ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ

Untitled design 2026 04 09T152633.799

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನದ ಕುತೂಹಲಕ್ಕೆ ತೆರೆ ಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು (ಏಪ್ರಿಲ್ 9, 2026) ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದ ಒಟ್ಟಾರೆ ಉತ್ತೀರ್ಣತೆಯ ಪ್ರಮಾಣವನ್ನು ಸಾರ್ವಜನಿಕಗೊಳಿಸಿದ್ದಾರೆ.

ಐತಿಹಾಸಿಕ ಫಲಿತಾಂಶ

ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದ ಸರಾಸರಿ ಉತ್ತೀರ್ಣತೆಯ ಪ್ರಮಾಣ ಶೇ. 86% ರಷ್ಟಿದೆ. ಕಳೆದ ವರ್ಷದ ಶೇ. 73.45% ಕ್ಕೆ ಹೋಲಿಸಿದರೆ, ಇದು ಗಮನಾರ್ಹ ಪ್ರಗತಿಯಾಗಿದೆ. ಈ ಬಾರಿ ಸುಮಾರು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಫಲಿತಾಂಶದ ವಿವರವಾದ ಅಂಕಿಅಂಶಗಳನ್ನು ಮಂಡಳಿಯು ತನ್ನ ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ.

ಹೇಗೆ ಪರಿಶೀಲಿಸುವುದು

ವಿದ್ಯಾರ್ಥಿಗಳು ಈ ಕೆಳಗಿನ ಯಾವುದೇ ವಿಧಾನಗಳ ಮೂಲಕ ತಮ್ಮ ಫಲಿತಾಂಶವನ್ನು ನೋಡಬಹುದು.

  1. ಅಧಿಕೃತ ವೆಬ್ಸೈಟ್: karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ. ‘II PUC EXAM-1 RESULT 2026’ ಲಿಂಕ್‌ ಮೇಲೆ ಕ್ಲಿಕ್ ಮಾಡಿ. ನಿಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ.

  2. ಕರ್ನಾಟಕ ಒನ್ ಆಪ್: ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದು.

  3. ಡಿಜಿಲಾಕರ್: ಈ ಬಾರಿ ಮೊದಲ ಬಾರಿಗೆ, ವಿದ್ಯಾರ್ಥಿಗಳು ತಮ್ಮ ಅಧಿಕೃತ ಅಂಕಪಟ್ಟಿಗಳನ್ನು ಡಿಜಿಲಾಕರ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್ ಖಾತೆಗೆ ಲಾಗಿನ್ ಆಗಿ, ನಿಮ್ಮ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಡಿಜಿಟಲ್ ಅಂಕಪಟ್ಟಿಯನ್ನು ಪಡೆಯಬಹುದು.

  4. SMS/WhatsApp: ಪರೀಕ್ಷೆಗೆ ನೋಂದಾಯಿಸಿದ ಸಂದರ್ಭದಲ್ಲಿ ದಾಖಲಿಸಿದ ಮೊಬೈಲ್ ಸಂಖ್ಯೆಗಳಿಗೆ ಮಂಡಳಿಯು ಫಲಿತಾಂಶದ ಸಾರಾಂಶವನ್ನು SMS ಮತ್ತು WhatsApp ಮೂಲಕ ಕಳುಹಿಸುತ್ತದೆ.

Exit mobile version