ಒಳಮೀಸಲಾತಿ ವಿಷಯದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ!

ಒಂದು ವಾರದೊಳಗೆ ಆಯೋಗದ ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಕೆ: ಆಹಾರ ಸಚಿವ ಮುನಿಯಪ್ಪ

Film (49)

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಷಯದ ಕುರಿತು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಸಚಿವರೊಂದಿಗೆ ಸಭೆಯನ್ನು ನಡೆಸಿದರು.

ಇಂದಿನ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನ ಕುರಿತಾಗಿ ಚರ್ಚೆ ನಡೆಸಿದ್ದು ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಏಕಸದಸ್ಯ ಆಯೋಗವು ಮುಂದಿನ ಒಂದು ವಾರದೊಳಗೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು ವರದಿಯ ವಿಷಯಗಳ ಬಗ್ಗೆ ಗಮನಿಸಿ ನಂತರ ಮತೊಂದು ಸಭೆಯನ್ನು ಮುಖ್ಯಮಂತ್ರಿಗಳೊಂದಿಗೆ ನಡೆಸಿ ಈ ಒಳಮೀಸಲಾತಿ ಅನುಷ್ಠಾನ ಮಾಡಲು ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ನಮ್ಮ ಮೂಲ ಉದ್ದೇಶವೆ ಐಕ್ಯತಾ ಸಮಾವೇಶದಲ್ಲಿ ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು ಒಳಮೀಸಲಾತಿ ಅನುಷ್ಠಾನ ಕುರಿತು ಘೋಷಿಸಿದ್ದು ಅದರಂತೆಯೇ ನಮ್ಮ ಪಕ್ಷ ಹಾಗೂ ನಮ್ಮ ಸರ್ಕಾರ ಸುಪ್ರೀಂಕೋರ್ಟ್ ನ ಆದೇಶ ದಂತೆ ಈ ಒಳಮೀಸಲಾತಿಯನ್ನು ಜಾರಿಗೊಳಿಸುತ್ತದೆ ನಾವೆಲ್ಲರೂ ಸೇರಿ ಈ ಒಳಮೀಸಲಾತಿ ಅನುಷ್ಠಾನ ಜಾರಿಗೊಳಿಸಲು ಬದ್ದರಾಗಿದ್ದೇವೆ ಎಂದರು.

ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಹಾರ ಸಚಿವ ಕೆಹೆಚ್. ಮುನಿಯಪ್ಪ,ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ಅಬಕಾರಿ ಸಚಿವ ಆರ್.ಬಿ‌.ತಿಮ್ಮಾಪುರ,ಶಿವರಾಜ್ ತಂಗಡಗಿ, ಉಪಸ್ಥಿತರಿದ್ದರು.

Exit mobile version