ವಾಟರ್ ಬಾಟಲ್ ನೀರು ಸುರಕ್ಷಿತವೇ? ಆಹಾರ ಇಲಾಖೆಯ ಆಘಾತಕಾರಿ ವರದಿ ಬಹಿರಂಗ

Siddu stalin kcr (32)

ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಕಾರಿ ಹಾಗೂ ಕ್ಯಾನ್ಸರ್‌ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಕೆಲ ದಿನಗಳ ಹಿಂದೆ ಇಡ್ಲಿ ತಯಾರಿಕೆಯಲ್ಲಿ ಬಳಸುತ್ತಿರುವ ಪ್ಲಾಸ್ಟಿಕ್ ಪೇಪರ್ ಬ್ಯಾನ್ ಮಾಡಿ ಆಹಾರ ಇಲಾಖೆ ಘೋಷಿಸಿತ್ತು.
YouTube video player

ಕಳಪೆ ಹಾಗೂ ಕಲಬೆರಕೆಯುಕ್ತ ಆಹಾರದ ಮಾರಾಟದ ವಿರುದ್ಧ ಕರ್ನಾಟಕ ರಾಜ್ಯ ಆಹಾರ ಇಲಾಖೆಯ ಕಾರ್ಯಾಚರಣೆ ಮುಂದುವರೆದಿದೆ. ಇದೀಗ ಹಲವು ಆಹಾರ ಕಂಪನಿಗಳು ಮಾರಾಟ ಮಾಡುತ್ತಿರುವ ವಾಟರ್ ಬಾಟಲ್‌ನಲ್ಲಿರುವ ನೀರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದು ಆಹಾರ ಇಲಾಖೆ ಪ್ರಯೋಗಾಲಯ ಪರೀಕ್ಷೆಯಿಂದ ತಿಳಿದುಬಂದಿದೆ.

ವಾಟರ್ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50 ರಷ್ಟು ಕಳಪೆ ಎಂದು ಆಹಾರ ಇಲಾಖೆಯು ಬಹಿರಂಗಪಡಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ ಇರುವದಿಲ್ಲ . ಸಾಕಷ್ಟು ಕಂಪನಿಗಳು ವಾಟರ್ ಬಾಟಲ್ ಅಸುರುಕ್ಷಿತ ಎಂದು ವರದಿ ತಿಳಿಸಿದೆ. ಜೊತೆಗೆ ಕೋವಾ ಕೂಡ ಕಲಬೆರಕೆ ಇಂದು ತಿಳಿಸಿದೆ.

ಈಗಾಗಲೇ ಪನ್ನೀರ್ ಮತ್ತು ಐಸ್ ಕ್ರೀಮ್ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿರುವ ಆಹಾರ ಇಲಾಖೆ ಇದೀಗ ಮತ್ತೊಂದು ಸುತ್ತಿನ ಕಾರ್ಯಾಚರಣೆ ಮುಂದುವರೆಸಿದೆ. ಬೆಂಗಳೂರಿನ ವಿವಿಧ ಕಡೆಗಳಿಂದ ಮಾದರಿಗಳನ್‌ನು ಸಂಗ್ರಹಿಸಲಾಗಿದ್ದ, ಪರೀಕ್ಷೆಗೆ ಒಳಪಡಿಸಲಾಗಿದೆ. ಪನ್ನೀರ್ ಹಾಗೂ ಐಸ್ ಕ್ರೀಮ್‌ಗಳಲ್ಲಿ ರಾಸಾಯನಿಕ ಬಳಕೆ ಆರೋಪದ ಹಿನ್ನಲೆಯಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version