• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 2, 2026 - 10:02 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 10 02T220126.193

ಬೆಂಗಳೂರು : ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ಎಂಬ ವ್ಯಕ್ತಿಯ ಜತೆ ಸೇರಿ ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೈಸ್ ಯೋಜನೆಯನ್ನು ಲಪಟಾಯಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಹೈದರಾಬಾದ್ ನಲ್ಲಿ ನೆಲೆಸಿರುವ ಉದ್ಯಮಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದು, ವಿವಿಧ ವ್ಯವಹಾರಗಳನ್ನು ನಡೆಸುತ್ತಿದ್ದಾರೆ. ಅಂತಹ ವ್ಯಕ್ತಿಯ ಜತೆ ಮುಖ್ಯಮಂತ್ರಿ ಶಾಮೀಲಾಗಿ ಇಡೀ ಯೋಜನೆಯನ್ನೇ ಲಪಟಾಯಿಸಲು ಸಂಚು ರೂಪಿಸಿದ್ದಾರೆ. ಇವರೊಂದಿಗೆ ಇನ್ನಷ್ಟು ಪ್ರಭಾವಿಗಳು ಕೈ ಜೋಡಿಸಿದ್ದಾರೆ. ಹಾಗೆಯೇ, ಯೋಜನೆಗೆ ಸ್ವಾಧೀನ ಮಾಡಿಕೊಂಡಿರುವ ಅಷ್ಟೂ ಭೂಮಿಯನ್ನು ಲೂಟಿ ಹೊಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವರು ದೂರಿದರು.

RelatedPosts

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು

ADVERTISEMENT
ADVERTISEMENT
ಡಿಕೆಶಿ ಪಾಪದ ಕೊಡ ತುಂಬಿದೆ!

ನಾನು ನೋಡುತ್ತಾ ಬಂದಿದ್ದೇನೆ. ಈ ವ್ಯಕ್ತಿಗೆ ಹೇಳಲು ಬಯಸುತ್ತೇನೆ. ನಿಮ್ಮ ಪಾಪದ ಕೊಡ ತುಂಬಿದೆ. ನೀವು 10 ಸಾವಿರ ಎಕರೆ ಮಾಡಿ. ಆದರೆ ನ್ಯಾಯವಾಗಿ ಮಾಡಿ. ಒಳ್ಳೆಯ ಮಾರ್ಗದಲ್ಲಿ ಸಂಪಾದನೆ ಮಾಡಿ. ಬೇಡ ಎಂದವರು ಯಾರು? ಈಗಾಗಲೇ ಬೆಂಗಳೂರು ಮೈಸೂರು ನಡುವೆ ಎಕ್ಸ್ ಪ್ರೆಸ್ ಹೆದ್ದಾರಿ ಆಗಿದೆ. ಮತ್ತೊಂದು ರಸ್ತೆ ಯಾಕೆ ಬೇಕು? ಬೆಂಗಳೂರಿನಿಂದ ಮೈಸೂರಿನ ತನಕ 1.75 ಲಕ್ಷ ಎಕರೆ ಜಮೀನು ಗುರುತಿಸಿದ್ದಾರೆ. ಅದನ್ನು ಲೂಟಿ ಹೊಡೆಯಬೇಕು. ನೈಸ್, ನೈಸೆಲ್ ಎಲ್ಲಾ ಹೋಗಿ ಡಿವೈನಿಟಿ ಅಂತ ಬರುತ್ತಿದೆ. ತೆಲಂಗಾಣದ ವ್ಯಕ್ತಿಗೆ ಇವರು ರೆಡ್ ಕಾರ್ಪೆಟ್ ಹಾಸುತ್ತಿದ್ದಾರೆ. ಎಷ್ಟು ಕೋಟಿಗೆ ಡೀಲ್ ಆಗುತ್ತಿದೆ? ಮಹೇಶ್ ರೆಡ್ಡಿ ಎನ್ನುವ ವ್ಯಕ್ತಿ ಯಾರು ಎನ್ನುವ ಎಲ್ಲಾ ಮಾಹಿತಿಯೂ ನನ್ನ ಬಳಿ ಇದೆ. ಸಮಯ ಬರುತ್ತೆ ಎಲ್ಲಾ ವಿಚಾರ ನಿಮಗೆ ತಿಳಿಯುತ್ತದೆ ಎಂದು ಸಚಿವರು ಹೇಳಿದರು.

