ಮುಂದಿನ 24 ಗಂಟೆಗಳಲ್ಲಿ 10 ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್

BeFunky collage (35)

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ವರುಣನ ಆರ್ಭಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ರಾಜ್ಯದ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳು :

ಕರ್ನಾಟಕದಲ್ಲಿ ಭಾರೀ ಮಳೆಯ ಸಾಧ್ಯತೆ. ಕಲಬುರಗಿ, ಬೆಳಗಾವಿ, ಧಾರವಾಡ, ಗದಗ ,ಹಾವೇರಿ,ಚಿಕ್ಕಮಗಳೂರು,ಹಾಸನ,ಕೊಡಗು, ಮಂಡ್ಯ , ಮೈಸೂರು ಈ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಿಂದ ನೀರಿನ ಹರಿವು, ಜಲಾವೃತ ಮತ್ತು ಸಣ್ಣಪುಟ್ಟ ಅಪಘಾತಗಳ ಸಾಧ್ಯತೆ ಇದೆ. ಜನರು ಅನಗತ್ಯ ಪ್ರಯಾಣ ಮಾಡದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಯೆಲ್ಲೋ ಅಲರ್ಟ್ :

ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು ಪ್ರವೇಶ ಸಾಧ್ಯತೆ

ಹವಾಮಾನ ಇಲಾಖೆಯ ಪ್ರಕಾರ, ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಪ್ರಸ್ತುತ ಪೂರ್ವ ಮುಂಗಾರು ಮಳೆಯು ರಾಜ್ಯದಲ್ಲಿ ಸಕ್ರಿಯವಾಗಿದೆ.

ಸಾರ್ವಜನಿಕರಿಗೆ ಸಲಹೆಗಳು

ವಿಪತ್ತು ನಿರ್ವಹಣಾ ಮಂಡಳಿ ಮತ್ತು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸಿ ಸುರಕ್ಷಿತವಾಗಿರಿ ಎಂದು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

Exit mobile version