ಹಾಸನ: ಆಕಸ್ಮಿಕವಾಗಿ ಬಸ್‌ನಿಂದ ಕೆಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೊಳಲ್ಕೆರೆ ಗೇಟ್ ಬಳಿ ನಡೆದಿದೆ.
ನಾಲ್ಕು ವರ್ಷದ ಭಾರ್ಗವಿ ತನ್ನ ತಾಯಿ ಯಮುನಾ ಅವರೊಂದಿಗೆ ದೊಡ್ಡಮೇಟಿಕುರ್ಕೆ ಗ್ರಾಮದಲ್ಲಿರುವ ಆಸ್ಪತ್ರೆಗೆ ತೆರಳುತ್ತಿದ್ದರು. ಹೊಳಲ್ಕೆರೆ ಗೇಟ್ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತುವಾಗ ಆಕಸ್ಮಿಕವಾಗಿ ಬಾಲಕಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಸಾರಿಗೆ ಬಸ್ಸಿನ ಚಕ್ರ ಭಾರ್ಗವಿ ಮೇಲೆ ಹರಿದಿದೆ ಇದರಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಭಾರ್ಗವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಂಜಿನಿಂದ ದಾರಿ ಕಾಣಿಸದೇ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ದಂಪತಿ ದುರ್ಮರಣ
ಚಂಡೀಗಢ: ಪಂಜಾಬಿನ ಮೋಗಾ ಜಿಲ್ಲೆಯಲ್ಲಿ ದಟ್ಟವಾದ ಮಂಜಿನಿಂದ ರಸ್ತೆ ಕಾಣದಾಗಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಶಿಕ್ಷಕ ದಂಪತಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ಸಂಗತ್‌ಪುರ ಗ್ರಾಮದ ಬಳಿ ಸಂಭವಿಸಿದ್ದು, ಪಂಜಾಬ್ ಜಿಲ್ಲಾ ಪರಿಷತ್ ಚುನಾವಣೆಗಾಗಿ ಮತಗಟ್ಟೆಯ ಕರ್ತವ್ಯಕ್ಕೆ ಹೋಗುತ್ತಿದ್ದ ವೇಳೆ ಈ ನಗಟನೆ ನಡೆದಿದೆ.
ಭಾನುವಾರ ಬೆಳಗ್ಗೆ ದಟ್ಟವಾದ ಮಂಜಿನ ಪರಿಸ್ಥಿತಿಯಲ್ಲಿ, ಜಸ್ ಕರಣ್ ಸಿಂಗ್ ತಮ್ಮ ಪತ್ನಿ ಕಮಲ್‌ಜೀತ್ ಕೌರ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಸಂಗತ್‌ಪುರ ಗ್ರಾಮದ ಮತಗಟ್ಟೆಗೆ ತೆರಳುತ್ತಿದ್ದರು. ಕಮಲ್‌ಜೀತ್ ಕೌರ್ ರನ್ನು ಆ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಹಾದಿಯಲ್ಲಿ, ಭಾರೀ ಮಂಜಿನಿಂದ ರಸ್ತೆ ಸ್ಪಷ್ಟವಾಗಿ ಕಾಣದ ಕಾರಣ ಕರಣ್ ಸಿಂಗ್ ಕಾರಿನ ನಿಯಂತ್ರಣ ಕಳೆದುಕೊಂಡು, ಕಾರು ರಸ್ತೆಬದಿಯಲ್ಲಿದ್ದ ಕಾಲುವೆಗೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ದಂಪತಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಾದ ಜಸ್ ಕರಣ್ ಸಿಂಗ್ ಮಾನ್ಸಾ ಜಿಲ್ಲೆಯವರಾಗಿದ್ದು, ಇಂಗ್ಲಿಷ್ ವಿಷಯದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಪತ್ನಿ ಕಮಲ್‌ಜೀತ್ ಕೌರ್ ಅವರೂ ಸಹ ಶಿಕ್ಷಕಿಯಾಗಿದ್ದರು. ಇಬ್ಬರೂ ಮೋಗಾ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಇನ್ನೂ ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃದೇಹಗಳನ್ನ ಪೋಸ್ಟ್‌ಮಾರ್ಟಮ್‌ಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.





