• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನ ಡಿಸಿ ಲಂಚದ ವಾಟ್ಸಪ್ ಚಾಟ್ ಕೇಸ್‌: ಹೆಚ್‌.ಡಿ ಕುಮಾರಸ್ವಾಮಿಗೆ ಸೈಬರ್ ಪೊಲೀಸರಿಂದ ನೋಟಿಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 24, 2026 - 4:47 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 11 24T164543.055

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಲಂಚದ ಆರೋಪಕ್ಕೆ ಸಂಬಂಧಿಸಿದ ವಾಟ್ಸಪ್ ಚಾಟ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಮನೆಗೆ ಬಂದ ಪೊಲೀಸರಿಂದ ನೋಟಿಸ್ ಸ್ವೀಕರಿಸದೆ ಕುಮಾರಸ್ವಾಮಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. 

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಆಪ್ತ ಸಹಾಯಕ ಶಶಿಕಿರಣ್ ನೀಡಿದ ದೂರಿನ ಹಿನ್ನೆಲೆ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ವಾಟ್ಸಪ್ ಚಾಟ್‌ನ ಮೂಲ ಮತ್ತು ಅದನ್ನು ಯಾರು ಒದಗಿಸಿದರು ಎಂಬುದರ ಕುರಿತು ಮಾಹಿತಿ ಪಡೆಯಲು ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

RelatedPosts

ಯುವ ಈಜುಪಟುಗಳ ಸಾಧನೆಗೆ ಡಾ. ವಿ.ಎಸ್.ವಿ ಪ್ರಸಾದ್ ಮೆಚ್ಚುಗೆ: ಪ್ರತಿಭೆಗಳಿಗೆ ನೆರವಿನ ಭರವಸೆ

ಬೆಂಗಳೂರಲ್ಲಿ 11 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ಆರೋಪಿಗಳ ಬಂಧನ

9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಆಶಾಗಳಿಗೆ ಗ್ಯಾರಂಟಿ ನ್ಯೂಸ್ ಆಸರೆ

ಶಾಸಕ ಸ್ಥಾನ ಕಳೆದುಕೊಳ್ತಾರಾ ವಿನಯ್ ಕುಲಕರ್ಣಿ?

ADVERTISEMENT
ADVERTISEMENT
75 ಲಕ್ಷ ರೂ. ಲಂಚದ ಆರೋಪ ಮಾಡಿದ್ದ ಎಚ್‌ಡಿಕೆ

ಕಳೆದ ನವೆಂಬರ್ 8ರಂದು ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು 75 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿ ಕಚೇರಿಯ ಆಪ್ತ ಸಹಾಯಕ ಶಶಿಕಿರಣ್ ಮತ್ತು ಮಧ್ಯವರ್ತಿಯೊಬ್ಬರ ನಡುವೆ ನಡೆದಿದೆ ಎನ್ನಲಾದ ವಾಟ್ಸಪ್ ಚಾಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು. ಈ ಚಾಟ್‌ಗಳ ಕುರಿತು ಸರ್ಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ನಕಲಿ ಚಾಟ್ ಎಂದು ದೂರು ನೀಡಿದ್ದ ಪಿಎ

ಕುಮಾರಸ್ವಾಮಿ ಬಹಿರಂಗಪಡಿಸಿದ್ದ ವಾಟ್ಸಪ್ ಚಾಟ್‌ಗಳನ್ನು ಹಾಸನ ಜಿಲ್ಲಾಧಿಕಾರಿ ಕಚೇರಿಯ ಆಪ್ತ ಸಹಾಯಕ ಶಶಿಕಿರಣ್ ನಿರಾಕರಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ನಂಬರ್ ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಪ್ ಚಾಟ್ ಸೃಷ್ಟಿಸಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.

ಈ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಕಲಂ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ಇದೀಗ ತನಿಖೆಯ ಭಾಗವಾಗಿ ಚಾಟ್‌ಗಳ ಮೂಲದ ಕುರಿತು ಮಾಹಿತಿ ಸಂಗ್ರಹಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಲು ಮುಂದಾಗಿದ್ದಾರೆ.

ನೋಟಿಸ್ ಪಡೆಯದೆ ಪೊಲೀಸರನ್ನು ವಾಪಸ್ ಕಳುಹಿಸಿದರಾ ಹೆಚ್‌ಡಿಕೆ?

