BREAKING: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಏಳು ಮಂದಿ ದುರ್ಮರಣ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನಗಳ ನಡುವೆ ಭೀಕರ ಸರಣಿ ಅಪಘಾತ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ನಡೆದ ಈ ಭೀಕರ ದುರಂತದಲ್ಲಿ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತ ನಡೆದಿದ್ದು ಹೇಗೆ?

ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತ್ಯುರೂಪಿಯಾಗಿ ಬಂದ ಕ್ಯಾಂಟರ್ ವಾಹನ, ಮುಂಭಾಗದಲ್ಲಿದ್ದ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರದೃಷ್ಟವಶಾತ್, ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಬೈಕ್ ಸವಾರ ಕೂಡ ಈ ಸರಣಿ ಅಪಘಾತಕ್ಕೆ ಬಲಿಯಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಹೊಸಕೋಟೆ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಡಿದು ಪೊಲೀಸಪ್ಪನ ಅವಾಂತರಕ್ಕೆ 24ರ ಯುವತಿ ದುರಂತ ಸಾವು

ಹರ್ಯಾಣದ ಅಂಬಾಲಾದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪೊಲೀಸ್ ಅಧಿಕಾರಿಯ ಉದ್ಧಟತನಕ್ಕೆ 24 ವರ್ಷದ ಯುವತಿ ನಿಕಿತಾ ಬಲಿಯಾಗಿದ್ದಾಳೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿ ಈ ದುರಂತ ಘಟನೆಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ನಂತರ ಸ್ಥಳೀಯರು ಪೊಲೀಸ್ ಅಧಿಕಾರಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ

ಗುರುಗ್ರಾಮ್‌ನಲ್ಲಿ ಕೆಲಸ ಮಾಡುತ್ತಿದ್ದ ನಿಕಿತಾ ಕೆಲಸ ಮುಗಿಸಿ ಅಂಬಾಲಾಕ್ಕೆ ಮರಳಿದ್ದಳು. ಅಂಬಾಲಾದಿಂದ ತನ್ನ ಊರಿಗೆ ತೆರಳಲು ಈ-ರಿಕ್ಷಾ ಹತ್ತಿದ್ದಳು. ಈ-ರಿಕ್ಷಾದಲ್ಲಿ ನಾಲ್ವರು ಪ್ರಯಾಣಿಕರಿದ್ದರು, ನಿಕಿತಾ ಬದಿಯಲ್ಲಿ ಕುಳಿತಿದ್ದಳು. ಈ ವೇಳೆ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಪೊಲೀಸ್ ಅಧಿಕಾರಿ ವೇಗವಾಗಿ ಬಂದು ಈ-ರಿಕ್ಷಾಗೆ ಡಿಕ್ಕಿ ಹೊಡೆದನು. ರಭಸದಿಂದ ನಿಕಿತಾ ರಸ್ತೆಗೆ ಬಿದ್ದಳು. ಆದರೆ ಪೊಲೀಸ್ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಹೋಗಿ ಯುವತಿಯ ಮೇಲಿಂದ ಹರಿದು ಹೋದನು. ತಕ್ಷಣವೇ ಗಂಭೀರ ಗಾಯಗೊಂಡ ನಿಕಿತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಈ ರಿಕ್ಷಾ ಚಾಲಕನು ನೀಡಿರುವ ಹೇಳಿಕೆಯ ಪ್ರಕಾರ, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ನಂತರ ನಿಲ್ಲಿಸಬಹುದಾಗಿತ್ತು. ಆದರೆ ಪೊಲೀಸ್ ಅಧಿಕಾರಿ ವೇಗವಾಗಿ ಮುಂದಕ್ಕೆ ಹೋದನು. ಇದರಿಂದ ಯುವತಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಚಾಲಕ ತಿಳಿಸಿದ್ದಾರೆ.

ಪೊಲೀಸ್ ಹಿಡಿದ ಸ್ಥಳೀಯರು ಅಂಬಾಲಾ ಸೇತುವೆ ಬಳಿ ನಡೆದ ಈ ಘಟನೆಯ ನಂತರ ಪೊಲೀಸ್ ಅಧಿಕಾರಿ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದನು. ಆದರೆ ಸ್ಥಳೀಯರು ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಿಕಿತಾಳನ್ನು ಸ್ಥಳೀಯರು ತಕ್ಷಣವೇ ಸಿಟಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ ಚಿಕಿತ್ಸೆಗೆ ಸಿಗುವ ಮೊದಲೇ ಆಕೆ ಮೃತಪಟ್ಟಿದ್ದಾಳೆ.

ಪೋಷಕರ ಆಕ್ರಂದನ, ಆಸ್ಪತ್ರೆಯಲ್ಲಿ ಪ್ರತಿಭಟನೆ ಸುದ್ದಿ ತಿಳಿಯುತ್ತಿದ್ದಂತೆ ನಿಕಿತಾಳ ಪೋಷಕರು ಆಸ್ಪತ್ರೆಗೆ ಧಾವಿಸಿದರು. ಮಗಳನ್ನು ಕಳೆದುಕೊಂಡ ನೋವಿನಲ್ಲಿ ಅವರು ಆಕ್ರಂದನ ಮಾಡುತ್ತಿದ್ದರು. ಆಸ್ಪತ್ರೆಯ ಮುಂದೆ ಕುಟುಂಬಸ್ಥರು ಮತ್ತು ಆಪ್ತರು ಭಾರಿ ಪ್ರತಿಭಟನೆ ನಡೆಸಿ ಪೊಲೀಸ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ಪ್ರಕರಣದ ತನಿಖೆ ಆರಂಭವಾಗಿದ್ದು, ಕುಡಿದು ವಾಹನ ಚಲಾಯಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version