• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮ್ಮ ಧ್ವನಿ, ಸಂಸ್ಕೃತಿ, ಭಾಷೆ, ಸಂಪನ್ಮೂಲ ರಕ್ಷಣೆಗೆ ಒಗ್ಗಟ್ಟಾಗಿ ಹೋರಾಡೋಣ: ಡಿ.ಕೆ. ಶಿವಕುಮಾರ್ ಕರೆ

ಕ್ಷೇತ್ರ ಮರುವಿಂಗಡಣೆ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರವಲ್ಲ, ಮಾನವ ಅಭಿವೃದ್ಧಿ, ತೆರಿಗೆ ಕೊಡುಗೆ, ಆಡಳಿತ, ಜನಸಂಖ್ಯೆ ನಿಯಂತ್ರಣದ ಮಾನದಂಡಗಳ ಮೇಲೆ ಆಗಬೇಕು, ಕೇಂದ್ರ ಸರ್ಕಾರ ನಮ್ಮ ಸಂಪನ್ಮೂಲ ಲೂಟಿ ಮಾಡುತ್ತಿದೆ. ರೈಲ್ವೇ, ಬ್ಯಾಂಕ್, ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ಕೇಂದ್ರ ಸಂಸ್ಥೆಗಳಲ್ಲಿ ಪ್ರಾದೇಶಿಕ ಭಾಷೆಗೆ ಆದ್ಯತೆ ಸಿಗಬೇಕು.

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 22, 2025 - 8:57 pm
in Flash News, ಕರ್ನಾಟಕ
0 0
0
Untitled design 2025 03 22t205330.513

“ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ ರಾಜಕೀಯ ಧ್ವನಿ ಹತ್ತಿಕ್ಕಲಾಗುತ್ತದೆ. ಹೀಗಾಗಿ ಕೇವಲ ಜನಸಂಖ್ಯೆ ಮಾತ್ರವಲ್ಲದೇ, ಮಾನವ ಅಭಿವೃದ್ಧಿ, ತೆರಿಗೆ ಕೊಡುಗೆ, ಆಡಳಿತ, ಜನಸಂಖ್ಯೆ ನಿಯಂತ್ರಣದ ಸೂಚ್ಯಂಕಗಳ ಮಾನದಂಡಗಳ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಆಗಬೇಕು. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡುವುದಾದರೆ, 1971ರ ಜನಗಣತಿ ಆಧಾರದ ಮೇಲೆ ಮರುವಿಂಗಡಣೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.

ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರೋಧಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಚೆನ್ನೈನಲ್ಲಿ ಶನಿವಾರ ನಡೆದ ಮೊದಲ ಜೆಎಸಿ (Joint Action Committee) ಸಭೆಯಲ್ಲಿ ಕರ್ನಾಟಕದ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದರು. ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರವಾಗಿ ಕರ್ನಾಟಕದ ನಿಲುವನ್ನು ತಿಳಿಸಿದರು.

RelatedPosts

IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

ADVERTISEMENT
ADVERTISEMENT

“ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಂಪೂರ್ಣ ಬೆಂಬಲದೊಂದಿಗೆ ಈ ಸಭೆಯಲ್ಲಿ ಮಾತನಾಡುತ್ತಿದ್ದೇನೆ. ಅನಾರೋಗ್ಯದ ಕಾರಣ ಅವರು ಈ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಆದರೆ ದೇಶದ ಒಕೂಟ ವ್ಯವಸ್ಥೆಯ ರಕ್ಷಣೆಯ ಈ ಐತಿಹಾಸಿಕ ಹೋರಾಟಕ್ಕೆ ಅವರ ಬೆಂಬಲವಿದೆ.