ನೈಸ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ಜನರನ್ನು ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವರು; ರಸ್ತೆಯ ಉದೇಶಕ್ಕೆ ಸ್ವಾಧೀನ ಮಾಡಿಕೊಳ್ಳಲಾದ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಈಗಾಗಲೇ ರಾಜ್ಯ ಹೈಕೋರ್ಟ್ ನೈಸ್ ಯೋಜನೆಯ ಬಗ್ಗೆ ಕಟುವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಅದನ್ನು ಪ್ರಶ್ನಿಸಿ ನೈಸ್ ಕಂಪನಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿಕೊಂಡಿದೆ. ಈ ತಿಂಗಳ 5ರಂದು ಆ ಅರ್ಜಿ ವಿಚಾರಣೆಗೆ ಬರುತ್ತದೆ. ಆ ನಂತರ ಈ ಹೋರಾಟಕ್ಕೆ ಮತ್ತೊಂದು ಆಯಾಮ ಬರುತ್ತದೆ ಎಂದು ಸಚಿವರು ಹೇಳಿದರು.

ನಾನು ನೈಸ್ ಭೂಮಿ ಖರೀದಿ ಮಾಡಿದ್ದರೆ ನೇಣು ಹಾಕಿಕೊಳ್ಳುತ್ತೇನೆ:

ಮುಖ್ಯಮಂತ್ರಿ ಡಿಕೆಶಿ ನನ್ನ ಮೇಲೆ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿ ಕೂಡ ನೈಸ್ ಯೋಜನೆ ವ್ಯಾಪ್ತಿಯಲ್ಲಿ ಭೂಮಿ ಹೊಂದಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಆ ಭಾಗದಲ್ಲಿ ಎಲ್ಲಿಯೇ ಆದರೂ ನಾನು ಜಮೀನು ಖರೀದಿ ಮಾಡಿರುವುದನ್ನು ರುಜುವಾತು ಮಾಡಿದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.

ಸುಳ್ಳು ಯಾರ ಮನೆ ದೇವರು ಎಂಬುದು ಅರ್ಥವಾಗುತ್ತಿದೆ. ನೈಸ್ ಯೋಜನೆ ಹೆಸರಿನಲ್ಲಿ ಗುತ್ತಿಗೆದಾರನ ಜತೆ ಶಾಮೀಲಾಗಿ ಅಪಾರ ಪ್ರಮಾಣದ ಭೂಮಿಯನ್ನು ಲೂಟಿ ಹೊಡೆಯುತ್ತಿರುವ ಡಿಕೆಶಿ ಬಗ್ಗೆ ಮೊದಲನೇ ಕಂತಿನ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇನೆ. ಇನ್ನು ಹಲವಾರು ಕಂತುಗಳಷ್ಟು ಬಿಡುಗಡೆ ಮಾಡುವ ದಾಖಲೆಗಳು ಬಾಕಿ ಇದೆ ಎಂದು ಕೇಂದ್ರ ಸಚಿವರು ಎಚ್ಚರಿಕೆ ನೀಡಿದರು.

