• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 10:16 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 16T101308.676

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿವೆ. ವಿಶೇಷವಾಗಿ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ, ಗೃಹಲಕ್ಷ್ಮಿ ಯೋಜನೆ, ಉಚಿತ ಆಹಾರ ಧಾನ್ಯಗಳಂತಹ ಯೋಜನೆಗಳು ಗ್ರಾಮೀಣ ಮಹಿಳೆಯರ ಜೀವನದಲ್ಲಿ ಭದ್ರತೆ ತಂದಿರುವುದು ನಿಜ. ಆದರೆ, ಇದರ  ಪರಿಣಾಮವಾಗಿ ಕೃಷಿ ಕಾರ್ಯ  ಮಾಡಲು ಕಾರ್ಮಿಕರಿಲ್ಲದೇ ಕೃಷಿ ವಲಯ ತತ್ತರಿಸಿ ಹೋಗಿದೆ.

ಉಚಿತ ಬಸ್ ಸೇವೆ ಆರಂಭವಾದ ಬಳಿಕ ಗ್ರಾಮೀಣ ಭಾಗದ ದುಡಿಯುವ ವರ್ಗದ ಮಹಿಳೆಯರು ಕೃಷಿ ಕೆಲಸಗಳಿಗೆ ಗುಡ್‌ಬೈ ಹೇಳಿ ಪಟ್ಟಣ–ನಗರಗಳತ್ತ ಮುಖ ಮಾಡಿದ್ದಾರೆ. ಬೆಳಗಿನ ಬಸ್‌ಗಳಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿರುವುದು ಸಾಮಾನ್ಯವಾಗಿದೆ. ಮನೆಗೆಲಸ, ಬಟ್ಟೆ ಅಂಗಡಿ, ಹೋಟೆಲ್, ಮದುವೆ ಮತ್ತು ಕೆಟರಿಂಗ್ ಕೆಲಸಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಲಭ್ಯವಿರುವ ಉದ್ಯೋಗಗಳು ಮಹಿಳೆಯರನ್ನು ಹೆಚ್ಚು ಆಕರ್ಷಿಸುತ್ತಿವೆ. ಬೆಳಗ್ಗೆ ನಗರಕ್ಕೆ ತೆರಳಿ ಸಂಜೆ ಮನೆಗೆ ಮರಳುವ ಮಹಿಳೆಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

RelatedPosts

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

ADVERTISEMENT
ADVERTISEMENT

ಬಿಸಿಲಿನಲ್ಲಿ ಗಂಟೆಗಟ್ಟಲೆ ದುಡಿಯಬೇಕು, ದೈಹಿಕ ಶ್ರಮ ಅಧಿಕ, ಆದರೆ ಸಿಗುವ ಕೂಲಿ ಕಡಿಮೆ. ಅದಕ್ಕೆ ಹೋಲಿಸಿದರೆ ನಗರ ಉದ್ಯೋಗಗಳು ಕಡಿಮೆ ಶ್ರಮ, ಸಮಯವೂ ನಿಗದಿತವಾಗಿದ್ದು, ಕೂಲಿ ಉತ್ತಮವಾಗಿದೆ. ಹಿಂದೆ ಬಸ್ ಪ್ರಯಾಣಕ್ಕೆ ಅರ್ಧ ಸಂಬಳವೇ ಖರ್ಚಾಗುತ್ತಿದ್ದ ಕಾರಣ ನಗರ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದ ಮಹಿಳೆಯರು, ಈಗ ಉಚಿತ ಬಸ್ ಸೌಲಭ್ಯದಿಂದ ಸಿಗುವ ಸಂಪೂರ್ಣ ಕೂಲಿಯನ್ನು ಉಳಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಕೃಷಿ ವಲಯದಲ್ಲಿ ಕಾರ್ಮಿಕರ ಕೊರತೆ ತೀವ್ರವಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಬಿತ್ತನೆ, ಕಳೆ ತೆಗೆಯುವುದು, ಕೊಯ್ಲು ಕಾರ್ಯಗಳಿಗೆ ಕೂಲಿ ಕಾರ್ಮಿಕರು ಸಿಗದೆ ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆದ ಬೆಳೆ, ಕಾರ್ಮಿಕರ ಕೊರತೆಯಿಂದ ಗದ್ದೆಯಲ್ಲೇ ನಾಶವಾಗುತ್ತಿದೆ. “ಊರೆಲ್ಲ ಹುಡುಕಿದರೂ ಈಗ ಕೃಷಿ ಕೆಲಸಕ್ಕೆ ಮಹಿಳೆಯರು ಸಿಗುತ್ತಿಲ್ಲ” ಎಂಬುದು ರೈತರಿಗೆ ಸಮಸ್ಯೆಯಾಗಿದೆ.