ಸ್ನೇಹಿತರೆ, ದೇಶದ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವೆಲ್ಲರೂ ಸೇರಿದ್ದೇವೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವಾಗಿರುವ ಒಕ್ಕೂಟ ವ್ಯವಸ್ಥೆಯೇ ಇಂದು ಅಪಾಯಕ್ಕೆ ಸಿಲುಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಹಂತ ಹಂತವಾಗಿ ಇಂದು ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ದಬ್ಬಾಳಿಕೆಗೆ ತಲೆಬಾಗುವ ಅಥವಾ ಅದನ್ನು ವಿರೋಧಿಸಿ ಮೇಲೇಳುವ ಆಯ್ಕೆ ಮಾತ್ರ ನಮ್ಮ ಮುಂದೆ ಇದೆ. ಹೀಗಾಗಿ ಕರ್ನಾಟಕ, ತಮಿಳುನಾಡು ಸೇರಿದಂತೆ ಈ ಸಭೆಯಲ್ಲಿ ಭಾಗವಹಿಸಿರುವ ಎಲ್ಲಾ ಪ್ರಗತಿಪರ ರಾಜ್ಯಗಳು ಪ್ರತಿರೋಧವನ್ನು ಆಯ್ಕೆ ಮಾಡಿಕೊಂಡಿದ್ದೇವೆ” ಎಂದು ತಿಳಿಸಿದರು.

“ಕೇವಲ ಜನಸಂಖ್ಯೆಯನ್ನೇ ಮಾನದಂಡವಾಗಿಟ್ಟುಕೊಂಡು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲಾಗುತ್ತಿದೆ. ಇದು ದಕ್ಷಿಣ ರಾಜ್ಯಗಳ ಮೇಲೆ ನಡೆಸಲಾಗುತ್ತಿರುವ ರಾಜಕೀಯ ದಬ್ಬಾಳಿಕೆ. ಜನಸಂಖ್ಯೆ ನಿಯಂತ್ರಣ, ಅಕ್ಷರಸ್ಥರ ಸಂಖ್ಯೆ ಏರಿಕೆ ಹಾಗೂ ಮಹಿಳೆಯರ ಸಬಲೀಕರಣದಲ್ಲಿ ಯಶಸ್ಸು ಸಾಧಿಸಿರುವ ನಮ್ಮ ರಾಜ್ಯಗಳನ್ನು ಕುಗ್ಗಿಸುವ ಪ್ರಯತ್ನ ಕೇಂದ್ರ ಮಾಡುತ್ತಿದೆ. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಇತರೆ ದಕ್ಷಿಣ ಭಾರತದ ರಾಜ್ಯಗಳು ಭಾರತದ ಪ್ರಗತಿಯಲ್ಲಿ ಗಣನೀಯ ಕೊಡುಗೆ ನೀಡಿವೆ. ಈ ರಾಜ್ಯಗಳು ಶಿಕ್ಷಣ, ಆರೋಗ್ಯ ಸುಧಾರಣೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿವೆ. ಆದರೂ ಕೇಂದ್ರ ಸರ್ಕಾರ ನಮ್ಮ ಸಂಸತ್ ಪ್ರತಿನಿಧಿತ್ವವನ್ನು ಕಡಿತಗೊಳಿಸಲು ಮುಂದಾಗಿದೆ. ಆಮೂಲಕ ರಾಷ್ಟ್ರ ಮಟ್ಟದಲ್ಲಿ ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ. ಇದು ಕೇವಲ ಅನ್ಯಾಯ ಮಾತ್ರವಲ್ಲ, ಇದೊಂದು ದ್ರೋಹ. ಉತ್ತಮ ಆಡಳಿತ ಹಾಗೂ ಪ್ರಗತಿ ಸಾಧಿಸಿರುವ ರಾಜ್ಯಗಳಿಗೆ ಮಾನ್ಯತೆ ಸಿಗಬೇಕೇ ಹೊರತು ಕಡೆಗಣಿಸಬಾರದು” ಎಂದು ಆಗ್ರಹಿಸಿದರು.