ನೈಸ್ ಯೋಜನೆಯಿಂದ ಭೂಮಿ ಕಳೆದುಕೊಂಡ ತೋಟದಗುಡ್ಡದಹಳ್ಳಿ, ಅಂಚೆಪಾಳ್ಯ, ತಿರುಮಲಪುರ, ಕೆ.ಜಿ.ಶ್ರೀಕಂಠಪುರ, ಗಂಗನಹಳ್ಳಿ, ಕಾಚೋಹಳ್ಳಿ, ಹೊಸಹಳ್ಳಿ, ಗೊಲ್ಲರಹಟ್ಟಿ ಸೇರಿದಂತೆ ಅನೇಕ ಹಳ್ಳಿಗಳ ಭೂ ಸಂತ್ರಸ್ತರಿಂದ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವರು; ನೈಸ್ ಯೋಜನೆ ಒಂದರಲ್ಲಿಯೇ ಈ ಮುಖ್ಯಮಂತ್ರಿ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಭೂಕಬಳಿಕೆ ನಡೆಸಿದ್ದಾರೆ. ಬಿ ಎಂ ಕಾವಲ್ ಪ್ರದೇಶದಲ್ಲಿ ಈ ವ್ಯಕ್ತಿ ಸುಮಾರು 200ರಿಂದ 300 ಎಕರೆಯಷ್ಟು ಭೂಮಿಯನ್ನು ಖರೀದಿಸಿದ್ದಾರೆ. ಅಷ್ಟು ಭೂಮಿಯನ್ನು ಇವರು ಯಾವ ಮಾರ್ಗದಲ್ಲಿ ಖರೀದಿಸಿದರು? ನೈಸ್ ಯೋಜನೆ ವ್ಯಾಪ್ತಿಯಲ್ಲಿರುವ ಈ ಭೂಮಿಯನ್ನು ಅವರು ಖರೀದಿಸಿದ್ದು ಏಕೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಈ ಭೂಮಿ ಇರುವ ಪ್ರದೇಶಕ್ಕೆ ಮಾಧ್ಯಮಗಳನ್ನು ಮತ್ತು ಸಾರ್ವಜನಿಕರನ್ನು ಕರೆದುಕೊಂಡು ಹೋಗಿ ತೋರಿಸಿದ ಸಚಿವ ಕುಮಾರಸ್ವಾಮಿ ಅವರು; ಇದು ಅತ್ಯಂತ ಫಲವತ್ತಾದ ಕೃಷಿ ಭೂಮಿಯಾಗಿದೆ. ಇಲ್ಲಿ ಈ ಮುಖ್ಯಮಂತ್ರಿ ಸುಮಾರು 300 ಎಕರೆಯಷ್ಟು ಜಮೀನು ಹೊಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಇಂತಹ ವ್ಯಕ್ತಿ ನಾನು ಜಮೀನು ಖರೀದಿ ಮಾಡಿದ್ದೇನೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ರಾಜಕೀಯಕ್ಕೆ ಬರುವ ಮೊದಲೇ ಬಿಡದಿಯಲ್ಲಿ 44 ಎಕರೆ ಜಮೀನು ಖರೀದಿಸಿದ್ದೇನೆ. ಅಲ್ಲಿ ನಾನು ಇವರೊಂದಿಗೆ ರಿಯಲ್ ಎಸ್ಟೇಟ್ ಮಾಡುತ್ತಿಲ್ಲ. ಬದಲಿಗೆ ಕೃಷಿ, ಪಶುಸಂಗೋಪನೆ ಮಾಡುತ್ತಿದ್ದೇನೆ. ಬೇಕಿದ್ದರೆ ಬಂದು ನೋಡಬಹುದು. ಕಾನೂನುಬಾಹಿರವಾಗಿ ನಾನೇನಾದರೂ ಒಂದು ಇಂಚು ಅಕ್ರಮವಾಗಿ ಭೂಮಿಯನ್ನು ಸಂಪಾದಿಸಿದರೆ ತಕ್ಷಣವೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇವರ ಹಾಗೆ ಮುಗ್ಧರನ್ನು ಹೆದರಿಸಿ ಬೆದರಿಸುವ ಮೂಲಕ ಭೂಮಿಯನ್ನು ಕಿತ್ತುಕೊಳ್ಳುವ ಜಾಯಮಾನ ನನ್ನದಲ್ಲ ಎಂದು ಮುಖ್ಯಮಂತ್ರಿ ವಿರುದ್ಧ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಅವನು ಯಾವನೋ ನನ್ನ ಬಗ್ಗೆ 3ಬಿ ಎಂದು ಮಾತನಾಡಿದ್ದಾನೆ. ಬ್ಲಾಕ್ ಮೇಲ್ ಮಾಡುವುದು, ಬ್ಲಾಕ್ ಮ್ಯಾಜಿಕ್ ಮಾಡುವುದು, ಬೆನ್ನಿಗೆ ಚೂರಿ ಹಾಕುವುದು ನನ್ನ ಜಾಯಮಾನವಲ್ಲ. ಯಾರು ಯಾರಿಗೆ ಇವೆಲ್ಲವನ್ನೂ ಮಾಡಿದರು ಎಂಬುದು ರಾಜ್ಯದ ಜನರಿಗೆ ಚೆನ್ನಾಗಿ ಗೊತ್ತಿದೆ. ಇವರೆಲ್ಲ ಸೇರಿ ನೈಸ್ ಯೋಜನೆ ವ್ಯಾಪ್ತಿಯ ಭೂಮಿಯನ್ನು ಯಾವ ರೀತಿಯಲ್ಲಿ ಲಪಟಾಯಿಸಿದ್ದಾರೆ ಎಂಬುದು ನನಗೆ ಗೊತ್ತಿದೆ. ರೈತರ ಭೂಮಿ ವಾಪಸ್ ಬರುವ ತನಕ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ಗುಡುಗಿದರು.

