ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ

BeFunky collage (15)

ಸುಡುವ ಬಿಸಿಲಿನ ಬೇಗೆಯಿಂದ ಈಗಾಗಲೇ ಕಂಗಾಲಾಗಿರುವ ಕರ್ನಾಟಕದ ಜನರಿಗೆ ಮತ್ತೊಂದು ದೊಡ್ಡ ಶಾಕ್ ನೀಡಿದೆ ಗ್ಯಾರಂಟಿ ಸರ್ಕಾರ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಿಸುವ ಅಧಿಕೃತ ಆದೇಶ ಹೊರಡಿಸಿದೆ.

ಈ ಹೆಚ್ಚಳವು ಟ್ರೂ ಅಪ್ ಚಾರ್ಜ್ (True-up Charges) ಎಂಬ ಹೆಸರಿನಲ್ಲಿ ಜಾರಿಗೆ ಬರಲಿದ್ದು, ಮೇ 1, 2026ರಿಂದ ಗ್ರಾಹಕರ ವಿದ್ಯುತ್ ಬಿಲ್‌ನಲ್ಲಿ ಅನ್ವಯವಾಗಲಿದೆ.

ದರ ಏರಿಕೆಗೆ ಕಾರಣ ಏನು?

ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ, ಈ ಏರಿಕೆಯು 2024-25ರ ಆರ್ಥಿಕ ವರ್ಷದಲ್ಲಿ ಬೆಸ್ಕಾಂಗೆ ಉಂಟಾದ ಆದಾಯದ ಕೊರತೆಯನ್ನು ಸರಿದೂಗಿಸುವ ಉದ್ದೇಶದಿಂದ ಮಾಡಲಾಗಿದೆ.

ಈ ಬೃಹತ್ ಕೊರತೆಯನ್ನು ತುಂಬಿಕೊಳ್ಳಲು ಎಲ್ಲಾ ಎಸ್ಕಾಂಗಳು (ESCOMs) ದರ ಏರಿಕೆ ಪ್ರಸ್ತಾವನೆ ಸಲ್ಲಿಸಿದ್ದವು. KERC ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಅನುಮತಿ ನೀಡಿದೆ.

ಯಾವಾಗಿನಿಂದ ಜಾರಿಗೆ ಬರುತ್ತದೆ?

ಗ್ರಾಹಕರ ಮೇಲಿನ ಪರಿಣಾಮ :

KERC ಆದೇಶದಲ್ಲಿ, ಬೆಸ್ಕಾಂ ಮತ್ತು ಇತರ ಎಸ್ಕಾಂಗಳು ಈ ವಸೂಲಾತಿಯನ್ನು ಪ್ರತ್ಯೇಕ ಲೆಕ್ಕಪತ್ರದಲ್ಲಿ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಈಗಾಗಲೇ ಹಣಕಾಸಿನ ಒತ್ತಡದಲ್ಲಿರುವ ಜನಸಾಮಾನ್ಯರಿಗೆ ಈ ವಿದ್ಯುತ್ ದರ ಏರಿಕೆ “ಗಾಯದ ಮೇಲೆ ಬರೆ ಎಳೆದಂತೆ” ಆಗಿದೆ ಎಂದು ವಿರೋಧ ಪಕ್ಷಗಳು ತೀವ್ರ ಟೀಕೆ ಮಾಡುತ್ತಿವೆ.

Exit mobile version