ಹಾಸನಾಂಬಾ ದೇವಸ್ಥಾನದ ಅಚ್ಚುಕಟ್ಟಾದ ವ್ಯವಸ್ಥೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

Untitled design 2025 10 18t074111.220

ಹಾಸನ: ಶ್ರೀ ಹಾಸನಾಂಬಾ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಜಿಲ್ಲಾ ಆಡಳಿತವು ಈ ಬಾರಿ ಶಿಸ್ತುಬದ್ಧವಾದ ಉತ್ತಮ ವ್ಯವಸ್ಥೆ ಮಾಡಿದ್ದು, ಇದರಿಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. 

ಈ ವೇಳೆ ಮಾತನಾಡಿದ ಅವರು, ದೇವಸ್ಥಾನದ ಆಡಳಿತ ವರ್ಗ ಮತ್ತು ಜಿಲ್ಲಾಡಳಿತವು ಭಕ್ತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಿದ್ದಾರೆ. ದೇಶದ ನಾನಾ ಕಡೆಗಳಿಂದ ಲಕ್ಷಾಂತರ ಭಕ್ತರು ಇಲ್ಲಿ ದರ್ಶನಕ್ಕಾಗಿ ಬರುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಎಲ್ಲಾ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ, ಸರಳ ಮತ್ತು ಸುಗಮವಾದ ದರ್ಶನ ಅನುಭವವನ್ನು ನೀಡುವಲ್ಲಿ ಜಿಲ್ಲಾಡಳಿತವು ಯಶಸ್ವಿಯಾಗಿದೆ. ಈ ಉತ್ತಮ ವ್ಯವಸ್ಥೆಗೆ ನಾನು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ದರ್ಶನದಿಂದ ಎಲ್ಲಾ ಭಕ್ತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಆಗಲಿ ಮತ್ತು ದೇವಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.ಕೇಂದ್ರ ಮಂತ್ರಿಯವರ ಈ ಭೇಟಿಯ ಸಮಯದಲ್ಲಿ ಜಿಲ್ಲೆಯ ಶಾಸಕರು ಶಾರದಾ ಪೂರ್ಯಾನಾಯ್, ಸಿ.ಎನ್. ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಮತ್ತು ಇತರ ಹಲವು ಗಣ್ಯರು ಉಪಸ್ಥಿತರಿದ್ದರು.

Exit mobile version