ನಮ್ಮ ಸಂಪನ್ಮೂಲ ಲೂಟಿ ಮಾಡುತ್ತಿರುವ ಕೇಂದ್ರ ಸರ್ಕಾರ:

“ಕರ್ನಾಟಕ ರಾಜ್ಯವು ಕೇಂದ್ರ ಸರ್ಕಾರದ ತೆರಿಗೆ ಆದಾಯದಲ್ಲಿ ವಾರ್ಷಿಕವಾಗಿ 4 ಲಕ್ಷ ಕೋಟಿ ಕೊಡುಗೆ ನೀಡುತ್ತಿದೆ. ಆದರೂ ಕೇಂದ್ರದಿಂದ ನಮಗೆ ಸಿಗುತ್ತಿರುವುದೇನು? ತೆರಿಗೆ ಹಂಚಿಕೆಯಲ್ಲಿ ಕೇವಲ 45 ಸಾವಿರ ಕೋಟಿ ಹಾಗೂ ಅನುದಾನದ ಮೂಲಕ 15 ಸಾವಿರ ಕೋಟಿ ಮಾತ್ರ. ಕರ್ನಾಟಕ ರಾಜ್ಯ ನೀಡುವ ಪ್ರತಿ ಒಂದು ರೂಪಾಯಿಗೆ ಕರ್ನಾಟಕ ರಾಜ್ಯಕ್ಕೆ ಮರಳಿ ಸಿಗುತ್ತಿರುವುದು ಕೇವಲ 13 ಪೈಸೆ ಮಾತ್ರ. ಇದು ಕೇವಲ ಆರ್ಥಿಕ ಅನ್ಯಾಯ ಮಾತ್ರವಲ್ಲ, ನಮ್ಮ ಸಂಪನ್ಮೂಲದ ವ್ಯವಸ್ಥಿತ ಲೂಟಿ” ಎಂದರು.

“ಕರ್ನಾಟಕದ ಜನಸಂಖ್ಯೆಯು ದೇಶದ ಜನಸಂಖ್ಯೆಯ ಶೇ.5ರಷ್ಟು ಮಾತ್ರ ಇದೆ. ಆದರೆ ದೇಶದ ಜಿಡಿಪಿಯಲ್ಲಿ ಶೇ.8.4ರಷ್ಟು ಕೊಡುಗೆ ನೀಡುತ್ತಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಜಿಎಸ್ ಟಿ ಪಾವತಿಸುತ್ತಿರುವ ರಾಜ್ಯ ಕರ್ನಾಟಕ. ಇನ್ನು ದಕ್ಷಿಣದ ರಾಜ್ಯಗಳು ಭಾರತದ ಜಿಡಿಪಿಗೆ ಶೇ.35ರಷ್ಟು ಕೊಡುಗೆ ನೀಡುತ್ತಿದ್ದು, ಈ ರಾಜ್ಯಗಳನ್ನು ಉತ್ತರ ಭಾರತದ ರಾಜ್ಯಗಳ ಎಟಿಎಂ ಆಗಿ ನೋಡಲಾಗುತ್ತಿದೆ. ಆದರೂ ಕೇಂದ್ರ ಸರ್ಕಾರದ ಅನುದಾನದಲ್ಲಿ ನಮಗೆ ಕಡಿಮೆ ಪಾಲು ದೊರೆಯುತ್ತಿದೆ. 15ನೇ ಹಣಕಾಸು ಆಯೋಗವು ಜನಸಂಖ್ಯೆ ಆಧಾರದ ಮೇಲೆ ಅನುದಾನ ಹಂಚಿಕೆ ಮಾಡಿರುವ ಕಾರಣಕ್ಕೆ ಕರ್ನಾಟಕ ರಾಜ್ಯಕ್ಕೆ ನಷ್ಟವಾಗಿದೆ. ಈಗ ಪ್ರಸ್ತಾಪಿಸಲಾಗಿರುವ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮೂಲಕ ನಮ್ಮ ರಾಜಕೀಯ ಧ್ವನಿಯನ್ನು ಹತ್ತಿಕ್ಕಲಾಗುವುದು. ಜತೆಗೆ ಸಂಸತ್ತಿನಲ್ಲಿ ನಮ್ಮ ಹಕ್ಕನ್ನು ಪ್ರತಿಪಾದಿಸಲು ಅವಕಾಶವನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ” ಎಂದರು.

