• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನರ ಆಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2025 - 5:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
11 2025 04 28t172417.727

ಬೆಳಗಾವಿ, ಏ.28 : “ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

RelatedPosts

RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್

ಕ್ರೇನ್‌ ರಿಪೇರಿ ಮಾಡುವ ಲ್ಯಾಡರ್ ಕುಸಿತ: ಐವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ

ಹೆಣ್ಣು ಮಕ್ಕಳನ್ನು ರಾತ್ರಿ ವೇಳೆ ಹೊರಗೆ ಬಿಡಬಾರದು: ಮಮತಾ ಬ್ಯಾನರ್ಜಿ ಶಾಕಿಂಗ್‌ ಹೇಳಿಕೆ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಮನವಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ADVERTISEMENT
ADVERTISEMENT

“ನಮ್ಮ ದೇಶದ ಸಂವಿಧಾನ, ಏಕತೆ, ಸಮಗ್ರತೆ, ಶಾಂತಿ ರಕ್ಷಿಸಿಕೊಂಡು ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರನ್ನು ಕಾಪಾಡಲು ನಾವು ಈ ಹೋರಾಟ ಮಾಡುತ್ತಿದ್ದೇವೆ. ಬೆಳಗಾವಿ ಪುಣ್ಯಭೂಮಿ. ಇತ್ತೀಚೆಗಷ್ಟೇ ನಾವು ಮಹಾತ್ಮಾ ಗಾಂಧಿ ಅವರ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಆಚರಿಸಿದ್ದೆವು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಇದೇ ಮೈದಾನದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಮಾಡಿದ್ದೆವು” ಎಂದು ತಿಳಿಸಿದರು.

“ಗಾಂಧಿಜಿ ಅವರು ಇದೇ ಭೂಮಿಯಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ ದೇಶಕ್ಕೆ ಸ್ವತಂತ್ರ ತಂದುಕೊಟ್ಟರು. ನಮ್ಮ ಎಲ್ಲಾ ನಾಯಕರು ಸೇರಿ ಇಲ್ಲಿನ ಗಾಂಧಿ ಬಾವಿಯಲ್ಲಿ ನೀರು ತೆಗೆದುಕೊಂಡು ರಸ್ತೆ ಸ್ವಚ್ಛ ಮಾಡಿ ನಮ್ಮ ರಾಜ್ಯದ ರಕ್ಷಣೆ ಮಾಡುವ ಹೋರಾಟ ಪ್ರಾರಂಭಿಸಿದೆವು. ನಮ್ಮ ಜನರ ಧ್ವನಿ ಕೇಳಲು ಹೋರಾಟ ಮಾಡಿದೆವು. ನಂತರ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಚಿಕ್ಕೋಡಿಯಲ್ಲಿ ಮೊದಲ ಗ್ಯಾರಂಟಿಯಾಗಿ ಗೃಹಜ್ಯೋತಿಯನ್ನು ಘೋಷಿಸಿದೆವು. ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ, ಬೆಲೆ ಗಗನಕ್ಕೇರುತ್ತಿದೆ, ಆದಾಯ ಪಾತಾಳಕ್ಕೆ ಕುಸಿಯುತ್ತಿದೆ ಎಂದು ಗ್ಯಾರಂಟಿ ಯೋಜನೆ ಜಾರಿಗೆ ತಂದೆವು” ಎಂದು ಹೇಳಿದರು.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಹಾಲಿನ ಬೆಲೆ ಹೆಚ್ಚಾಗಿದೆ ಎಂದು ಬಿಜೆಪಿಯವರು ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಜನಾಕ್ರೋಶ ಆರಂಭಿಸಿದ ದಿನವೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಬೆಲೆ ಏರಿಸಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿದಾಗ ಎಲ್ಲಾ ಪದಾರ್ಥಗಳ ಬೆಲೆ ಕೂಡ ಸಹಜವಾಗಿ ಏರಿಕೆಯಾಗುತ್ತದೆ. ರೈತರಿಗೆ ನೆರವಾಗಬೇಕು ಎಂದು ಹಾಲಿನ ಬೆಲೆಯನ್ನು 4 ರೂಪಾಯಿ ಏರಿಕೆ ಮಾಡಿದರೆ, ಬಿಜೆಪಿಯವರು ಪ್ರತಿಭಟನೆ ಮಾಡಿ ತಮ್ಮ ರೈತ ವಿರೋಧಿ ಮನಸ್ಥಿತಿ ಪ್ರದರ್ಶಿಸುತ್ತಿದ್ದಾರೆ. ಬಿಜೆಪಿಯವರು ತಮ್ಮ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು.

