ಹುಬ್ಬಳ್ಳಿ: ನಗರದ ಕೋಟಿಲಿಂಗೇಶ್ವರದಲ್ಲಿರುವ ಆರ್‌ಎಸ್‌ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಅ.18 ರಂದು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಕುಲ್ ರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತರು ಆರ್‌ಎಸ್‌ಎಸ್ ಸಮಾಜದಲ್ಲಿ ದ್ವೇಷವನ್ನು ಬಿತ್ತುತ್ತಿದೆ ಎಂದು ಆರೋಪಿಸಿ, ಸಂಘಟನೆಗೆ ಶಿಸ್ತು ಕ್ರಮ ಜರುಗಿಸಿದೆ. ನಂತರ ಪ್ರೀಯಾಣಕ್ ಖರ್ಗೆಗೆ ಹಲವಾರು ಬೆದರಿಕೆ ಕಾಲ್‌ಗಳು ಬರಲು ಆರಂಭವಾಯಿತು.ಇದಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರು, ಆರ್‌ಎಸ್‌ಎಸ್ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿದೆ, ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪೊಲೀಸರು ತಕ್ಷಣ ಗೋಕುಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಕೆಲವು ಕ್ಷಣಗಳಲ್ಲಿ ಉದ್ವಿಗ್ನಗೊಂಡಿತ್ತು.
ಘಟನಾ ಸ್ಥಳದಲ್ಲಿ ಪೊಲೀಸರು ಹೆಚ್ಚಿದ ಸುರಕ್ಷತಾ ವ್ಯವಸ್ಥೆ ಕೈಗೊಂಡಿದ್ದಾರೆ. ಕೋಟಿಲಿಂಗೇಶ್ವರ ಪ್ರದೇಶದಲ್ಲಿ ಪೊಲೀಸ್ ಪೇಟ್ರೋಲಿಂಗ್ ಹೆಚ್ಚಿಸಲಾಗಿದೆ ಮತ್ತು ಆರ್‌ಎಸ್‌ಎಸ್ ಕಚೇರಿ ಸುತ್ತಲೂ ಸುರಕ್ಷತಾ ಬಲವರ್ಧನೆ ಮಾಡಲಾಗಿದೆ.
ಪೊಲೀಸರು ವಶಕ್ಕೆ ಪಡೆದುಕೊಂಡ ಎಲ್ಲಾ 30 ಕಾರ್ಯಕರ್ತರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆ ನಡೆಸಿ, ಘಟನೆಗೆ ಕಾರಣರಾದವರ ವಿರುದ್ದ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.