• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 3, 2026 - 9:02 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 03T210156.937

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳು, ಯುವಕರು, ಉದ್ಯೋಗಾಕಾಂಕ್ಷಿಗಳು ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ನೀಡುವುದಾಗಿ ಘೋಷಿಸಿದರು. ಪದವಿ ಕಾಲೇಜು ಹಂತದವರೆಗಿನ ಗಂಡು ಮತ್ತು ಹೆಣ್ಣು ವಿದ್ಯಾರ್ಥಿಗಳಿಗೂ ಈ ಯೋಜನೆ ಅನ್ವಯವಾಗಲಿದ್ದು, ಉಚಿತ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿದರು.

RelatedPosts

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ದರ ಏರಿಕೆ: ಮಕ್ಕಳಿಗೆ ಮೊಟ್ಟೆ ಕೊಡಲು ಶಿಕ್ಷಕರ ಜೇಬಿಗೆ ಕತ್ತರಿ

ಫ್ರೀಡಂ ಪಾರ್ಕ್ ಬಿಟ್ಟು ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ

ADVERTISEMENT
ADVERTISEMENT

“ಈ ಮುಖ್ಯಮಂತ್ರಿ ಕುರ್ಚಿ ನನ್ನದಲ್ಲ, ಇದು ರಾಜ್ಯದ ಜನರದ್ದು. ಜನರ ಸೇವೆ ಮಾಡುವ ಜವಾಬ್ದಾರಿಯನ್ನು ರಾಜ್ಯದ ಜನರು ನಮಗೆ ನೀಡಿದ್ದಾರೆ. ಅವರ ನಿರೀಕ್ಷೆಗಳನ್ನು ಈಡೇರಿಸುವುದೇ ನಮ್ಮ ಗುರಿ” ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ ಅವರು, ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಸುಮಾರು 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಘೋಷಿಸಿದರು. ಉದ್ಯೋಗಾಕಾಂಕ್ಷಿಗಳಿಗೆ ಇದು ದೊಡ್ಡ ಅವಕಾಶವಾಗಲಿದೆ ಎಂದು ಹೇಳಿದರು.

ಯುವಕರ ಸಬಲೀಕರಣ ಮತ್ತು ಗ್ರಾಮೀಣ ಪ್ರತಿಭೆಗಳ ಬೆಳವಣಿಗೆಗಾಗಿ ರಾಜ್ಯದ ಪ್ರತಿಯೊಂದು ಪಂಚಾಯಿತಿಯಲ್ಲೂ “ಭಾರತ್‌ ಜೋಡೋ ಯುವಕರ ಸಂಘ” ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿ, ನಾಯಕತ್ವ ಗುಣಗಳ ಬೆಳೆಸುವಿಕೆ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಸರ್ಕಾರ, ನಗರದ ರಸ್ತೆ ಹಾಗೂ ಸಂಚಾರ ವ್ಯವಸ್ಥೆ ಸುಧಾರಣೆಗೆ 2,000 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಿದೆ. ನಗರದಲ್ಲಿ ವರ್ಷಗಳಿಂದ ಎದುರಾಗುತ್ತಿರುವ ರಸ್ತೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.

ಇದಲ್ಲದೆ, ಭೂಗ್ಯಾರಂಟಿ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸುವ ನಿರ್ಧಾರವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಮೂರು ಅಂತಸ್ತಿನವರೆಗಿನ ಕಟ್ಟಡಗಳಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಕಡ್ಡಾಯತೆಯಿಂದ ವಿನಾಯಿತಿ ನೀಡುವ ನಿರ್ಧಾರವೂ ತೆಗೆದುಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, “ಇದು ಹೊಸ ದಿನ, ಹೊಸ ಜವಾಬ್ದಾರಿಗಳ ಆರಂಭ. ರಾಜ್ಯದ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯುವಜನರ ಅಭಿವೃದ್ಧಿಗಾಗಿ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುವುದು. ಜನರ ಸಮಸ್ಯೆಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಉತ್ತಮ ಕರ್ನಾಟಕ ನಿರ್ಮಾಣಕ್ಕಾಗಿ ನಮ್ಮ ಸಂಪುಟ ಒಟ್ಟಾಗಿ ಕೆಲಸ ಮಾಡಲಿದೆ” ಎಂದು ಹೇಳಿದರು.

“ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳಬೇಕು ಎಂಬುದು ನನ್ನ ನಂಬಿಕೆ. ರಾಜ್ಯದ ಅಭಿವೃದ್ಧಿಗಾಗಿ ದೊಡ್ಡ ಸವಾಲುಗಳನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ. ಇದು ಜನರ ಸರ್ಕಾರವಾಗಿದ್ದು, ಜನಸೇವೆಯೇ ನಮ್ಮ ಪ್ರಮುಖ ಸಂಕಲ್ಪ” ಎಂದು ಮುಖ್ಯಮಂತ್ರಿ ಹೇಳಿದರು.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌, 56 ಸಾವಿರ ಸರ್ಕಾರಿ ಉದ್ಯೋಗ ಭರ್ತಿ, ಭಾರತ್‌ ಜೋಡೋ ಯುವಕರ ಸಂಘ ಸ್ಥಾಪನೆ ಸೇರಿದಂತೆ ಹಲವು ಜನಪರ ಘೋಷಣೆಗಳನ್ನು ಮಾಡುವ ಮೂಲಕ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ತನ್ನ ಆಡಳಿತದ ದಿಕ್ಕನ್ನು ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1600 900 (10)

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

by ಕವಿತಾ
July 23, 2026 - 11:37 am
0

1600 900 (9)

ಮಿಡ್‌ನೈಟ್‌ ಫುಟ್‌ಬಾಲ್ ಫೀವರ್‌: ಟಿವಿ ಮುಂದೆ ಕುಳಿತು ನೂಡಲ್ಸ್, ಚಿಪ್ಸ್ ಖಾಲಿ ಮಾಡಿದ ಭಾರತೀಯರು!

by ಕವಿತಾ
July 23, 2026 - 11:14 am
0

1600 900 (8)

ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ

by ಕವಿತಾ
July 23, 2026 - 10:40 am
0

1600 900 (7)

ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಜೋಶಿ ಆರೋಪ

by ವೀರೇಶ ದಾನಿ
July 23, 2026 - 10:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version