ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಅನುದಾನ ಮೀಸಲಿಡಲಾಗಿದೆ. ಯೋಜನೆಯಡಿ ರಾಜ್ಯದ ಲಕ್ಷಾಂತರ ಗೃಹಿಣಿಯರಿಗೆ ಪ್ರತಿ ತಿಂಗಳು ₹2,000 ನೇರವಾಗಿ ಜಮಾ ಆಗುತ್ತಿದ್ದು, ಈ ಹೆಚ್ಚಿನ ಹಂಚಿಕೆಯಿಂದ ಯೋಜನೆಯನ್ನು ಇನ್ನಷ್ಟು ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ. ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯ ವೇಳೆ ತಿಳಿಸಿದರು. ಜೊತೆಗೆ ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಘೋಷಣೆಗಳು :
- ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ
- ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೆಜಿಎಫ್ ಪ್ರದೇಶಗಳಲ್ಲಿನ ESI ಆಸ್ಪತ್ರೆಗಳ ಉನ್ನತೀಕರಣ
ಇತರ ಮಹತ್ವದ ಘೋಷಣೆಗಳು :
- ವಿಜಯಪುರದಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ನಿರ್ಮಾಣ ಘಟಕ ಸ್ಥಾಪನೆ
- ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕ ದೇಶದ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಿಎಂ ಹೇಳಿದರು.
- ಒಕ್ಕೂಟ ಸರ್ಕಾರವು ರಾಜ್ಯಗಳತ್ತ ಇನ್ನಷ್ಟು ಸಂವೇದನಾಶೀಲವಾಗಿ ವರ್ತಿಸಬೇಕು ಎಂದು ಅಭಿಪ್ರಾಯಪಟ್ಟರು.
ಒಟ್ಟಾರೆಯಾಗಿ, 2026-27ರ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳು, ಆರೋಗ್ಯ, ಮೂಲಸೌಕರ್ಯ ಹಾಗೂ ಕೃಷಿ ಕ್ಷೇತ್ರಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಜನಕಲ್ಯಾಣಕ್ಕೆ ಆದ್ಯತೆ ನೀಡಿರುವುದು ಗಮನಾರ್ಹವಾಗಿದೆ.
