ಕರ್ನಾಟಕದಲ್ಲಿ ಮಳೆಯ ಅಬ್ಬರ: ಮುಂದಿನ 2 ದಿನಗಳಲ್ಲಿ ಭಾರಿ ಮಳೆ, ಬೆಂಗಳೂರಿಗೆ ಬಿಗ್ ಅಲರ್ಟ್

BeFunky collage (62)

ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಿದ್ದು, ವಿಶೇಷವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳ್ಳುವ ಭೀತಿ ಎದುರಾಗಿದೆ.

ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳು

ಭಾರಿ ಮಳೆಯ ಸಾಧ್ಯತೆಯಿರುವ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ,ರಾಯಚೂರು ,ತುಮಕೂರು ,ಚಿಕ್ಕಬಳ್ಳಾಪುರ ,ಬೆಂಗಳೂರು ನಗರ ,ಕೋಲಾರ ,ಬೆಂಗಳೂರು ಗ್ರಾಮಾಂತರ ಈ ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗುವ, ಟ್ರಾಫಿಕ್ ಸಮಸ್ಯೆ ಉಂಟಾಗುವ ಮತ್ತು ಸಣ್ಣಪುಟ್ಟ ಅಪಘಾತಗಳ ಸಾಧ್ಯತೆ ಇದೆ. ಜನರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಯೆಲ್ಲೋ ಅಲರ್ಟ್ ಘೋಷಿತ 18 ಜಿಲ್ಲೆಗಳು

ರಾಜ್ಯದ ಉಳಿದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇವುಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ:

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣವಿರುತ್ತದೆ. ಘಟ್ಟ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಸಣ್ಣ ಮಳೆಯ ಸಾಧ್ಯತೆ ಇದೆ.

ಮುಂಗಾರು ಪ್ರವೇಶದ ನಿರೀಕ್ಷೆ

ಹವಾಮಾನ ಇಲಾಖೆಯ ಪ್ರಕಾರ, ಮೇ 26-27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಪ್ರಸ್ತುತ ಪೂರ್ವ ಮುಂಗಾರು ಮಳೆ ಸಕ್ರಿಯವಾಗಿದೆ.

ಸಾರ್ವಜನಿಕರಿಗೆ ಸಲಹೆಗಳು

ವಿಪತ್ತು ನಿರ್ವಹಣಾ ಮಂಡಳಿ ಮತ್ತು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸಿ ಸುರಕ್ಷಿತವಾಗಿರಿ ಎಂದು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗುವ, ವಿದ್ಯುತ್ ಸರಬರಾಜು ಕಡಿತಗೊಳ್ಳುವ ಮತ್ತು ಸಣ್ಣಪುಟ್ಟ ಅಪಘಾತಗಳ ಸಾಧ್ಯತೆ ಇದೆ.

Exit mobile version