• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 10:23 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಖರ್ಜೂರನಾ (6)

ಬೆಂಗಳೂರು (ಜು.27): ರಾಜ್ಯದ ಯುವಜನರಲ್ಲಿ ಎಚ್‌ಐವಿ ಸೋಂಕು (HIV) ದಿನೇ ದಿನೇ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕ ಸರ್ಕಾರ (Government of Karnataka) ಮಹತ್ವದ ನಿರ್ಣಯ ಕೈಗೊಂಡಿದೆ. ರಾಜ್ಯದ ಎಲ್ಲಾ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಎಚ್‌ಐವಿ (HIV) ತಪಾಸಣೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಮುಂದಾಗಿವೆ. 

ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ: ಆತಂಕಕಾರಿ ವರದಿ

RelatedPosts

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

ನೀಟ್ ಬಳಿಕ ಎಥೆನಾಲ್ ಪೆಟ್ರೋಲ್ ವಿರುದ್ಧ ‘ಗಾಡಿ ಮಾರ್ಚ್’ ಪ್ರತಿಭಟನೆ ಆರಂಭ

ADVERTISEMENT
ADVERTISEMENT

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ (NACO) ಇತ್ತೀಚಿನ ವರದಿಗಳ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 2.60 ಲಕ್ಷ ಎಚ್‌ಐವಿ ಪಾಸಿಟಿವ್ ವ್ಯಕ್ತಿಗಳಿದ್ದು, ಇದು ಗಂಭೀರವಾದ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಈ ಪೈಕಿ 2.05 ಲಕ್ಷ ಮಂದಿ ಆ್ಯಂಟಿ ರೆಟ್ರೋವೈರಲ್ ಥೆರಪಿ (ART) ಚಿಕಿತ್ಸೆ ಪಡೆಯುತ್ತಿದ್ದರೂ, ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗಲಿರುವುದರ ಅರಿವೇ ಇಲ್ಲದಿರುವುದು ಅತ್ಯಂತ ಆತಂಕಕಾರಿ ಅಂಶವಾಗಿದೆ.

ಯುವ ಸಮೂಹದಲ್ಲೇ ಸೋಂಕು ವೇಗವಾಗಿ ಹರಡುವಿಕೆ

ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ನೀಡಿರುವ ಅಂಕಿ-ಅಂಶಗಳು ಇನ್ನಷ್ಟು ಗಾಬರಿಯನ್ನುಂಟು ಮಾಡುತ್ತವೆ. 18ರಿಂದ 35 ವರ್ಷದೊಳಗಿನ ಯುವಜನರಲ್ಲಿ ಈ ಸೋಂಕು ತೀವ್ರವಾಗಿ ಹರಡುತ್ತಿದೆ. 2023-24ರಲ್ಲಿ 44,500ರಷ್ಟಿದ್ದ ಸೋಂಕಿತರ ಸಂಖ್ಯೆ 2025-26ರ ವೇಳೆಗೆ ಭಾರಿ ಏರಿಕೆ ಕಂಡು 66,600ಕ್ಕೆ ತಲುಪಿದೆ. ಇತ್ತೀಚಿನ ವರದಿಯೊಂದರ ಪ್ರಕಾರ, ಕೇವಲ 18ರಿಂದ 25 ವರ್ಷ ಪ್ರಾಯದ 7,000ಕ್ಕೂ ಹೆಚ್ಚು ಯುವಕ-ಯುವತಿಯರಲ್ಲಿ ಎಚ್‌ಐವಿ ಪತ್ತೆಯಾಗಿರುವುದು ಸರ್ಕಾರವನ್ನು ಅಲರ್ಟ್ ಮಾಡಿದೆ.

ವಿಟಿಯು ಮತ್ತು ಪದವಿ ಕಾಲೇಜುಗಳಲ್ಲಿ ‘ಆರೋಗ್ಯ ಶಿಬಿರ’

ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಹಾಗೂ KSAPS ಜಂಟಿಯಾಗಿ ಸಂಯೋಜಿತ ಆರೋಗ್ಯ ಶಿಬಿರಗಳನ್ನು (Integrated Health Camps – IHC) ಆಯೋಜಿಸುತ್ತಿವೆ. ವಿಟಿಯು ಸಂಯೋಜಿತ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಸ್ನಾತಕೋತ್ತರ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಜೊತೆಗೆ ಆಪ್ತ ಸಮಾಲೋಚನೆ (Counselling) ನಡೆಸಲು ಸೂಚಿಸಲಾಗಿದೆ. ಈ ಶಿಬಿರಗಳು ವಿದ್ಯಾರ್ಥಿಗಳಿಗೆ ಸುರಕ್ಷಿತ, ಗೌಪ್ಯ ವಾತಾವರಣದಲ್ಲಿ ತಮ್ಮ ಆರೋಗ್ಯ ಸ್ಥಿತಿಯನ್ನು ತಿಳಿಯಲು ಅವಕಾಶ ನೀಡಲಿವೆ.