“ನಮ್ಮ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಾಗಿ ಬಜೆಟ್ ನಲ್ಲಿ ರೂ.52 ಸಾವಿರ ಕೋಟಿ ಮೀಸಲಿಟ್ಟಾಗ ಸರ್ಕಾರ ದಿವಾಳಿಯಾಗಲಿದೆ ಎಂದು ಹೇಳುತ್ತಿದ್ದರು. ನಮ್ಮ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ರೂ.500 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ದೇವನಹಳ್ಳಿಯಲ್ಲಿ ಸುಮಾರು ರೂ.500 ಕೋಟಿ ರೂ., ಪಿರಿಯಾಪಟ್ಟಣದಲ್ಲಿ ರೂ,500 ಕೋಟಿ ರೂ., ಬೀದರ್ ಜಿಲ್ಲೆಯಲ್ಲಿ 2025 ಕೋಟಿ ರೂ. ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ” ಎಂದರು.

“ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಮಹಿಳೆಯರು ಮಾಂಗಲ್ಯ ಮಾಡಿಸಿಕೊಳ್ಳುವ ಚಿನ್ನದ ಬೆಲೆ 28 ಸಾವಿರ ರೂ. ಇತ್ತು. ಇಂದು ಅದು 1 ಲಕ್ಷಕ್ಕೆ ಏರಿಕೆಯಾಗಿದೆ. ಬೆಳ್ಳಿ 43 ಸಾವಿರದಿಂದ 94 ಸಾವಿರಕ್ಕೆ ಏರಿಕೆಯಾಗಿದೆ. ಡಾಲರ್ ಮೊತ್ತ 59 ರೂ. ನಿಂದ ಇಂದಬ 90 ರೂ. ಸನಿಹಕ್ಕೆ ಬಂದು ನಿಂತಿದೆ. ಸೀಮೆಂಟ್ 268ರಿಂದ 410ಕ್ಕೆ ಏರಿಕೆ, ಕಬ್ಬಿಣ 39 ಸಾವಿರದಿಂದ 73 ಸಾವಿರಕ್ಕೆ ಏರಿಕೆಯಾಗಿದೆ. ಸಕ್ಕರೆ 30ರಿಂದ 60ಕ್ಕೆ, ಅಕ್ಕಿ 30ರಿಂದ 60ಕ್ಕೆ, ಅಡುಗೆ ಎಣ್ಣೆ 60ರಿಂದ 200 ರೂ. ಆಗಿದೆ. ಈ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಾವು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.

“ನೀವೆಲ್ಲರೂ ಆಶೀರ್ವಾದ ಮಾಡಿ ನಮಗೆ ಅಧಿಕಾರ ಕೊಟ್ಟಿದ್ದೀರಿ. ಅಧಿಕಾರ ನಶ್ವರ, ನಮ್ಮ ಸರ್ಕಾರದ ಸಾಧನೆ ಅಜರಾಮರ, ಮತದಾರನೇ ನಮ್ಮ ಪಾಲಿನ ಈಶ್ವರ. ನೀವು ಕೊಟ್ಟ ಶಕ್ತಿಗೆ ನಿಮ್ಮ ಈಣ ತೀರಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ಬಿಜೆಪಿಯ ಕೇಂದ್ರ ಸರ್ಕಾರ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಿದೆ. ಅಂಬೋಡ್ಕರ್ ಅವರ ಹೆಸರನ್ನು ಉಳಿಸಬೇಕು, ಸಂವಿಧಾನ ಕಾಪಾಡಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಈ ಸಂವಿಧಾನದ ಮೂಲಕ ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡಿಕೊಂಡು ಬರಲಾಗುತ್ತಿದೆ” ಎಂದು ತಿಳಿಸಿದರು.

