ಮಾ.22ರಂದು ಕರ್ನಾಟಕ ಬಂದ್ ಫಿಕ್ಸ್

Befunky collage 2025 03 18t162244.325

ಮಾರ್ಚ್ 22ರಂದು ಕರ್ನಾಟಕದಾದ್ಯಂತ ಬಂದ್ ಫಿಕ್ಸ್ ಆಗಿದೆ. ಬೆಳಗಾವಿಯಲ್ಲಿ ಮರಾಠಿ ಪುಂಡರು ಕೆಎಸ್ಆರ್ಟಿಸಿ ಸಿಬ್ಬಂದಿಗಳ ಮೇಲೆ ನಡೆಸಿದ ಹಲ್ಲೆ ಮತ್ತು ಅವಹೇಳನಕರ ಘಟನೆಗಳಿಗೆ ಪ್ರತಿಭಟನೆಯಾಗಿ ಕನ್ನಡ ಪರ ಸಂಘಟನೆಗಳು ಈ ಬಂದ್‌‌‌‌ಗೆ ಕರೆ ನೀಡಿವೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಾರ್ಚ್22 ರಂದು ಅಖಂಡ ಕರ್ನಾಟಕ ಬಂದ್ ಮಾಡಲು ತೀರ್ಮಾನವಾಗಿದೆ.

ಬಂದ್‌‌‌ಗೆ ಕಾರಣ ಮತ್ತು ಬೇಡಿಕೆಗಳು

ಕರ್ನಾಟಕದ ಸಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಮತ್ತು ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು. ಅಷ್ಟೇ ಅಲ್ಲದೆ, ಹಲ್ಲೆಯನ್ನೂ ಸಹ ನಡೆಸಿದ್ದರು. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಸರ್ಕಾರದ ಮೇಲೆ ಒತ್ತಡ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ.

ಬಂದ್​ಗೆ KSRTC, ಬಿಎಂಟಿಸಿ ನೌಕರರ ಸಂಘ ಬೆಂಬಲ

ಇನ್ನು ಮಾರ್ಚ್​ 22ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಸಾರಿಗೆ ನೌಕರರು ಸಹ ಬೆಂಬಲಿಸಿದೆ. ಈ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್​ಗೆ KSRTC, ಬಿಎಂಟಿಸಿ ನೌಕರರ ಸಂಘದಿಂದ ಬೆಂಬಲ ಇದೆ. ಕಳೆದ ತಿಂಗಳು ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಖಂಡಿಸಿದ ಕನ್ನಡಪರ ಹೋರಾಟಗಾರರಿಗೆ ಸದಾ ಚಿರಋಣಿ. ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರು ನಿಮ್ಮ ಜೊತೆ ಇದ್ದೇವೆ. ಕರ್ನಾಟಕ ಬಂದ್​​ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ಆದ್ರೆ ಮೆಟ್ರೋ ಬಂದ್​ ಕುರಿತು ಯಾವುದೇ ಪ್ರಕಟಣೆ ಹೊರಡಿಸಿಲ್ಲ. ಆದರೂ ಸಹ ಅಂದು ಏನಾದರೂ ಪ್ರಯಾಣ ಮಾಡುವ ಪ್ಲ್ಯಾನ್ ಇದ್ದರೆ ಯಾವುದಕ್ಕೂ ಮುಂದೂಡುವುದು ಒಳಿತು.

Exit mobile version