ನೈಸ್ ಗುತ್ತಿಗೆದಾರನ ಬಂಧನ ಆಗಬೇಕು

ಪರಮಪೂಜ್ಯ ಶಿವಕುಮಾರ ಮಹಾಸ್ವಾಮೀಜಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ನೈಸ್ ಗುತ್ತಿಗೆದಾರ ಅಶೋಕ್ ಖೇಣಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯ ಮಾಡಿದ ಸಚಿವ ಕುಮಾರಸ್ವಾಮಿ ಅವರು; ಇಂತಹ ಫ್ರಾಡ್ ವ್ಯಕ್ತಿಗೆ ಈ ರಾಜ್ಯದ ಮುಖ್ಯಮಂತ್ರಿ ರಕ್ಷಣೆ ಕೊಡುತ್ತ ಬಂದಿದ್ದಾರೆ. ಅಲ್ಲದೆ ಆತನ ಜೊತೆ ಶಾಮೀಲಾಗಿ ಮಾಡಬಾರದ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಈ ಅಶೋಕ್ ಖೇಣಿ ಸಿದ್ದಗಂಗಾ ಮಠದ ಆಸ್ತಿಯನ್ನು ಕೂಡ ಲೂಟಿ ಮಾಡಿದ್ದಾನೆ. ಇಂತಹ ಧರ್ಮ ದ್ರೋಹಿಗೆ ಡಿಕೆಶಿ ಸಹಕಾರ ಕೊಡುತ್ತಾ ಬಂದಿದ್ದಾರೆ. ಇಲ್ಲಿ ನನಗೆ ರಾಜಕೀಯ ಬೇಕಿಲ್ಲ. ರೈತರ ಭೂಮಿ ವಾಪಸ್ ಕೊಡಿಸುವ ಉದ್ಧೇಶದಿಂದ ಹೋರಾಟ ಮಾಡುತ್ತಿದ್ದೇನೆ. ಭೂಮಿ ಕಳೆದುಕೊಂಡ ಜನರು ಕೂಡ ಒಟ್ಟಾಗಿ ಹೋರಾಟಕ್ಕೆ ಧುಮುಕಬೇಕು. ನಾನು ಯಾರ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಪೈಕಿ ಅಲ್ಲ. ತೆಲಂಗಾಣದ ಮಹೇಶ್ ರೆಡ್ಡಿ ಎಂಬಾತನ ಜತೆ ಸೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಟ್ಟಾಗಿ ಭೂಮಿ ಲೂಟಿ ಹೊಡೆಯಲು ಸಂಚು ಮಾಡಿದ್ದಾರೆ. ಆದರೆ ಈ ಲೂಟಿಗೆ ನಾನು ಅವಕಾಶ ಕೊಡುವುದಿಲ್ಲ. ಹೇಗಾದರೂ ಮಾಡಿ ರೈತರ ಭೂಮಿಯನ್ನು ಉಳಿಸಿಕೊಡುತ್ತೇನೆ ಎಂದು ಕೇಂದ್ರ ಸಚಿವರು ಭರವಸೆ ನೀಡಿದರು.

ನನಗೆ ಆಮಿಷ ಒಡ್ಡಲು ಬಂದಿದ್ದರು!!

