• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜಾತಿ ಗಣತಿ ಮರು ಸಮೀಕ್ಷೆ: ಇಂದು ವಿಶೇಷ ಸಚಿವ ಸಂಪುಟ ಸಭೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2025 - 9:45 am
in ಕರ್ನಾಟಕ
0 0
0
Untitled design 2025 06 12t093815.378

RelatedPosts

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದಲ್ಲಿ ಜಾತಿ ಗಣತಿಯನ್ನು ಮತ್ತೊಮ್ಮೆ ಸಮೀಕ್ಷೆಗೆ ಒಳಪಡಿಸುವ ಕುರಿತಾದ ಚರ್ಚೆಗಳು ತೀವ್ರಗೊಂಡಿವೆ. ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಜಾತಿ ಗಣತಿಗೆ ತಡೆಯೊಡ್ಡಿರುವ ಹಿನ್ನೆಲೆಯಲ್ಲಿ, ಗುರುವಾರ ನಡೆಯಲಿರುವ ವಿಶೇಷ ಸಂಪುಟ ಸಭೆಯ ಮೇಲೆ ಎಲ್ಲರ ಕಣ್ಣಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆಯಲ್ಲಿ ವರಿಷ್ಠರ ಸೂಚನೆಯ ಆಧಾರದಲ್ಲಿ ಮರು ಸಮೀಕ್ಷೆಗೆ ಒಪ್ಪಿಗೆ ನೀಡುತ್ತಾರೆಯೇ ಇಲ್ಲವೇ ತಡೆಗೆ ಕಾರಣವಾದ ವಿಷಯಗಳ ಬಗ್ಗೆ ಸಂಪುಟ ಸದಸ್ಯರಿಗೆ ವಿವರಣೆ ನೀಡುತ್ತಾರೆಯೇ ಎಂಬ ಕುತೂಹಲ ಮೂಡಿದೆ.

