• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 26, 2026 - 4:24 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Your paragraph text (40)

ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಕೈಬಿಟ್ಟಿದ್ದನ್ನು ಖಂಡಿಸಿ ಹಾಗೂ ಕ್ಷೇತ್ರದ ಜನರ ಹಿತರಕ್ಷಣೆಗಾಗಿ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ತಮ್ಮ ರಾಜೀನಾಮೆ ವಿಚಾರವಾಗಿ ಕೇಳಿಬರುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಜನರ ಸಮಸ್ಯೆಗಳ ಪರವಾಗಿ ಧ್ವನಿ ಎತ್ತುವುದು ತಮ್ಮ ಮೊದಲ ಕರ್ತವ್ಯ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯಶವಂತರಾಯಗೌಡ ಪಾಟೀಲ್, ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಹಂತ ಹಂತವಾಗಿ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ. ನಾಲ್ಕನೇ ಹಂತದಲ್ಲಿ 188 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಾಗಲೂ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳು ಪಟ್ಟಿಯಲ್ಲಿ ಇರಲಿಲ್ಲ ಎಂದು ಹೇಳಿದರು.

RelatedPosts

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!

ADVERTISEMENT
ADVERTISEMENT

ವಿಜಯಪುರ ಜಿಲ್ಲೆಯ ಒಟ್ಟು 13 ತಾಲೂಕುಗಳ ಪೈಕಿ 11 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಆದರೆ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಕೈಬಿಡಲಾಗಿತ್ತು. ಇದರಿಂದ ಕ್ಷೇತ್ರದ ರೈತರು ಮತ್ತು ಜನರಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ತಾವು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾಗಿ ಶಾಸಕ ವಿವರಿಸಿದರು.

“ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುವುದು ನನ್ನ ಧರ್ಮ. ಸರ್ಕಾರಕ್ಕೆ ಸಮಸ್ಯೆಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡುವುದು ಕೆಲವೊಮ್ಮೆ ತಡವಾಗಬಹುದು. ಕೆಲವೊಮ್ಮೆ ಪತ್ರದ ಮೂಲಕ, ಕೆಲವೊಮ್ಮೆ ನೇರವಾಗಿ ಭೇಟಿಯಾಗಿ ಸರ್ಕಾರದ ಗಮನಕ್ಕೆ ವಿಷಯವನ್ನು ತರಬೇಕಾಗುತ್ತದೆ” ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆಯನ್ನು ಸರ್ಕಾರ ಹಂತ ಹಂತವಾಗಿ ಹೆಚ್ಚಿಸಿದೆ. ಒಟ್ಟು 217 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇದೀಗ ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳೂ ಈ ಪಟ್ಟಿಗೆ ಸೇರಿವೆ ಎಂದು ಯಶವಂತರಾಯಗೌಡ ಪಾಟೀಲ್ ತಿಳಿಸಿದರು. ಇಂಡಿ ಕ್ಷೇತ್ರವೂ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿರುವುದರಿಂದ ತಮ್ಮ ಪ್ರಮುಖ ಬೇಡಿಕೆ ಈಡೇರಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ರಾಜೀನಾಮೆ ನಿರ್ಧಾರವನ್ನು ಕೆಲವರು ವ್ಯಂಗ್ಯವಾಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಅಂತಹ ಟೀಕೆಗಳಿಗೆ ತಾವು ಹೆಚ್ಚಿನ ಮಹತ್ವ ನೀಡುವುದಿಲ್ಲ ಎಂದರು. “ನನ್ನ ಕ್ಷೇತ್ರದ ಜನರ ಸಮಸ್ಯೆಗೆ ಗಟ್ಟಿಯಾಗಿ ಧ್ವನಿ ಎತ್ತುವುದು ನನ್ನ ಮೊದಲ ಕರ್ತವ್ಯ. ನನ್ನ ಸ್ಥಾನದಲ್ಲಿ ಯಾರೇ ಶಾಸಕರಿದ್ದರೂ ಕ್ಷೇತ್ರಕ್ಕೆ ಅನ್ಯಾಯವಾಗಿದೆ ಎಂದು ಕಂಡುಬಂದರೆ ಇದೇ ರೀತಿಯ ನಿರ್ಧಾರ ಕೈಗೊಳ್ಳುತ್ತಿದ್ದರು” ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.

