• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಲಾರಿ ಮುಷ್ಕರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2025 - 9:27 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (89)

ಬೆಂಗಳೂರು, ಏಪ್ರಿಲ್ 14 : ರಾಜ್ಯದ ಲಾರಿ ಮಾಲೀಕರ ಸಂಘದಿಂದ ನೀಡಿರುವ ಕರೆ ಹಿನ್ನೆಲೆ ಇಂದಿನಿಂದಲೇ ಅನಿರ್ಧಿಷ್ಠಾವಧಿ ಲಾರಿ ಮುಷ್ಕರ ಆರಂಭವಾಗುತ್ತಿದೆ. ಡೀಸೆಲ್ ಬೆಲೆ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಹಾಗೂ ಆರ್‌ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವಾರು ಸಮಸ್ಯೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಲಾರಿ ಮಾಲೀಕರು ತಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರದ ನಿರ್ಧಾರ ತೆಗೆದುಕೊಂಡಿದ್ದಾರೆ.

ಮುಷ್ಕರದ ಹಿನ್ನಲೆ ಮತ್ತು ಬೇಡಿಕೆಗಳು

ಇತ್ತೀಚೆಗೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 2.73 ರಷ್ಟು ಹೆಚ್ಚಿಸಿ ಆದೇಶ ನೀಡಿದ್ದು, ಇದರ ಪರಿಣಾಮವಾಗಿ ಡೀಸೆಲ್ ಬೆಲೆ ಸುಮಾರು 2 ರೂಪಾಯಿ ಏರಿಕೆ ಕಂಡಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಸರ್ಕಾರ  ಡೀಸೆಲ್ ದರವನ್ನು ಹೆಚ್ಚಿಸಿದ್ದು, ಇದರಿಂದ ಲಾರಿ ಮಾಲೀಕರ ಮೇಲಿನ ಆರ್ಥಿಕ ಭಾರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 14ರೊಳಗೆ ಸರ್ಕಾರ ಸ್ಪಂದಿಸಬೇಕೆಂದು ಲಾರಿ ಮಾಲೀಕರ ಸಂಘದವರು ಗಡುವು ನೀಡಿದ್ದರು. ಆದರೆ ಸರ್ಕಾರದಿಂದ ಯಾವುದೇ ಸ್ಪಂದನೆ ಬಂದಿಲ್ಲ. ಹೀಗಾಗಿ ಅವರು ಇಂದು ಮಧ್ಯರಾತ್ರಿಯಿಂದಲೇ ಮುಷ್ಕರಕ್ಕೆ ಮುಂದಾಗಿದ್ದಾರೆ.

RelatedPosts

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?

ಟ್ರಂಪ್ ಎಚ್ಚರಿಕೆ ಬಳಿಕ ಎಫ್-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇಟ್ಟ ಸ್ಫೋಟಕ ತೆಗೆಯಲು ಜಪಾನ್ ಸಿದ್ಧ: ಯುದ್ಧರಂಗಕ್ಕೆ ಎಂಟ್ರಿ?

ಸಿಎಂ ಮತ್ತು ಪಿಎಂ ಆಗಿ ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ

ADVERTISEMENT
ADVERTISEMENT
ಲಕ್ಷಾಂತರ ಲಾರಿಗಳ ಸಂಚಾರ ಸ್ಥಗಿತ

ಸುಮಾರು 6 ಲಕ್ಷಕ್ಕೂ ಅಧಿಕ ಲಾರಿಗಳು ಈ ಮುಷ್ಕರದಲ್ಲಿ ಭಾಗವಹಿಸುತ್ತಿದ್ದು, ಇದರ ಪರಿಣಾಮವಾಗಿ ರಾಜ್ಯದೊಳಗಿನ ಹಾಗೂ ಹೊರಗಿನ ಸರಕು ಸಾಗಣೆಗೆ ದೊಡ್ಡ ವ್ಯತ್ಯಯ ಉಂಟಾಗಲಿದೆ. ಜಲ್ಲಿ ಕಲ್ಲು, ಮರಳು, ಅಕ್ಕಿ, ತೋಟಗಾರಿಕೆ ಉತ್ಪನ್ನಗಳು, ಪೆಟ್ರೋಲ್ ಮತ್ತು ಡೀಸೆಲ್ ಸಾಗಣೆಗೆ ಬಳಸುವ ಲಾರಿಗಳೂ ಮುಷ್ಕರದಲ್ಲಿ ಭಾಗಿಯಾಗುತ್ತವೆ. ಅಲ್ಲದೆ ಇತರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಲಾರಿಗಳಿಗೆ ಪ್ರವೇಶ ನಿರ್ಬಂಧಿಸಲಾಗುತ್ತದೆ ಎಂಬುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ಏರ್‌ಪೋರ್ಟ್ ಟ್ಯಾಕ್ಸಿಯೂ ಒಂದು ದಿನ ಮುಷ್ಕರದಲ್ಲಿ ಭಾಗಿಯಾಗಲಿದೆ

