಜನಪ್ಪ ಸೇರಿದಂತೆ ಸಂಸ್ಥೆಯ ಎಲ್ಲ ಸಿಬ್ಬಂದಿಗಳು ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ಒಟ್ಟಾಗಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