ಹಿಂದೆಯೂ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ತಾವು ರಾಜೀನಾಮೆ ನೀಡಿರಲಿಲ್ಲ ಎಂದು ಯಶವಂತರಾಯಗೌಡ ಸ್ಪಷ್ಟಪಡಿಸಿದರು. ನಾಯಕರು ನೀಡಿದ್ದ ಭರವಸೆಯಂತೆ ನಡೆದುಕೊಳ್ಳದ ಹಿನ್ನೆಲೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದೆ. ಬಳಿಕ ನಾಯಕರು ತಮ್ಮೊಂದಿಗೆ ಚರ್ಚಿಸಿ ಮನವೊಲಿಸಿದ ಹಿನ್ನೆಲೆ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾಗಿ ಅವರು ಹೇಳಿದರು.

ಇದೇ ವೇಳೆ ತಮ್ಮ ಕಾಂಗ್ರೆಸ್ ಪಕ್ಷದ ಬದ್ಧತೆಯ ಬಗ್ಗೆಯೂ ಯಶವಂತರಾಯಗೌಡ ಪಾಟೀಲ್ ಸ್ಪಷ್ಟನೆ ನೀಡಿದರು. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಕಾಂಗ್ರೆಸ್‌ನಲ್ಲೇ ಹುಟ್ಟಿ ಬೆಳೆದಿದ್ದು, ಪಕ್ಷವನ್ನು ಕಟ್ಟುವ ಕೆಲಸದಲ್ಲಿ ಭಾಗಿಯಾಗಿದ್ದೇನೆ. ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

“ನಾನು ಕಾಂಗ್ರೆಸ್ ಪಕ್ಷದಲ್ಲೇ ಹುಟ್ಟಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು. ಕ್ಷೇತ್ರದ ಜನರ ಸೇವೆಗಾಗಿ ಅಗತ್ಯವಿದ್ದರೆ ರಾಜಕೀಯ ನಿವೃತ್ತಿ ಪಡೆಯಲೂ ಸಿದ್ಧ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇನ್ನು ತಮ್ಮ ರಾಜೀನಾಮೆ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ ಅವರು ಮಾಡಿರುವ ಟೀಕೆಯ ಕುರಿತು ಪ್ರತಿಕ್ರಿಯಿಸಲು ಯಶವಂತರಾಯಗೌಡ ಪಾಟೀಲ್ ನಿರಾಕರಿಸಿದರು. ತಮ್ಮ ವಿರುದ್ಧದ ಟೀಕೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (47)

ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಮೃತಾ-ಖುಷಿ-ಅರ್ಚನಾ

by ಶಾಲಿನಿ ಕೆ. ಡಿ
September 26, 2026 - 5:25 pm
0

Your paragraph text (44)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 26, 2026 - 5:06 pm
0

Your paragraph text (41)

ಸೆಪ್ಟೆಂಬರ್‌‌ 28ರಂದು ಪವಿತ್ರಾ ಗೌಡ ಭವಿಷ್ಯಕ್ಕೆ ಕೋರ್ಟ್ ಕ್ಲೈಮ್ಯಾಕ್ಸ್

by ಶಾಲಿನಿ ಕೆ. ಡಿ
September 26, 2026 - 4:42 pm
0

Your paragraph text (40)

ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್

by ಶಾಲಿನಿ ಕೆ. ಡಿ
September 26, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (39)
    CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ
    September 26, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
  • Your paragraph text (35)
    ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
    September 26, 2026 | 0
  • Your paragraph text (30)
    AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!
    September 26, 2026 | 0
  • Untitled design 2026 09 26T114401.424
    ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version