“ಸಾಧನೆ ಇಲ್ಲದೆ ಸತ್ತರೆ, ಸಾವಿಗೆ ಅಪಮಾನ. ಆದರ್ಶವಿಲ್ಲದೆ ಬದುಕಿದರೆ, ಬದುಕಿಗೆ ಅಪಮಾನ ಎಂದು ವಿವೇಕಾನಂದ ಅಂವರು ಹೇಳಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ಆದರ್ಶ ಇಟ್ಟುಕೊಂಡು ನಿಮ್ಮ ಬದುಕನ್ನು ಹಸನು ಮಾಡಲು ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಲಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಆದರೆ ನಂತರ ನಡೆದ ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಎಲ್ಲಾ ರಾಜ್ಯಗಳ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅವರೇ ಘೋಷಣೆ ಮಾಡುತ್ತಿದ್ದಾರೆ. ಆಮೂಲಕ ನಮ್ಮ ಯೋಜನೆಗಳು ಕರ್ನಾಟಕ ಮಾಡೆಲ್ ಆಗಿ ದೇಶಕ್ಕೆ ಮಾದರಿಯಾಗಿವೆ” ಎಂದರು.

“ಸರ್ವರಿಗೂ ಸಮಬಾಳು, ಸಮಪಾಲಿನ ತತ್ವದ ಮೇಲೆ ನಮ್ಮ ಸರ್ಕಾರ ಕೆಲಸ ಮಾಡಿಕೊಂಡು ಬಂದಿದೆ. ಜನರಿಗಾಗಿ ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಕಲುಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 1000 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದೇವೆ. ಲೋಕೋಪಯೋಗಿ ಇಲಾಖೆಯಿಂದ ಪ್ರತಿ ಕ್ಷೇತ್ರದಲ್ಲಿ 25-30 ಕೋಟಿಯಷ್ಟು ರಸ್ತೆ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗಿದೆ. ನೀರಾವರಿ ಇಲಾಖೆಯಗೆ 22 ಸಾವಿರ ಕೋಟಿ ನೀಡಲಾಗಿದ್ದು, ಈ ಜಿಲೆಯಲ್ಲೇ 2 ಸಾವಿರ ಕೋಟಿಯಷ್ಟು ನೀರಾವರಿ ಯೋಜನೆ ಹಮ್ಮಿಕೊಂಡಿದ್ದೇವೆ. ಇದೆಲ್ಲವೂ ಅಭಿವೃದ್ಧಿ ಕೆಲಸವಲ್ಲವೇ? ಬಿಜೆಪಿ ಸರ್ಕಾರ ಇಂತಹ ಕಾರ್ಯಕ್ರಮ ಮಾಡಿದ್ದರೇ? ಅವರು ಅಧಿಕಾರದಲ್ಲಿದ್ದಾಗ ಯಾವುದೇ ಸಾಕ್ಷಿ ಗುಡ್ಡೆ ಬಿಟ್ಟಿಲ್ಲ” ಎಂದರು.

“ನಮ್ಮ ದಕ್ಷ ಆಡಳಿತದಲ್ಲಿ ಇಡೀ ವಿಶ್ವದ ಅನೇಕ ಉದ್ಯಮಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿವೆ. ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ವಿಶ್ವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಬೆಳಗಾವಿ, ಧಾರವಾಡ, ವಿಜಯಪುರದಂತಹ ಎರಡನೇ ಹಂತದ ನಗರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಒಪ್ಪಂದಗಳಾಗಿವೆ. ಒಟ್ಟು 10 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆ ಹರಿದು ಬರಲಿದೆ. ಹೆಚ್.ಕೆ ಪಾಟೀಲ್ ಅವರು ಪಾರಂಪರಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿ ಪ್ರವಾಸೋದ್ಯಕ್ಕೆ ಆದ್ಯತೆ ನೀಡುತ್ತಿದ್ದಾರೆ. ಸವದತ್ತಿಯ ಯಲ್ಲಮ್ಮ ದೇವಿ ಕ್ಷೇತ್ರದ ಅಭಿವೃದ್ಧಿಗೆ ಯೋಜನೆ ರೂಪಿಲಾಗಿದೆ. ಪ್ರತಿ ಇಲಾಖೆಯಲ್ಲೂ ನಮ್ಮ ಸರ್ಕಾರ ಸಾಕ್ಷಿಗುಡ್ಡೆ ನಿರ್ಮಿಸುತ್ತಿದೆ. ಕುಡಿಯುವ ನೀರಿನ ಪೂರೈಕೆಗೆ ಇಡೀ ರಾಜ್ಯದಲ್ಲಿ ಕೆರೆ ತುಂಬಿಸುವ ಕೆಲಸಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಆಮೂಲಕ ರೈತರ ಬದುಕು ಹಸನ ಮಾಡಲು ಮುಂದಾಗಿದೆ. 2028ರ ಒಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ ಚಿಕ್ಕಬಳ್ಳಾಪುರ ಹಾಗೂ ಕೋಲಾರಕ್ಕೆ ನೀರು ಪೂರೈಸುವ ಗುರಿ ಇಟ್ಟುಕೊಂಡಿದ್ದೇವೆ” ಎಂದು ಹೇಳಿದರು.

