ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿದ್ದ ನಿರಂತರ ಹೋರಾಟ ಮತ್ತು ಉದ್ಯೋಗ ಸಮರಕ್ಕೆ ಕೊನೆಗೂ ದೊಡ್ಡ ಜಯ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಫೆ.26, 2026) ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಬರೋಬ್ಬರಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿಸಿದೆ.

ಪ್ರತಿಭಟನೆಗೆ ಮಣಿದ ಸರ್ಕಾರ

ಕಳೆದ ಕೆಲವು ತಿಂಗಳುಗಳಿಂದ ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೀದಿಗಿಳಿದಿದ್ದರು. ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದ್ದರಿಂದ ಉದ್ಯೋಗಾಕಾಂಕ್ಷಿಗಳಲ್ಲಿ ಉಂಟಾಗಿದ್ದ ಆಕ್ರೋಶವನ್ನು ತಣಿಸಲು ಸರ್ಕಾರ ಈ ಉದ್ಯೋಗ ಗ್ಯಾರಂಟಿ ಭರವಸೆಯನ್ನು ನೀಡಿದೆ. 56 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಯಿಂದಾಗಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸ್ಥಾನಗಳು ಭರ್ತಿಯಾಗಲಿದ್ದು, ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದೆ.

ಇದೇ ದಿನ ರಾಜ್ಯದ ದಲಿತ ಸಮುದಾಯಗಳ ದಶಕಗಳ ಕಾಲದ ಕನಸಾಗಿದ್ದ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಅಂತಿಮ ಮುದ್ರೆ ಬಿದ್ದಿದೆ. ರಾಜ್ಯ ಸರ್ಕಾರ ಮಂಡಿಸಿದ್ದ ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಕಿತ ಹಾಕಿದ್ದಾರೆ. ಇಂದು ಸಚಿವರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ, ಮೀಸಲಾತಿ ಗೊಂದಲದಿಂದ ನೇಮಕಾತಿ ವಿಳಂಬವಾಗುತ್ತಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟಿತ್ತು. ಈ ಮನವಿಗೆ ಸ್ಪಂದಿಸಿದ ರಾಜ್ಯಪಾಲರು ಕೂಡಲೇ ಸಹಿ ಹಾಕುವ ಮೂಲಕ ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ.

ಯಾರಿಗೆ ಎಷ್ಟು ಮೀಸಲಾತಿ ? (ಹೊಸ ಹಂಚಿಕೆ ವಿವರ)

ಸಚಿವ ಸಂಪುಟದ ತೀರ್ಮಾನದಂತೆ ಪರಿಶಿಷ್ಟ ಜಾತಿಯ ಒಳಗೆ ಈ ಕೆಳಗಿನಂತೆ ಮೀಸಲಾತಿ ಹಂಚಿಕೆ ಮಾಡಲಾಗಿದೆ:

ಈ ನಿರ್ಧಾರದಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಉಪಜಾತಿಗಳಿಗೂ ಸಮಾನ ಅವಕಾಶ ಸಿಗಲಿದೆ.

ಸಮುದಾಯಗಳ ವರ್ಗೀಕರಣ

ಈ ಐತಿಹಾಸಿಕ ನಿರ್ಧಾರವು ರಾಜ್ಯದ ಉದ್ಯೋಗ ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆ ತರಲಿದ್ದು, ಅರ್ಹ ಅಭ್ಯರ್ಥಿಗಳಿಗೆ ತಮ್ಮ ಹಕ್ಕಿನ ಉದ್ಯೋಗ ಪಡೆಯಲು ದಾರಿ ಸುಗಮಗೊಳಿಸಿದೆ.

Exit mobile version