ಪ್ರಾದೇಶಿಕ ಭಾಷೆಗಳು ನಾಗರೀಕತೆಯ ಜೀವಾಳ:

“ಇದು ಕೇವಲ ಸಂಖ್ಯೆಗಳಿಗಾಗಿ ನಡೆಯುತ್ತಿರುವ ಹೋರಾಟವಲ್ಲ. ಇದು ನಮ್ಮ ಘನತೆ, ಸಂಸ್ಕೃತಿ ಹಾಗೂ ನಮ್ಮ ಪರಂಪರೆ ವಿಚಾರ. ಕರ್ನಾಟಕವು ಬಸವಣ್ಣನವರ ವಚನಗಳಿಂದ ಕುವೆಂಪು ಅವರವರೆಗೂ 1,500 ವರ್ಷಗಳ ಸಾಹಿತ್ಯದ ಪರಂಪರೆ ಹೊಂದಿದೆ. ತಮಿಳುನಾಡಿನ ಸಂಗಮ ಕಾವ್ಯ, ಕೇರಳದ ಸಾಂಪ್ರದಾಯಿಕ ಕಲೆಗಳು ಹಾಗೂ ಆಂಧ್ರ ಪ್ರದೇಶದ ತೆಲುಗು ಪರಂಪರೆ ಕೇವಲ ಪ್ರಾದೇಶಿಕ ಸಂಪತ್ತಲ್ಲ. ಇವೆಲ್ಲವೂ ಭಾರತದ ಆತ್ಮಗಳಾಗಿವೆ. ಆದರೂ ಕೇಂದ್ರ ಸರ್ಕಾರ ಒಂದು ದೇಶ, ಒಂದು ಭಾಷೆ ನೀತಿಯನ್ನು ಹೇರಲು ಮುಂದಾಗಿದೆ. ಆಮೂಲಕ ಭಾಷಾ ವೈವಿದ್ಯವನ್ನು ನಿರ್ಮೂಲನೆ ಮಾಡಲು ಹೊರಟಿದೆ.

ರೈಲ್ವೆ ಚಿಹ್ನೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ವರೆಗೂ ಹಿಂದಿ ಹೇರಿಕೆ ಮಾಡುತ್ತಿರುವುದು ನಮ್ಮ ಭಾಷಾ ಹಾಗೂ ಸಾಂಸ್ಕೃತಿಕ ಏಕತೆಗೆ ಧಕ್ಕೆ ತಂದಿದೆ. ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಇತರ ಪ್ರಾದೇಶಿಕ ಭಾಷೆಗಳು ಕೇವಲ ಆಡುಭಾಷೆ ಮಾತ್ರವಲ್ಲ, ಇವು ನಮ್ಮ ನಾಗರೀಕತೆಯ ಜೀವವಾಗಿದೆ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಹೇಳಿದರು.

ನಮ್ಮ ದೇಶದ ಶಕ್ತಿ ವೈವಿಧ್ಯತೆಯೇ ಹೊರತು ಏಕರೂಪತೆಯಲ್ಲ:

“ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಭಾಷಾ ಹಕ್ಕಿಗೆ ಹೋರಾಟ ಮಾಡಿದ ನಮ್ಮ ರಾಜ್ಯಗಳ ಮಹಾನ್ ನಾಯಕರಾದ ಪೆರಿಯಾರ್, ಅಂಬೇಡ್ಕರ್, ಬಸವಣ್ಣ, ಅಣ್ಣಾದುರೈ ಹಾಗೂ ನಾರಾಯಣ ಗುರುಗಳಿಂದ ನಾವು ಪ್ರೇರಣೆ ಪಡೆಯಬೇಕು. ಅವರ ಪರಂಪರೆಯು ವೈವಿದ್ಯತೆ ನಮ್ಮ ದೇಶದ ಶಕ್ತಿಯಾಗಿದ್ದು, ಏಕರೂಪತೆಯಲ್ಲ ಎಂಬುದನ್ನು ಸ್ಮರಿಸುತ್ತದೆ.

