ಬೆಂಗಳೂರು: ಕರ್ನಾಟಕ ಸರ್ಕಾರದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ರಾಜೀನಾಮೆ ಕುರಿತಂತೆ ಹೊಸ ತಿರುವು ಸಿಕ್ಕಿದೆ. ರಾಜಣ್ಣ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಇದೀಗ ಅವರನ್ನು ಸಂಪುಟದಿಂದಲೇ ವಜಾ ಮಾಡಲಾಗಿದೆ ಎಂಬ ಸ್ಫೋಟಕ ಮಾಹಿತಿ ಬಂದಿದೆ. ರಾಜ್ಯಪಾಲರ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ “Removal” ಎಂಬ ಶಬ್ದ ಬಳಸಿ ಪತ್ರ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಚೇರಿಯಿಂದ ಬಂದ ಪತ್ರದಲ್ಲಿ ರಾಜಣ್ಣ ಅವರನ್ನು ‘ರಿಮೂವಲ್’ ಮಾಡಲಾಗಿದೆ ಎಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಧ್ವನಿ
ಈ ವಿವಾದ ವಿಧಾನಸೌಧದ ಕಲಾಪದಲ್ಲೂ ಪ್ರತಿಧ್ವನಿಸಿದೆ. ಬಿಜೆಪಿ ನಾಯಕರು, “ಸರ್ಕಾರವೇ ಸ್ಪಷ್ಟವಾಗಿ ಹೇಳಬೇಕು – ಇದು ರಾಜೀನಾಮೆಯೋ ಅಥವಾ ವಜಾವೋ?” ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಇದುವರೆಗೆ ಈ ಬಗ್ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.