ಜಾತಿ ಗಣತಿಯ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಈ ವಿಶೇಷ ಸಂಪುಟ ಸಭೆಯನ್ನು ಆಯೋಜಿಸಿದ್ದರು. ಆದರೆ, ಕಾಂಗ್ರೆಸ್ ವರಿಷ್ಠರ ತಡೆಯಿಂದಾಗಿ ಈ ಸಭೆಯ ಉದ್ದೇಶವೇ ಬದಲಾಗಿರುವ ಸಾಧ್ಯತೆ ಇದೆ. ಇಂದಿನ ಸಭೆಯಲ್ಲಿ ಕಾಂತರಾಜು ಆಯೋಗದ ವರದಿಯನ್ನು ಒಪ್ಪಿಕೊಂಡು, ಹೊಸ ಸಮೀಕ್ಷೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಈ ಮರು ಸಮೀಕ್ಷೆಯನ್ನು ಮೂರು ತಿಂಗಳ ಒಳಗೆ ಪೂರ್ಣಗೊಳಿಸಲು ಗಡುವು ವಿಧಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಡಿ.ಕೆ. ಶಿವಕುಮಾರ್ ಹೊರತುಪಡಿಸಿ, ಸಂಪುಟದ ಉಳಿದ ಸದಸ್ಯರಿಗೆ ವರಿಷ್ಠರ ನಿರ್ದೇಶನದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರು ಈ ಬಗ್ಗೆ ಸಂಪುಟ ಸಭೆಯಲ್ಲಿ ವಿವರಣೆ ನೀಡುವ ಸಾಧ್ಯತೆ ಇದೆ. “ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ಮರು ಸಮೀಕ್ಷೆ ನಡೆಸುವುದು ನನ್ನ ವೈಯಕ್ತಿಕ ನಿರ್ಧಾರವಲ್ಲ. ಇದು ವರಿಷ್ಠರ ತೀರ್ಮಾನ. ಕಾಂತರಾಜು ಆಯೋಗದ ವರದಿಯನ್ನು ನಾವು ಒಪ್ಪಿಕೊಂಡಿದ್ದೇವೆ. ಹೀಗಾಗಿ, ಕಡಿಮೆ ಅವಧಿಯಲ್ಲಿ ಮತ್ತೊಮ್ಮೆ ಗಣತಿ ನಡೆಸಲು ವರಿಷ್ಠರು ಸೂಚಿಸಿದ್ದಾರೆ,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು, “ವಾಸ್ತವ ನೆಲೆಗಟ್ಟಿನಲ್ಲಿ ವೈಜ್ಞಾನಿಕವಾಗಿ ಜಾತಿ ಗಣತಿಯನ್ನು ಮರು ಸಮೀಕ್ಷೆ ನಡೆಸಬೇಕೆಂದು ಕರ್ನಾಟಕ ಸರಕಾರಕ್ಕೆ ಸೂಚಿಸಲಾಗಿದೆ. ಹಿಂದಿನ ಜಾತಿ ಸಮೀಕ್ಷೆ 10 ವರ್ಷಗಳ ಹಿಂದೆ ನಡೆದಿತ್ತು. ಈಗ ಸಾಕಷ್ಟು ಬದಲಾವಣೆಗಳಾಗಿವೆ. ಹಲವು ಸಮುದಾಯಗಳು ಒಬಿಸಿಯಲ್ಲಿ ಸೇರಿಕೊಂಡಿವೆ. ಈ ಎಲ್ಲವನ್ನೂ ಜಾತಿ ಸಮೀಕ್ಷೆ ಒಳಗೊಳ್ಳಬೇಕು,” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಕಾಂಗ್ರೆಸ್ ಸರಕಾರ ತಾನೇ ನಡೆಸಿದ ಜಾತಿ ಸಮೀಕ್ಷೆಯ ವರದಿಯನ್ನು ಕಸದ ಬುಟ್ಟಿಗೆ ಎಸೆದಿದೆ. ರಾಜ್ಯದ ಜನತೆಯ ತೆರಿಗೆ ಹಣವಾದ 165 ಕೋಟಿ ರೂಪಾಯಿಗಳನ್ನು ವ್ಯರ್ಥಗೊಳಿಸಲಾಗಿದೆ. ಇದಕ್ಕೆ ಸಿದ್ದರಾಮಯ್ಯ ಅವರು ಜನತೆಯ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು,” ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. “ಕೇವಲ ದತ್ತಾಂಶದ ಗೊಂದಲವೇ ಇದಕ್ಕೆ ಕಾರಣವಿರಲಾರದು. ದತ್ತಾಂಶದ ಬಗ್ಗೆ ಅನುಮಾನವಿದ್ದರೆ, ಕಾಂಗ್ರೆಸ್ ಇಷ್ಟು ವರ್ಷ ಸುಮ್ಮನಿರುವ ಅಗತ್ಯವಿರಲಿಲ್ಲ. ಈ ಬಗ್ಗೆ ಸಿದ್ದರಾಮಯ್ಯ ಜನತೆಗೆ ಸ್ಪಷ್ಟನೆ ನೀಡಬೇಕು,” ಎಂದು ಬಿಜೆಪಿ ಒತ್ತಾಯಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (3)

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

by ಕವಿತಾ
September 22, 2026 - 7:56 pm
0

Your paragraph text (2)

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ; ಆಂಧ್ರಕ್ಕೆ ರೆಡ್ ಅಲರ್ಟ್!

by ಕವಿತಾ
September 22, 2026 - 7:40 pm
0

Your paragraph text (1)

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

by ಕವಿತಾ
September 22, 2026 - 7:27 pm
0

Your paragraph text

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

by ಕವಿತಾ
September 22, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (1)
    ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್
    September 22, 2026 | 0
  • Untitled design (16)
    ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ
    September 22, 2026 | 0
  • Untitled design (13)
    ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ
    September 22, 2026 | 0
  • Untitled design (8)
    ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version