ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

Untitled design 2026 06 12T171411.763

ಕಲಬುರಗಿ, (ಜೂನ್ 12) : ಪಾಠ ನಡೆಯುತ್ತಿದ್ದ ವೇಳೆ ತರಗತಿಯಲ್ಲೇ ಛಾವಣಿ ಕುಸಿದು ಬಿದ್ದಿದ್ದು, ಇದರ ಪರಿಣಾಮ ಐದು ಮಂದಿ ವಿದ್ಯಾರ್ಥಿನಿಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕಲಬುರಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭವಿಸಿದೆ. 

ಘಟನೆಯ ವೇಳೆ ವಿದ್ಯಾರ್ಥಿನಿಯರು ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗ, ಹಳೆಯದಾಗಿದ್ದ ಸಿಮೆಂಟ್ ಹಾಗೂ ಕಾಂಕ್ರೀಟ್ ಭಾಗಗಳು ಏಕಾಏಕಿ ಕುಸಿದು ಬಿದ್ದಿದೆ. ಇದರಿಂದ ವಿದ್ಯಾರ್ಥಿನಿಯರಾದ ಸೃಷ್ಟಿ, ಸ್ನೇಹಾ, ಶೀತಲ್, ಪೂಜಾ ಮತ್ತು ದಿವ್ಯಾ ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಲವರಿಗೆ ತಲೆಗೆ ಮತ್ತು ಬೆನ್ನಿಗೆ ಬಲವಾದ ಪೆಟ್ಟು ಬಿದ್ದಿದೆ.

ಘಟನೆ ಸಂಭವಿಸಿದ ತಕ್ಷಣವೇ ಕಾಲೇಜಿನ ಸಿಬ್ಬಂದಿ ಹಾಗೂ ಸ್ಥಳೀಯರು ಗಾಯಾಳು ವಿದ್ಯಾರ್ಥಿನಿಯರನ್ನು ತಕ್ಷಣ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ (ಜಿಮ್ಸ್) ಸಾಗಿಸಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರನ್ನು ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಕಾಲೇಜು ಆವರಣದಲ್ಲಿ ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ ಹಾಗೂ ಕಟ್ಟಡದ ಶಿಥಿಲ ಸ್ಥಿತಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನಿಖೆ ಆರಂಭಿಸಲಾಗಿದೆ. ಕಾಲೇಜು ಕಟ್ಟಡದ ಗುಣಮಟ್ಟ, ನಿರ್ವಹಣೆ ಮತ್ತು ಇತ್ತೀಚಿನ ದುರಸ್ತಿ ಕಾರ್ಯಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಘಟನೆಯ ಸಿಸಿಟಿವಿ ದೃಶ್ಯಗಳು ಕೂಡ ಲಭ್ಯವಾಗಿದ್ದು, ಛಾವಣಿ ಕುಸಿಯುವ ಕ್ಷಣದಲ್ಲಿ ವಿದ್ಯಾರ್ಥಿನಿಯರು ಭಯಭೀತರಾಗಿ ಓಡುತ್ತಿರುವ ದೃಶ್ಯಗಳು ದಾಖಲಾಗಿವೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ,

Exit mobile version