ಅಲ್ಲದೆ, ಜುಲೈ 2026ರಿಂದ ಫೆಬ್ರವರಿ 2027ರವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಸ್ಪರ್ಧೆ ಹಾಗೂ ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ವಿಟಿಯು ಮಾರ್ಗಸೂಚಿ ಪ್ರಕಟಿಸಿದೆ. ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದರೊಂದಿಗೆ ತಾರತಮ್ಯ, ಕಳಂಕದ ಭಯವನ್ನು ನಿವಾರಿಸುವುದೂ ಈ ಅಭಿಯಾನದ ಉದ್ದೇಶವಾಗಿದೆ.

ಸರ್ಕಾರಕ್ಕೆ ಎದುರಾಗಿದೆ ದೊಡ್ಡ ಸವಾಲು

ಈಗಾಗಲೇ ಕಾಲೇಜು ಅಂಗಳದಲ್ಲಿ ಮಾದಕ ದ್ರವ್ಯ (Drugs) ಹಾವಳಿಯ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ ಇದೀಗ ಯುವಜನತೆಯನ್ನು ಎಚ್‌ಐವಿ ಸೋಂಕಿನಿಂದ ರಕ್ಷಿಸುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದ ಪದವಿ ಕಾಲೇಜುಗಳಲ್ಲಿ 3 ಲಕ್ಷ ಹಾಗೂ ವಿಟಿಯು ವ್ಯಾಪ್ತಿಯಲ್ಲಿ 4 ಲಕ್ಷ ಸೇರಿದಂತೆ ಒಟ್ಟು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳನ್ನು ತಲುಪಿ, ಆರಂಭಿಕ ಹಂತದಲ್ಲೇ ಸೋಂಕು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಹೀಗಾಗಿ ಕಾಲೇಜುಗಳಲ್ಲಿ ‘ರೆಡ್ ರಿಬ್ಬನ್ ಕ್ಲಬ್’ ಗಳನ್ನು ಸಕ್ರಿಯಗೊಳಿಸುವ ಮೂಲಕ ಪೀರ್ ಎಜುಕೇಷನ್ ಮಾದರಿಯಲ್ಲಿ ಜಾಗೃತಿ ಮೂಡಿಸಲು ಯೋಜಿಸಲಾಗಿದೆ.

ವಿದ್ಯಾರ್ಥಿಗಳ ಗೌಪ್ಯತೆಗೆ ಆದ್ಯತೆ

ಪರೀಕ್ಷಾ ಫಲಿತಾಂಶಗಳು ಸಂಪೂರ್ಣ ಗೌಪ್ಯವಾಗಿರುತ್ತವೆ ಮತ್ತು ಯಾವುದೇ ವಿದ್ಯಾರ್ಥಿಯ ವಿರುದ್ಧ ತಾರತಮ್ಯ ಮಾಡಲಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೆಚ್ಚುವರಿಯಾಗಿ, ಪಾಸಿಟಿವ್ ಪ್ರಕರಣಗಳು ಪತ್ತೆಯಾದಲ್ಲಿ ಆರೋಗ್ಯ ಇಲಾಖೆಯು ಉಚಿತ ART ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಜೂರನಾ (9)

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ

by ಶಾಲಿನಿ ಕೆ. ಡಿ
July 27, 2026 - 11:48 am
0

ಖರ್ಜೂರನಾ (8)

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

by ಶಾಲಿನಿ ಕೆ. ಡಿ
July 27, 2026 - 11:08 am
0

ಖರ್ಜೂರನಾ (7)

ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

by ಶಾಲಿನಿ ಕೆ. ಡಿ
July 27, 2026 - 10:50 am
0

ಖರ್ಜೂರನಾ (6)

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ

by ಶಾಲಿನಿ ಕೆ. ಡಿ
July 27, 2026 - 10:23 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (9)
    ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ
    July 27, 2026 | 0
  • ಖರ್ಜೂರನಾ (8)
    ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್
    July 27, 2026 | 0
  • ಖರ್ಜೂರನಾ (7)
    ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ
    July 27, 2026 | 0
  • ಖರ್ಜೂರನಾ (5)
    ನೀಟ್ ಬಳಿಕ ಎಥೆನಾಲ್ ಪೆಟ್ರೋಲ್ ವಿರುದ್ಧ ‘ಗಾಡಿ ಮಾರ್ಚ್’ ಪ್ರತಿಭಟನೆ ಆರಂಭ
    July 27, 2026 | 0
  • ಖರ್ಜೂರನಾ (4)
    ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version