ಕರ್ನಾಟಕದ ಇತಿಹಾಸದಲ್ಲಿ ಅತ್ಯಂತ ದೊಡ್ಡ ಡ್ರಗ್ಸ್ ಕಾರ್ಯಾಚರಣೆಯನ್ನು ನಡೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ರಾಜಧಾನಿ ಬೆಂಗಳೂರಿನಲ್ಲಿ 75 ಕೋಟಿ ರೂಪಾಯಿ ಮೌಲ್ಯದ 37.87 ಕೆಜಿ ಎಂಡಿಎಂಎ (MDMA) ಡ್ರಗ್ಸ್ ಜಪ್ತಿ ಮಾಡುದ್ದಾರೆ. ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೋಲಿಸರು ಕಳೆದ ಐದು ತಿಂಗಳಿಂದ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಜಾಲ ಭೇದಿಸಿದ್ದಾರೆ.
ಎಂಡಿ ಎಂಎ ಡ್ರಗ್ಸ್ ದೆಹಲಿಯ ಲ್ಯಾಬ್‌ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಡ್ರಗ್ಸ್ ಬರಿತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ 100 ಕೆಜಿ ಎಮ್ ಡಿಎಮ್‌ಎ ಡ್ರಗ್ಸ್ ಬೆಂಗಳೂರಿಗೆ ಬರುತ್ತಿತ್ತು.ಬೆಂಗಳೂರಿನಲ್ಲಿ ತಿಂಗಳಿಗೆ ಕನಿಷ್ಠ 50-60 ಕೋಟಿ ರೂಪಾಯಿ ಡ್ರಗ್ ವಹಿವಾಟು ನಡೆಯುತ್ತದೆ ಎಂಬ ಅಂಶ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಡ್ರಗ್ ಮಾಫಿಯಾಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದೆ. 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್ ಜಪ್ತಿ ಮಾಡಿದ್ದೇವೆ.ಬಂಧನಗೊಂಡವರಲ್ಲಿ ದಕ್ಷಿಣ ಆಫ್ರಿಕಾದ ಬಂಬಾ ಫಂಟಾ ಮತ್ತು ಅಬಿಗೈಲ್ ಅಡೋನಿಸ್ ಎಂಬಾತನನ್ನು ಬಂಧಿಸಿದ್ದೇವೆ ಎಂದು ತಿಳಿಸಿದರು.
ಇವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹತ್ತಿರದ ನೀಲಾದ್ರಿ ನಗರದಲ್ಲಿ ಟ್ರಾಲಿ ಟ್ರಾವೆಲ್ ಬ್ಯಾಗ್‌ಗಳಲ್ಲಿ ಡ್ರಗ್ಸ್‌ಗಳನ್ನು ಮುಚ್ಚಿಟ್ಟಿದ್ದರು. ಪೊಲೀಸರು 4 ಮೊಬೈಲ್ ಫೋನ್‌ಗಳು, ನಕಲಿ ಪಾಸ್‌ಪೋರ್ಟ್‌ಗಳು, 18 ಸಾವಿರ ರೂ. ನಗದು, ಮತ್ತು ವೀಸಾ ದಾಖಲೆಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನೈಜೀರಿಯಾದ ಡ್ರಗ್ ಪೆಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದು, ನಕಲಿ ದಾಖಲೆಗಳನ್ನು ಬಳಸಿ ದೇಶದಾದ್ಯಂತ ಡ್ರಗ್ಸ್ ಸಾಗಾಣಿಕೆ ಮಾಡುತ್ತಿದ್ದರು.
ಹಿಂದಿನ ತನಿಖೆಗಳು ಮತ್ತು ಕಿಂಗ್ಪಿನ್ ಹುಡುಕಾಟ
6 ತಿಂಗಳ ಹಿಂದೆ ಹೈದರ್ ಆಲಿ ಎಂಬ ಡ್ರಗ್ ಮಾರಾಟಗಾರನನ್ನು ಬಂಧಿಸಿದಾಗ, 15 ಗ್ರಾಂ ಎಂಡಿಎಂಎ ಜಪ್ತಿಯಾಯಿತು. ಅವನ ವಿಚಾರಣೆಯಿಂದ ನೈಜೀರಿಯಾದ ಡ್ರಗ್ ಮಾಫಿಯಾ ಸಂಪರ್ಕಗಳ ಬಗ್ಗೆ ಮಾಹಿತಿ ಸಿಕ್ಕಿತು. ಇದರ ನಂತರ ಪೀಟರ್ ಎಂಬ ನೈಜೀರಿಯನ್ ನಾಗರಿಕನನ್ನು 6 ಕೋಟಿ ಮೌಲ್ಯದ ಡ್ರಗ್ಸ್‌ಸಹಿತ ಬಂಧಿಸಲಾಯಿತು. ಈ ಪ್ರಕರಣಬಳಿಕ ತನಿಖೆ ನಡೆಸಿ “ಕಿಂಗ್ಪಿನ್”ಗಳನ್ನು ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೇವು.
ಇದರ ಮೂಲ ಪತ್ತೆಗೆ ಇಳಿಯಲು ಕಳೆದ 6 ತಿಂಗಳಿಂದ ಕಾರ್ಯಾಚರಣೆ ನಡೆಸಲಾಯ್ತು. ವಿದೇಶಿ ಪ್ರಜೆಗಳು ಡ್ರಗ್ಸ್ ಸಾಗಿಸುವ ಮಾಹಿತಿ ಸಿಕ್ಕಿತ್ತು. ಮಾರ್ಚ್ 14ರಂದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ವಿದೇಶಿ ಮಹಿಳೆಯರು ಡ್ರಗ್ಸ್ ತರುತ್ತಿರುವ ಬಗ್ಗೆ ಮಾಹಿತಿ ದೊರೆಯಿತು ಎಂದು ಹೇಳಿದರು.
ಇಬ್ಬರು ಮಹಿಳೆಯರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಬಂಧಿಸಲಾಗಿದೆ. ಟ್ರಾಲಿ ಟ್ರಾವೆಲ್ ಬ್ಯಾಗ್ನಲ್ಲಿ ಎಂಡಿಎಂಎ ಡ್ರಗ್ಸ್ ಇತ್ತು. 75 ಕೋಟಿ ರೂ. ಮೌಲ್ಯದ ಎಂಡಿಎಂಎ ಜಪ್ತಿ ಮಾಡಲಾಗಿದೆ. 4 ಮೊಬೈಲ್ಗಳು, ಪಾಸ್‌ಪೋರ್ಟ್, 18 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬೆಂಗಳೂರು ಸೇರಿದಂತೆ ಇತರೆ ಭಾಗದ ನೈಜೀರಿಯನ್ ಪೆಡ್ಲರ್ಗಳಿಗೆ ಸಾಗಾಟ ಮಾಡುತ್ತಿದ್ದರು. ನಕಲಿ ಪಾಸ್‌ಪೋರ್ಟ್ ಹಾಗೂ ನಕಲಿ ವೀಸಾ ಬಳಸಿ ಪ್ರಯಾಣ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯಲಿದೆ ಎಂದರು.