ಈ ಹಿನ್ನೆಲೆಯಲ್ಲಿ ಏಪ್ರಿಲ್ 15ರಂದು ಒಂದು ದಿನದವರೆಗೆ ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರ ಸಂಘ ಕೂಡ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದೆ. ಇವು ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಭಾಗವಹಿಸಬೇಡವೆಂಬ ನಿರ್ಧಾರವನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಿದ್ದಾರೆ. ಒಂದು ದಿನದಷ್ಟು ಟ್ಯಾಕ್ಸಿ ಸೇವೆಗಳ ಸ್ಥಗಿತವೂ ಪ್ರಯಾಣಿಕರಿಗೆ ತೊಂದರೆಯುಂಟುಮಾಡುವ ಸಾಧ್ಯತೆ ಇದೆ.

ಈ ಮುಷ್ಕರದಿಂದ ದಿನಬಳಕೆ ಅಗತ್ಯ ವಸ್ತುಗಳ ಪೂರೈಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಹಲವಾರು ವಸ್ತುಗಳ ಬೆಲೆ ಏರಿಕೆಯಲ್ಲಿದ್ದು, ಡೀಸೆಲ್ ಬೆಲೆ ಹೆಚ್ಚಳ ಮತ್ತು ಲಾರಿ ಸೇವೆಗಳ ಸ್ಥಗಿತ ಈ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಲಿದೆ. ಇಂಧನ ವಿತರಣಾ ಲಾರಿಗಳೂ ಮುಷ್ಕರದಲ್ಲಿ ಭಾಗಿಯಾಗುತ್ತಿರುವುದರಿಂದ ಪೆಟ್ರೋಲ್ ಬಂಕ್‌ಗಳಲ್ಲಿ ಸರಬರಾಜು ಕಡಿಮೆಯಾಗುವ ಸಾಧ್ಯತೆ ಇದೆ.

 ಲಾರಿ ಮಾಲೀಕರ ಬೇಡಿಕೆಗಳಿಗೆ ತ್ವರಿತ ಸ್ಪಂದನೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಇನ್ನಷ್ಟು ವಿಳಂಬವಾದರೆ ಜನಸಾಮಾನ್ಯರ ದಿನನಿತ್ಯದ ಜೀವನಕ್ಕೂ ಪರಿಣಾಮ ಉಂಟಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T210528.526

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?

by ಶಾಲಿನಿ ಕೆ. ಡಿ
March 22, 2026 - 9:06 pm
0

Untitled design 2026 03 22T203253.130

ಟ್ರಂಪ್ ಎಚ್ಚರಿಕೆ ಬಳಿಕ ಎಫ್-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
March 22, 2026 - 8:35 pm
0

Untitled design 2026 03 22T201530.208

ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!

by ಶಾಲಿನಿ ಕೆ. ಡಿ
March 22, 2026 - 8:19 pm
0

Untitled design 2026 03 22T194907.157

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇಟ್ಟ ಸ್ಫೋಟಕ ತೆಗೆಯಲು ಜಪಾನ್ ಸಿದ್ಧ: ಯುದ್ಧರಂಗಕ್ಕೆ ಎಂಟ್ರಿ?

by ಶಾಲಿನಿ ಕೆ. ಡಿ
March 22, 2026 - 8:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T210528.526
    ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?
    March 22, 2026 | 0
  • Untitled design 2026 03 22T203253.130
    ಟ್ರಂಪ್ ಎಚ್ಚರಿಕೆ ಬಳಿಕ ಎಫ್-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್
    March 22, 2026 | 0
  • Untitled design 2026 03 22T194907.157
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇಟ್ಟ ಸ್ಫೋಟಕ ತೆಗೆಯಲು ಜಪಾನ್ ಸಿದ್ಧ: ಯುದ್ಧರಂಗಕ್ಕೆ ಎಂಟ್ರಿ?
    March 22, 2026 | 0
  • Untitled design 2026 03 22T182601.204
    ಸಿಎಂ ಮತ್ತು ಪಿಎಂ ಆಗಿ ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ
    March 22, 2026 | 0
  • Untitled design 2026 03 22T181358.006
    ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ ರಮ್ಯಾ
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version