ಸೈಬರ್ ಪೊಲೀಸರು ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ನೋಟಿಸ್ ನೀಡಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ, ಕುಮಾರಸ್ವಾಮಿ ನೋಟಿಸ್ ಸ್ವೀಕರಿಸದೆ ಪೊಲೀಸರನ್ನು ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವೇಳೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ತಾವು ಪ್ರತಿಪಕ್ಷದ ನಾಯಕನಾಗಿ ಮಾತನಾಡಬೇಕಾದ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಇದೇ ರೀತಿ ಮಾತನಾಡಿದ ಎಲ್ಲರ ವಿರುದ್ಧವೂ ದೂರು ಪಡೆದು ಕ್ರಮ ಕೈಗೊಂಡಿದ್ದೀರಾ ಎಂದು ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಈ ಬೆಳವಣಿಗೆಯ ಬೆನ್ನಲ್ಲೇ ಕುಮಾರಸ್ವಾಮಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. 

ಆರೋಪಗಳನ್ನು ತಳ್ಳಿಹಾಕಿದ್ದ ಜಿಲ್ಲಾಧಿಕಾರಿ

ಇನ್ನೊಂದೆಡೆ, ತಮ್ಮ ವಿರುದ್ಧ ಕೇಳಿಬಂದಿದ್ದ ಆರೋಪಗಳನ್ನು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸಂಪೂರ್ಣವಾಗಿ ನಿರಾಕರಿಸಿದ್ದರು. ಅಧಿಕಾರ ಸ್ವೀಕರಿಸಿದ ದಿನದಿಂದಲೇ ತಮ್ಮನ್ನು ಗುರಿಯಾಗಿಸಲಾಗುತ್ತಿದೆ. ಮಹಿಳಾ ಅಧಿಕಾರಿಯ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತಾವು ಭಾಗಿಯಾಗಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರತರಬೇಕು ಮತ್ತು ನಕಲಿ ಮಾಹಿತಿ ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 25T171955.074

ಪಾಕಿಸ್ತಾನ ಇಬ್ಬಾಗವಾಗುತ್ತಾ? ಸಿಂಧ್ ವಿಭಜನೆಗೆ ಆಸಿಮ್ ಮುನೀರ್ ಸ್ಕೆಚ್!

by Hemanth Kumar S
November 25, 2026 - 5:20 pm
0

Your paragraph text 2026 11 25T170319.433

ಬೆಂಗಳೂರು ಸಿಟಿಯಲ್ಲೇ ‘ರಾಮಾಯಣ’ 116Cr ಕಲೆಕ್ಷನ್

by ಶಾಲಿನಿ ಕೆ. ಡಿ
November 25, 2026 - 5:04 pm
0

Your paragraph text 2026 11 25T164015.286

ಯುವ ಈಜುಪಟುಗಳ ಸಾಧನೆಗೆ ಡಾ. ವಿ.ಎಸ್.ವಿ ಪ್ರಸಾದ್ ಮೆಚ್ಚುಗೆ: ಪ್ರತಿಭೆಗಳಿಗೆ ನೆರವಿನ ಭರವಸೆ

by ಶಾಲಿನಿ ಕೆ. ಡಿ
November 25, 2026 - 4:22 pm
0

Your paragraph text 2026 11 25T163210.919

ಟಿಟೌನ್ ಟೈಸನ್ ನಾಯ್ಡು ಜೊತೆ ಕನ್ನಡದ ಪ್ರಶಾಂತ್ ಸಿದ್ದಿ..!

by ಶಾಲಿನಿ ಕೆ. ಡಿ
November 25, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 25T164015.286
    ಯುವ ಈಜುಪಟುಗಳ ಸಾಧನೆಗೆ ಡಾ. ವಿ.ಎಸ್.ವಿ ಪ್ರಸಾದ್ ಮೆಚ್ಚುಗೆ: ಪ್ರತಿಭೆಗಳಿಗೆ ನೆರವಿನ ಭರವಸೆ
    November 25, 2026 | 0
  • Your paragraph text 2026 11 25T152124.303
    ಬೆಂಗಳೂರಲ್ಲಿ 11 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ಆರೋಪಿಗಳ ಬಂಧನ
    November 25, 2026 | 0
  • Your paragraph text 2026 11 25T131026.763
    9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಆಶಾಗಳಿಗೆ ಗ್ಯಾರಂಟಿ ನ್ಯೂಸ್ ಆಸರೆ
    November 25, 2026 | 0
  • Your paragraph text (97)
    ಶಾಸಕ ಸ್ಥಾನ ಕಳೆದುಕೊಳ್ತಾರಾ ವಿನಯ್ ಕುಲಕರ್ಣಿ?
    November 25, 2026 | 0
  • Untitled Design 2026 11 25T112346.707
    ಆನೆ ಸ್ಥಳಾಂತರ ವಿರೋಧಿಸಿ ಇಂದು ಮೂಡಿಗೆರೆ ಸಂಪೂರ್ಣ ಬಂದ್
    November 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version