ಬೆಂಗಳೂರು: ರಾಜ್ಯ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆ ಮಂಡನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.
ಈಗಾಗಲೇ ಉಪಚುನಾವಣಾ ಸಂದರ್ಭದಲ್ಲಿ ಈ ಮೀಸಲಾತಿಯನ್ನು ಜಾರಿಗೆ ತರಲು ಸರ್ಕಾರ ಯೋಚಿಸಿತ್ತು. ಆದರೆ ಹಲವಾರು ವಿರೋಧಗಳ ಕಾರಣದಿಂದ ಈ ನಿರ್ಧಾರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಇದೀಗ ಸರ್ಕಾರವು ಇದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ಮಸೂದೆ ಮಂಡನೆಗೊಳ್ಳುವ ನಿರೀಕ್ಷೆಯಿದೆ.
ಈ ನೀತಿಯ ಅನುಷ್ಠಾನದಿಂದ ರಾಜ್ಯ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಲಭ್ಯವಾಗಲಿದೆ. ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ವಿವಿಧ ವರ್ಗಗಳಿಂದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.