ರಾಜ್ಯದ ಜನರೇ ಎಚ್ಚರ! ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

BeFunky collage (80)

ಕರ್ನಾಟಕದಲ್ಲಿ ಮಳೆರಾಯ ಮತ್ತೆ ತನ್ನ ಪ್ರತಾಪ ತೋರಲು ಸಜ್ಜಾಗಿದ್ದಾನೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಮುಂದಿನ 48 ಗಂಟೆಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳ್ಳುವ ಭೀತಿ ಎದುರಾಗಿದೆ.

ಆರೆಂಜ್ ಅಲರ್ಟ್ ಘೋಷಿತ 11 ಜಿಲ್ಲೆಗಳು : ಅತೀ ಭಾರಿ ಮಳೆಯ ಸಾಧ್ಯತೆಯಿರುವ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ: ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ.

ಯೆಲ್ಲೋ ಅಲರ್ಟ್ ಘೋಷಿತ 17 ಜಿಲ್ಲೆಗಳು : ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆಯಿರುವ ಉಳಿದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ: ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ.

ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ

ಹವಾಮಾನ ಇಲಾಖೆಯು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು, ಹಳೆಯ ಕಟ್ಟಡಗಳಲ್ಲಿ ಇರುವವರು ಹೆಚ್ಚು ಜಾಗರೂಕರಾಗಿರಬೇಕು. ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲುವುದು ಸಾಮಾನ್ಯವಾಗಿದೆ. ವಾಹನ ಸವಾರರು ಸಂಚಾರ ಮಾಡುವಾಗ ವಿಶೇಷ ಗಮನ ಹರಿಸಿ. ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲುವುದನ್ನು ತಪ್ಪಿಸಿ.

ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಲು ಮತ್ತು ಮೋಡದ ವಾತಾವರಣವಿರುತ್ತದೆ. ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕಾಣಿಸುತ್ತಿದೆ.

ಮುಂಗಾರು ನಿರೀಕ್ಷೆ

ಉತ್ತರ ಹಿಂದೂ ಮಹಾಸಾಗರ ಮತ್ತು ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳಿಗೆ ಪೂರಕ ವಾತಾವರಣ ಇಲ್ಲದಿರುವುದರಿಂದ ಮುಂಗಾರು ಮುಂದುವರಿಕೆಗೆ ಅಡ್ಡಿಯಾಗಿದೆ. ಮೇ 30ರ ಸುಮಾರಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳು ಕ್ಷೀಣಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾರ್ವಜನಿಕರಿಗೆ ಸಲಹೆಗಳು

ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸಿ ಸುರಕ್ಷಿತವಾಗಿರಿ ಎಂದು ಸಾರ್ವಜನಿಕರನ್ನು ಕೇಳಿಕೊಳ್ಳಲಾಗಿದೆ. ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗುವ, ವಿದ್ಯುತ್ ಸರಬರಾಜು ಕಡಿತಗೊಳ್ಳುವ ಮತ್ತು ಸಣ್ಣಪುಟ್ಟ ಅಪಘಾತಗಳ ಸಾಧ್ಯತೆ ಇದೆ.

Exit mobile version