ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿರುವುದರಿಂದ, ಇಂದು ಅವರು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಇದಕ್ಕೂ ಮೊದಲು ಕೂಡ ಅವರು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕೇಂದ್ರ ಸಚಿವರಾಗಿರುವ ಬಳಿಕ ನಿರಂತರ ಪ್ರವಾಸ ಹಾಗೂ ಕೆಲಸದ ಒತ್ತಡದಿಂದಾಗಿ ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ನಾಲ್ಕು ದಿನಗಳಿಂದಲೇ ಅವರ ಆರೋಗ್ಯದ ಬಗ್ಗೆ ಅನೇಕ ಊಹಾಪೋಹಗಳು ಹರಿದಾಡುತ್ತಿದ್ದು, ಅವರ ಆಪ್ತ ವಲಯದವರು ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದರು. ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಅವರು ಆಸ್ಪತ್ರೆ ಒಳಗಾಗಿದ್ದಾರೆ.