ಕೃಷಿ ಕುಟುಂಬಗಳಲ್ಲಿ ನಾಲ್ಕೈದು ಜನ ದುಡಿಯುವವರು ಇದ್ದರೆ ಮಾತ್ರ ಕೃಷಿ ಮುಂದುವರಿಸಲು ಸಾಧ್ಯ. ಆದರೆ, ಹೆಚ್ಚಿನ ಕುಟುಂಬಗಳಲ್ಲಿ ಯುವಕರು ಮತ್ತು ಮಹಿಳೆಯರು ನಗರ ಉದ್ಯೋಗಗಳತ್ತ ಹೋಗಿರುವುದರಿಂದ, ಒಬ್ಬಂಟಿಯಾಗಿ ಕೃಷಿ ನಡೆಸುವ ಪರಿಸ್ಥಿತಿ ಎದುರಾಗಿದೆ. ವಿಶೇಷವಾಗಿ ಮಧ್ಯಮ ಮತ್ತು ದೊಡ್ಡ ಜಮೀನು ಹೊಂದಿರುವ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.

ಇಂತಹ ಸಂದರ್ಭದಲ್ಲಿ ಕೆಲ ರೈತರು ಪರಸ್ಪರ ಸಹಕಾರದ ಮೂಲಕ ಕೃಷಿ ಕಾರ್ಯ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ. ಎರಡು–ಮೂರು ಕುಟುಂಬಗಳು ಸೇರಿ ಕೆಲಸ ಹಂಚಿಕೊಂಡು ಕೃಷಿ ನಡೆಸುತ್ತಿರುವ ಉದಾಹರಣೆಗಳೂ ಇವೆ. ಆದರೆ, ಇದು ಸಣ್ಣ ಜಮೀನಿಗೆ ಮಾತ್ರ ಸಾಧ್ಯವಾಗಿದ್ದು, ಹೆಚ್ಚಿನ ಜಮೀನು ಹೊಂದಿರುವವರಿಗೆ ಈ ವಿಧಾನ ಸಾಕಾಗುತ್ತಿಲ್ಲ.

ಇದಕ್ಕೆ ಮತ್ತೊಂದು ಪ್ರಮುಖ ಕಾರಣ ಎಂದರೆ, ಈಗ ದುಡಿಯದೇ ಇದ್ದರೂ ಬದುಕು ಸಾಗುವ ವ್ಯವಸ್ಥೆ ರೂಪುಗೊಂಡಿರುವುದು. ಬಹುತೇಕ ದುಡಿಯುವ ವರ್ಗದ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಮೂಲಕ ಉಚಿತ ಅಕ್ಕಿ ಸಿಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2000 ರೂ. ದೊರೆಯುತ್ತಿದೆ. ಕುಟುಂಬದಲ್ಲಿ ಹಿರಿಯರು, ಅಂಗವಿಕಲರು ಇದ್ದರೆ ಸಂಧ್ಯಾ ಸುರಕ್ಷಾ ಅಥವಾ ಪಿಂಚಣಿ ಯೋಜನೆಯ ಲಾಭವೂ ಲಭ್ಯ. ಹೀಗಾಗಿ “ದುಡಿದರೆ ಮಾತ್ರ ಹೊಟ್ಟೆ ತುಂಬುತ್ತದೆ” ಎಂಬ ಹಳೆಯ ಕಾಲದ ನಿಯಮ ಈಗ ನಿಧಾನವಾಗಿ ಮಂಕಾಗುತ್ತಿದೆ.

ಒಟ್ಟಿನಲ್ಲಿ, ಪಂಚಗ್ಯಾರಂಟಿ ಯೋಜನೆಗಳು ಸಾಮಾಜಿಕ ಭದ್ರತೆ ಒದಗಿಸಿದರೂ, ಕೃಷಿ ವಲಯದ ಮೇಲೆ ಅದರ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ. ಇಲ್ಲದಿದ್ದರೆ, ಕಾರ್ಮಿಕರ ಕೊರತೆಯಿಂದ ಕೃಷಿಯೇ ಸಂಕಷ್ಟಕ್ಕೆ ಸಿಲುಕುವ ಅಪಾಯವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

BeFunky collage 2026 01 18T131955.429

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

by ಶ್ರೀದೇವಿ ಬಿ. ವೈ
January 18, 2026 - 1:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T113544.440
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯ ಮೇಲೇ ಹಲ್ಲೆ ಮಾಡಿದ ಕೈದಿಗಳು
    January 18, 2026 | 0
  • BeFunky collage 2026 01 18T071800.393
    ಕರ್ನಾಟಕದಲ್ಲಿ ಹೇಗಿದೆ ಇಂದಿನ ಹವಾಮಾನ? ಬೆಂಗಳೂರಲ್ಲಿ ಚಳಿಯ ಅಲರ್ಟ್
    January 18, 2026 | 0
  • Untitled design 2026 01 17T120059.249
    ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
    January 17, 2026 | 0
  • Untitled design 2026 01 17T104722.309
    ಕಲ್ಯಾಣ ಕರ್ನಾಟಕದ ಧೀಮಂತ ಭೀಮಣ್ಣ ಖಂಡ್ರೆ ಲಿಂಗೈಕ್ಯ, ಇಂದು ಸಂಜೆ ಭಾಲ್ಕಿಯಲ್ಲಿ ಅಂತ್ಯಸಂಸ್ಕಾರ
    January 17, 2026 | 0
  • Untitled design 2026 01 17T072803.414
    ಚಂಡಮಾರುತದ ಎಫೆಕ್ಟ್: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    January 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version