• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಹೆಚ್.ಡಿ. ದೇವೇಗೌಡರು

ಹಾಸನ ಹೊರ ವರ್ತುಲ ರಸ್ತೆ ಯೋಜನೆಗೆ ಕೇಂದ್ರದ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಕೋರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2025 - 4:46 pm
in Flash News, ಕರ್ನಾಟಕ
0 0
0
Untitled design 2025 03 26t163434.825

ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು, ರಾಜ್ಯಸಭೆ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ಸಂಸತ್ ಭವನ ದಲ್ಲಿರುವ ಸಾರಿಗೆ ಸಚಿವರ ಕಚೇರಿಯಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಗಡ್ಕರಿ ಅವರನ್ನು ಭೇಟಿಯಾದ ಮಾಜಿ ಪ್ರಧಾನಿಗಳು, ಹಾಸನ ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಾಗೂ ಕರಾವಳಿ ಮತ್ತು ಒಳನಾಡು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಅಗತ್ಯವಿದ್ದು, ವರ್ತುಲ ರಸ್ತೆ ನಿರ್ಮಾಣದ ಅಗತ್ಯ ಬಹಳಷ್ಟಿದೆ ಎಂದು ಹೇಳಿದರು.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

ADVERTISEMENT
ADVERTISEMENT

ಅಲ್ಲದೆ, ಕರ್ನಾಟಕದ ಮೂಲಸೌಕರ್ಯ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ತಾವು ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದು, ನಾನಾ ಭಾಗಗಳಲ್ಲಿ ಜಾರಿಯಲ್ಲಿರುವ ಯೋಜನೆಗಳನ್ನು ಕ್ಷಿಪ್ರಗತಿಯ ಪೂರ್ಣಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳು ಸಚಿವರನ್ನು ಕೋರಿದರು.

ಹಾಸನ ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಸಾರಿಗೆ ಸಚಿವರಿಗೆ ಮನವಿ ಪತ್ರ ನೀಡಿದ ದೇವೇಗೌಡರು; ಯೋಜನೆಗೆ ಅದಷ್ಟು ಬೇಗ ಅನುಮೋದನೆ ನೀಡಬೇಕು ಎಂದು ಕೋರಿದರು.

ಹಾಸನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡುವಲ್ಲಿ, ಸಂಪರ್ಕವನ್ನು ಸುಧಾರಿಸುವಲ್ಲಿ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುವಲ್ಲಿ ಪ್ರಸ್ತಾವಿತ ರಿಂಗ್ ರಸ್ತೆಯ ನಿರ್ಣಾಯಕ ಪಾತ್ರವನ್ನು ನಿಯೋಗ ಒತ್ತಿಹೇಳಿತು.

ರಾಜ್ಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಎರಡನೇ ಹಂತದ ನಗರವಾದ ಹಾಸನ, ಆರ್ಥಿಕ ಬೆಳವಣಿಗೆ ಮತ್ತು ನಗರ ವಿಸ್ತರಣೆಯಿಂದಾಗಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಹೊರ ವರ್ತುಲ ರಸ್ತೆ ಅಗತ್ಯವಾಗಿದೆ. ಈ ಯೋಜನೆಯು ಸಂಚಾರವನ್ನು ವಿಕೇಂದ್ರೀಕರಿಸಿ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಹಾಗೂ ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಿಗೆ ಸಂಪರ್ಕ ಒದಗಿಸುತ್ತದೆ ಎಂದು ಮಾಜಿ ಪ್ರಧಾನಿಗಳು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಪ್ರಸ್ತಾವಿತ ಹೊರ ವರ್ತುಲ ರಸ್ತೆಯು ಬೆಂಗಳೂರು-ನೆಲಮಂಗಲ-ಮಂಗಳೂರು ರಸ್ತೆ (NH-75) ಅನ್ನು ಹಾಸನ ವಿಮಾನ ನಿಲ್ದಾಣ, ಹಾಸನ-ಅರಸೀಕೆರೆ ರಸ್ತೆ (SH-71), ಹಾಸನ-ಹಳೇಬೀಡು-ಹಾಸನ ರಸ್ತೆ ಮತ್ತು ಹಾಸನ-ಬೆಲೂರು ರಸ್ತೆ (NH-373) ಗೆ ಸಂಪರ್ಕಿಸುತ್ತದೆ. ಈ ಸಂಪರ್ಕವು ಸುಗಮ ಸಾರಿಗೆಗೆ ಅನುಕೂಲವಾಗುತ್ತದೆ. ಅಲ್ಲದೆ, ಹಾಸನ ಜಿಲ್ಲೆಯಲ್ಲಿರುವ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳು ಮತ್ತು ರಾಷ್ಟ್ರೀಯ ಪ್ರವಾಸಿ ಸರ್ಕ್ಯೂಟ್ ನ ಭಾಗವಾಗಿರುವ ಹಾಸನ, ಬೇಲೂರು, ಹಳೇಬೀಡು, ಚಿಕ್ಕಮಗಳೂರು, ಶ್ರವಣಬೆಳಗೊಳ, ಮೈಸೂರು, ಮಡಿಕೇರಿ ಮತ್ತು ಮಂಗಳೂರಿನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ದೇವೇಗೌಡರು ಕೇಂದ್ರ ಸಾರಿಗೆ ಸಚಿವರಿಗೆ ವಿವರಿಸಿದರು.

ಯೋಜನೆಯ ವಿವರ:

ಪ್ರಸ್ತಾವಿತ ವರ್ತುಲ ರಸ್ತೆಯ ಒಟ್ಟು ಉದ್ದ 21.950 ಕಿ.ಮೀ. ದೂರವನ್ನು ಹೊಂದಿದ್ದು, ಯೋಜನೆಗೆ ಸುಮಾರು 120 ಹೆಕ್ಟೇರ್ ಭೂಮಿ ಅಗತ್ಯವಿದೆ. ಜಿಎಸ್‌ಟಿ, ಭೂಸ್ವಾಧೀನ ಮತ್ತು ಸ್ಥಳಾಂತರ ಸೇರಿದಂತೆ ಯೋಜನೆಯ ಅಂದಾಜು ವೆಚ್ಚ ಸುಮಾರು ₹750 ಕೋಟಿ ಆಗಲಿದೆ ಎಂದು ಮಾಜಿ ಪ್ರಧಾನಿಗಳು ಸಾರಿಗೆ ಸಚಿವರಿಗೆ ವಿವರಿಸಿದರು.

ಯೋಜನೆಯ ಆರ್ಥಿಕ ಪರಿಣಾಮದ ಕುರಿತು ವಿವರಿಸಿದ ದೇವೇಗೌಡರು, ಉತ್ತಮ ರಸ್ತೆ ಮೂಲಸೌಕರ್ಯವು ಈ ಪ್ರದೇಶದಲ್ಲಿ ವೇಗಯುತ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಈ ವರ್ತುಲ ರಸ್ತೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದಲ್ಲದೆ; ವ್ಯಾಪಾರ, ಕೃಷಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಹಾಸನದ ಜನರಿಗೆ ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.

ನಿಯೋಗದಲ್ಲಿ ಮಾಜಿ ಸಚಿವ ಸಂಸದ ಹೆಚ್.ಡಿ. ರೇವಣ್ಣ, ಕೋಲಾರದ ಲೋಕಸಭೆ ಕ್ಷೇತ್ರದ ಸದಸ್ಯ ಎಂ. ಮಲ್ಲೇಶ್ ಬಾಬು, ಮಾಜಿ ಸಚಿವ ಎ.ಮಂಜು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ ಅವವರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version