ನೈಸ್ ಯೋಜನೆ ಉಸಾಬರಿ ನಿಮಗೇಕೆ ಬೇಕು? ಈ ವಿಷಯದಲ್ಲಿ ನೀವು ಸುಮ್ಮನೆ ಇದ್ದುಬಿಡಿ. ನಿಮಗೆ ಏನು ಬೇಕೋ ಅದನ್ನು ತೆಗೆದುಕೊಳ್ಳಿ ಎಂದು ನನಗೆ ಯಾರನ್ನೂ ಕಳಿಸಿ ಇವರೆಲ್ಲರೂ ಆಮಿಷ ಒಡ್ಡಲು ಪ್ರಯತ್ನ ಮಾಡಿದರು. ನನ್ನ ಬಳಿ ಬಂದವರನ್ನು ಮುಗಿದು ಹೊರಗೆ ಅಟ್ಟಿದ್ದೇನೆ. ಯಾರಿಂದಲೂ ನನ್ನನ್ನು ಖರೀದಿ ಮಾಡುವುದು ಸಾಧ್ಯವಿಲ್ಲ. ನಾನು ಜನರ ಮನುಷ್ಯ. ಜನರಿಗಾಗಿ ಬದುಕುತ್ತೇನೆ ಮತ್ತು ಅವರಿಗಾಗಿಯೇ ಪ್ರಾಣ ಬಿಡಲು ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಮೇಲೆ ಬಹಳ ಒತ್ತಡ ಇದೆ. ಒಂದುವರೆ ವರ್ಷದಲ್ಲಿ ಚುನಾವಣೆ ಇದೆ, ದಯವಿಟ್ಟು ಈ ಹೋರಾಟವನ್ನು ಇಲ್ಲಿಗೆ ಬಿಟ್ಟುಬಿಡಿ. ಚುನಾವಣೆ ಖರ್ಚು ಸೇರಿದಂತೆ ನಿಮಗೆ ಅಗತ್ಯ ಇರುವುದನ್ನು ತಂದು ಒಪ್ಪಿಸುತ್ತೇವೆ ಎಂದು ಹೇಳಿದವರನ್ನು ಮನೆ ಬಾಗಿಲಲ್ಲಿಯೇ ಬೈದು ಕಳಿಸಿದ್ದೇನೆ. ನಾನು ಒಬ್ಬ ಸುಮ್ಮನೆ ಇದ್ದರೆ ಇವರ ಲೂಟಿ ಸುಲಭವಾಗಿ ಆಗುತ್ತದೆ. ಅದಕ್ಕಾಗಿ ನಾನು ಕೇಳುವ ಪ್ರಶ್ನೆಗಳಿಗೆ ಹಾಗೂ ನನ್ನ ದಾಖಲೆಗಳಿಗೆ ಉತ್ತರ ಕೊಡುವುದನ್ನು ಬಿಟ್ಟು ಬೇರೆ ವಿಷಯಗಳನ್ನು ಚರ್ಚೆ ಮಾಡುತ್ತಾ ವಿಷಯಾಂತರ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಇವತ್ತು ಮಾದಾವರದಿಂದ ಎಲೆಕ್ಟ್ರಾನಿಕ್ ಸಿಟಿ ಅವರಿಗೆ ಅನೇಕ ಹಳ್ಳಿಗಳಿಗೆ ಭೇಟಿ ನೀಡಿದ್ದೇನೆ. ನಾಲ್ಕಾರು ಕಡೆ ಸಭೆಗಳನ್ನು ಮಾಡಿ ನೊಂದ ಜನರ ದುಃಖ ದುಮ್ಮಾನಗಳನ್ನು ಆಲಿಸಿದ್ದೇನೆ. ಸೋಂಪುರದಲ್ಲಿ ಕೊನೆಯದಾಗಿ ಬೃಹತ್ ಸಭೆಯನ್ನು ನಡೆಸಿ ಅಹವಾಲು ಆಲಿಸಿದ್ದೇನೆ. ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಜನರೊಂದಿಗೆ ಬೃಹತ್ ಆಂದೋಲನವನ್ನು ರೂಪಿಸಲಾಗುವುದು. ನಮ್ಮ ಹೋರಾಟ ಶಾಂತಿಯುತವಾಗಿರುತ್ತದೆ. ಆದಷ್ಟು ಬೇಗ ಎಲ್ಲಾ ಪ್ರಮುಖರ ಮತ್ತೊಂದು ಸಭೆ ಕರೆಯುತ್ತೇನೆ. 5ನೇ ತಾರೀಕು ಸುಪ್ರೀಂ ಕೋರ್ಟ್ ನಲ್ಲಿ ಹೈಕೋರ್ಟ್ ಅಭಿಪ್ರಾಯಗಳ ಮೇಲೆ ವಿಚಾರಣೆ ನಡೆಯುತ್ತದೆ. ಅದನ್ನು ನೋಡಿಕೊಂಡು ಮುಂದಿನ ಹೋರಾಟ ರೂಪಿಸೋಣ. ಭೂಮಿ ಕಳೆದುಕೊಂಡವರು ಯಾವುದೇ ಕಾರಣಕ್ಕೂ ಅಧೈರ್ಯ ಪಡುವುದು ಬೇಡ. ನಿಮ್ಮ ಜೊತೆ ನಾನಿದ್ದೇನೆ ಎಂದು ಕೇಂದ್ರ ಸಚಿವರು ಅಭಯ ನೀಡಿದರು.

ಕೇಂದ್ರ ಸಚಿವರ ಜತೆ ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ಮಾಜಿ ಶಾಸಕ ಎ.ಮಂಜುನಾಥ್, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ಹಿರಿಯ ಮುಖಂಡ ರುದ್ರೇಶ್ ಸೇರಿದಂತೆ ಅನೇಕರು ಇದ್ದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

Untitled design 2026 10 02T203656.237

ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್

by ಶಾಲಿನಿ ಕೆ. ಡಿ
October 2, 2026 - 8:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    October 2, 2026 | 0
  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T181802.371
    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
    October 2, 2026 | 0
  • ಜ್ಞಾನೇಶ್ (15)
    ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು
    October 2, 2026 | 0
  • ಜ್ಞಾನೇಶ್ (14)
    ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version