“ಬಿಜೆಪಿ ಸರ್ಕಾರ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತದೆ. ನಾವು ಬದುಕಿನ ಮೇಲೆ ಕೆಲಸ ಮಾಡುತ್ತಿದ್ದೇವೆ. ಜನರ ಬದುಕು ಕಾಪಾಡಲು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿದೆ. ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ನೀವು ಬಿಜೆಪಿಯವವರಿಗೆ ಈ ಬೆಲೆ ಏರಿಕೆ ಬಗ್ಗೆ ಪ್ರಶ್ನೆ ಮಾಡಬೇಕು.

ಭಯೋತ್ಪಾದಕ ದಾಳಿಯಿಂದ ನಮ್ಮ ಸಹೋದರರು ಮೃತರಾಗಿರುವುದರಿಂದ ದೇಶದೆಲ್ಲೆಡೆ ನಮಗೆ ನೋವಾಗಿದೆ. ದೇಶದ ಐಕ್ಯತೆ, ಸಮಗ್ರತೆ ಕಾಪಾಡಲು ನಮ್ಮ ಪಕ್ಷ ಕೇಂದ್ರ ಸರ್ಕಾರದ ಬೆಂಬಲಕ್ಕೆ ನೀಡಿದೆ. ನಮ್ಮ ಸರ್ಕಾರ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಮುಖ್ಯಮಂತ್ರಿಗಳು 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲಾ ವರ್ಗದವರನ್ನು ಒಟ್ಟಾಗಿ ತೆಗೆದುಕೊಂಡು ಮುಂದೆ ಸಾಗುತ್ತಿದೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (24)

ಗಾಯಕಿ ಕೇಟಿ ಪೆರ್ರಿ ಜೊತೆ ಕೆನಡಾ ಮಾಜಿ ಪ್ರಧಾನಿ ಟ್ರುಡೊ ಡೇಟಿಂಗ್‌? ಫೋಟೋ ವೈರಲ್

by ಶಾಲಿನಿ ಕೆ. ಡಿ
October 12, 2025 - 8:32 pm
0

Untitled design (11)

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

by ಶಾಲಿನಿ ಕೆ. ಡಿ
October 12, 2025 - 7:59 pm
0

Untitled design (10)

RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್

by ಶಾಲಿನಿ ಕೆ. ಡಿ
October 12, 2025 - 7:29 pm
0

Untitled design (9)

ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ

by ಶಾಲಿನಿ ಕೆ. ಡಿ
October 12, 2025 - 7:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (10)
    RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್
    October 12, 2025 | 0
  • Untitled design (7)
    ಕ್ರೇನ್‌ ರಿಪೇರಿ ಮಾಡುವ ಲ್ಯಾಡರ್ ಕುಸಿತ: ಐವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ
    October 12, 2025 | 0
  • Untitled design (5)
    ಹೆಣ್ಣು ಮಕ್ಕಳನ್ನು ರಾತ್ರಿ ವೇಳೆ ಹೊರಗೆ ಬಿಡಬಾರದು: ಮಮತಾ ಬ್ಯಾನರ್ಜಿ ಶಾಕಿಂಗ್‌ ಹೇಳಿಕೆ
    October 12, 2025 | 0
  • Untitled design (4)
    ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಮನವಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ
    October 12, 2025 | 0
  • Web
    ಬಿಗ್‌ಬಾಸ್ ಕೇವಲ ಒಂದು ಶೋ ಅಲ್ಲ, ಆರದ ಜ್ಯೋತಿ, ಎಂದೂ ನಿಲ್ಲುವುದಿಲ್ಲ: ಕಿಚ್ಚ ಸುದೀಪ್‌
    October 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version