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಕ್ಷೇತ್ರಗಳಿಗೆ ಸೀಮಿತವಲ್ಲ, ಇದು ಭಾರತದ ಒಕ್ಕೂಟ ವ್ಯವಸ್ಥೆಯ ಭವಿಷ್ಯದ ವಿಚಾರ. ಕೇಂದ್ರ ಸರ್ಕಾರ ಈ ಅವೈಜ್ಞಾನಿಕ ಸೂತ್ರದ ಮೇಲೆ ಕ್ಷೇತ್ರ ಮರು ವಿಂಗಡಣೆಗೆ ಮುಂದಾದರೆ, ಒಕ್ಕೂಟ ವ್ಯವವಸ್ಥೆಯ ಸಮತೋಲನವನ್ನೇ ಅಲುಗಾಡಿಸುತ್ತದೆ. ಅಲ್ಲದೆ ಜನಸಂಖ್ಯೆ ನಿಯಂತ್ರಣ ಮಾಡುವಲ್ಲಿ ವಿಫಲವಾದ ರಾಜ್ಯಗಳಿಗೆ ಹೆಚ್ಚಿನ ಶಕ್ತಿ ದೊರೆತಂತಾಗುತ್ತದೆ. ಆಮೂಲಕ ದಕ್ಷಿಣ ರಾಜ್ಯಗಳನ್ನು ಮೂಲೆಗುಂಪು ಮಾಡುವುದಷ್ಟೇ ಅಲ್ಲ, ನಮ್ಮ ಸಂವಿಧಾನದ ಮುಖ್ಯ ಉದ್ದೇಶ ಸಹಕಾರ ಒಕ್ಕೂಟ ವ್ಯವಸ್ಥೆಯ ತತ್ವಕ್ಕೆ ವಿರುದ್ಧವಾಗಿದೆ.

ಈ ಹಿನ್ನೆಲೆಯಲ್ಲಿ ನೂತನ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಪ್ರಸ್ತಾವವನ್ನು ಕರ್ನಾಟಕ ವಿಧಾನಸಭೆಯು ಅವಿರೋಧವಾಗಿ ತಿರಸ್ಕರಿಸುವ ನಿರ್ಣಯ ಹೊರಡಿಸಿದೆ. ಅಲ್ಲದೆ 1971ರ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ಪುನರ್ ವಿಂಗಡಣೆ ನಡೆಯಬೇಕು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣ ಹಾಗೂ ಸುಸ್ಥಿರ ಅಭಿವೃದ್ಧಿ ಮಾಡಿರುವ ರಾಜ್ಯಗಳಿಗೆ ಸೂಕ್ತ ಮಾನ್ಯತೆ ಸಿಕ್ಕಂತಾಗುತ್ತದೆ” ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T233727.882

IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 5, 2026 - 11:18 pm
0

Untitled design 2026 04 05T230017.605

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

by ಶಾಲಿನಿ ಕೆ. ಡಿ
April 5, 2026 - 11:01 pm
0

Untitled design 2026 04 05T223402.952

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

by ಶಾಲಿನಿ ಕೆ. ಡಿ
April 5, 2026 - 10:40 pm
0

Untitled design 2026 04 05T221847.109

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
April 5, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T233727.882
    IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು
    April 5, 2026 | 0
  • Untitled design 2026 04 05T230017.605
    80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ
    April 5, 2026 | 0
  • Untitled design 2026 04 05T223402.952
    ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ
    April 5, 2026 | 0
  • Untitled design 2026 04 05T221847.109
    IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ
    April 5, 2026 | 0
  • Untitled design 2026 04 05T213046.589
    ಐಪಿಎಲ್ 2026: CSKಗೆ ಆರಂಭಿಕ ಆಘಾತ..! RCB ಗೆಲುವು ಫಿಕ್ಸ್..?
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version