• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಬಕಾರಿ ಇಲಾಖೆಯಲ್ಲಿ ಹಗರಣದ ಆರೋಪ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ-ಸಚಿವ ತಿಮ್ಮಾಪುರ

admin by admin
February 4, 2026 - 11:09 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 04T110724.495

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರದ ಆರೋಪ ಸಚಿವ ಆರ್.ಬಿ. ತಿಮ್ಮಾಪುರ ಅವರ ಕುರ್ಚಿಯನ್ನು ಅಲುಗಾಡಿಸುತ್ತಿದೆ. ಆದರೆ, ಈ ಎಲ್ಲ ಆರೋಪಗಳನ್ನು ತಳ್ಳಿಹಾಕಿರುವ ಸಚಿವರು, ಯಾವುದೇ ಕಾರಣಕ್ಕೂ ತಾವು ಅಧಿಕಾರದಿಂದ ಕೆಳಗಿಳಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ತಿಮ್ಮಾಪುರ ನೀಡಿದ ಸವಾಲು ಏನು?

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತಿಮ್ಮಾಪುರ, ಅಬಕಾರಿ ಇಲಾಖೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿಲ್ಲ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಯಾರೋ ನೀಡಿದ ಸುಳ್ಳು ಮಾಹಿತಿಯನ್ನು ನಂಬಿಕೊಂಡು ಗದ್ದಲ ಮಾಡುತ್ತಿದ್ದಾರೆ. ರಾಜಕೀಯ ಪ್ರಚಾರಕ್ಕಾಗಿ ಈ ರೀತಿ ಧರಣಿ ನಡೆಸುತ್ತಿದ್ದಾರೆ. ಅವರಿಗೆ ರಾತ್ರಿ ಯಾಕೆ ನಿದ್ದೆ ಬರುತ್ತಿಲ್ಲವೋ ನನಗೆ ಗೊತ್ತಿಲ್ಲ. ವಿರೋಧ ಪಕ್ಷದವರು ರಾಜಕಾರಣ ಮಾಡಲಿ, ಆದರೆ ಸುಳ್ಳು ಆರೋಪಗಳಿಗೆ ಹೆದರಿ ನಾನು ರಾಜೀನಾಮೆ ಕೊಡುವ ಪ್ರಸಕ್ತಿಯೇ ಇಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.

RelatedPosts

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

ADVERTISEMENT
ADVERTISEMENT
ವಿಧಾನಸಭೆಯಲ್ಲಿ ಜಾಗಟೆ, ತಮ್ಮಟೆ ಸದ್ದು

ಸಚಿವರ ಈ ಹೇಳಿಕೆಯು ವಿಪಕ್ಷಗಳ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಸಚಿವ ತಿಮ್ಮಾಪುರ ಮತ್ತು ಅವರ ಮಗನ ವಿರುದ್ಧ ಲಂಚದ ಆರೋಪ ಮಾಡಿರುವ ಬಿಜೆಪಿ-ಜೆಡಿಎಸ್ ಶಾಸಕರು, ವಿಧಾನಸಭೆಯ ಒಳಗೆ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಸದನದಲ್ಲಿ ಜಾಗಟೆ ಮತ್ತು ತಮಟೆ ಬಾರಿಸುವ ಮೂಲಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಧರಣಿ ನಡೆಯಿತು.

ಏನಿದು ಹಗರಣದ ಆರೋಪ ?

ಮೂಲಗಳ ಪ್ರಕಾರ, ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಮದ್ಯದ ಅಂಗಡಿಗಳ ಲೈಸೆನ್ಸ್ ನವೀಕರಣಕ್ಕಾಗಿ ದೊಡ್ಡ ಮಟ್ಟದ ಲಂಚ ವಸೂಲಿ ಮಾಡಲಾಗಿದೆ ಎಂಬುದು ವಿಪಕ್ಷಗಳ ಪ್ರಮುಖ ಆರೋಪ. ಈ ಹಗರಣದಲ್ಲಿ ಸಚಿವರ ಕುಟುಂಬ ಸದಸ್ಯರ ಹಸ್ತಕ್ಷೇಪವೂ ಇದೆ ಎಂದು ಆರ್. ಅಶೋಕ್ ಆರೋಪಿಸಿದ್ದು, ನೈತಿಕ ಹೊಣೆ ಹೊತ್ತು ತಿಮ್ಮಾಪುರ ಅವರು ತಕ್ಷಣವೇ ಮಂತ್ರಿ ಸ್ಥಾನ ತ್ಯಜಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ಭಾರಿ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಚಿವರ ರಾಜೀನಾಮೆಗೆ ಪಟ್ಟು ಹಿಡಿದು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಅವರು ಅಬಕಾರಿ ಇಲಾಖೆಯಲ್ಲಿ ನಡೆದಿರುವ ವರ್ಗಾವಣೆ ದಂಧೆ ಮತ್ತು ಹಣ ವಸೂಲಿಯ ಹಗರಣವನ್ನು ಪ್ರಸ್ತಾಪಿಸಿದರು. ಅಬಕಾರಿ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ. ಈ ಹಣವನ್ನು ಅನ್ಯ ರಾಜ್ಯಗಳ ಚುನಾವಣೆಗೆ ಬಳಸಲಾಗುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಗಂಭೀರ ಆರೋಪ ಮಾಡಿದರು. ಈ ವೇಳೆ ಸಚಿವ ತಿಮ್ಮಾಪುರ ಪರವಾಗಿ ಆಡಳಿತ ಪಕ್ಷದ ಇತರ ಸಚಿವರು ಸಮರ್ಥನೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ಸದನದಲ್ಲಿ ಭಾರಿ ಗದ್ದಲವಾಗಿದೆ.

ಸ್ಪೀಕರ್ ಆದೇಶದ ನಡುವೆಯೂ ಪ್ರತಿಭಟನೆ

ಗದ್ದಲ ಮತ್ತು ಘೋಷಣೆಗಳು ಮಿತಿಮೀರಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಕಲಾಪವನ್ನು ಕೆಲಕಾಲ ಮುಂದೂಡಿದರು. ಆದರೆ, ಕಲಾಪ ಮುಂದೂಡಿದ ನಂತರವೂ ವಿರೋಧ ಪಕ್ಷದ ಸದಸ್ಯರು ಸದನದಿಂದ ಹೊರನಡೆಯಲು ನಿರಾಕರಿಸಿದರು. ಸಚಿವ ತಿಮ್ಮಾಪುರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಗಿಳಿದು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದರು.

ಸಚಿವ ತಿಮ್ಮಾಪುರ ಅವರ ಭ್ರಷ್ಟಾಚಾರಕ್ಕೆ ಸಾಕ್ಷ್ಯಗಳಿದ್ದರೂ ಸರ್ಕಾರ ಅವರನ್ನು ರಕ್ಷಿಸುತ್ತಿದೆ. ಹಗರಣದ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಗುಡುಗಿದ್ದಾರೆ. ರಾತ್ರಿಯಿಡೀ ಸದನದಲ್ಲೇ ಉಳಿದು ಪ್ರತಿಭಟನೆ ನಡೆಸುತ್ತಿರುವ ಶಾಸಕರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T193350.070
    ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ
    May 25, 2026 | 0
  • Untitled design 2026 05 25T184236.160
    ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್
    May 25, 2026 | 0
  • Untitled design 2026 05 25T182816.136
    SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!
    May 25, 2026 | 0
  • Untitled design 2026 05 25T180550.119
    ‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version