• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2026 - 6:53 pm
in Flash News, ಎಲೆಕ್ಷನ್, ಕರ್ನಾಟಕ
0 0
0

ಬೆಂಗಳೂರು, ಜೂನ್ 18: ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ 5 ಮತ್ತು ಬಿಜೆಪಿ 2 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಫಲಿತಾಂಶದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಣತಂತ್ರ ಯಶಸ್ವಿಯಾಗಿದ್ದು, ಜೆಡಿಎಸ್‌ಗೆ ಭಾರಿ ಮುಖಭಂಗವಾಗಿದೆ.

ವಿಧಾನ ಪರಿಷತ್‌ನಲ್ಲಿ ಜೂನ್ 30ರಂದು ತೆರವಾಗಲಿರುವ 7 ಸ್ಥಾನಗಳಿಗೆ ಇಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆದಿತ್ತು. ಒಟ್ಟು 222 ಶಾಸಕರು ತಮ್ಮ ಹಕ್ಕು ಚಲಾಯಿಸಿದ್ದು, ಒಂದು ಮತ ಅಸಿಂಧುಗೊಂಡಿದೆ. ಹೀಗಾಗಿ 221 ಮತಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ.

RelatedPosts

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್: ಯಾರಿಗೆ ಯಾವ ಇಲಾಖೆ?

ADVERTISEMENT
ADVERTISEMENT

ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಬಿ.ಎಸ್. ಶಿವಣ್ಣ, ಪಿ.ವಿ. ಮೋಹನ್ ಹಾಗೂ ವಿನಯ್ ಕಾರ್ತಿಕ್ ಅವರು ಸ್ಪರ್ಧಿಸಿದ್ದರು.

ಬಿಜೆಪಿಯಿಂದ ಲಿಂಗರಾಜ್ ಪಾಟೀಲ್ ಮತ್ತು ಮೈಸೂರಿನ ರಘು ಕೌಟಿಲ್ಯ ಅವರು ಅಖಾಡಕ್ಕಿಳಿದಿದ್ದರು. ಜೆಡಿಎಸ್‌ನಿಂದ ಗೋವಿಂದರಾಜು ಸ್ಪರ್ಧೆಯಲ್ಲಿದ್ದರು. ಈ ಪೈಕಿ ಕಾಂಗ್ರೆಸ್‌ನ ಎಲ್ಲಾ 5 ಅಭ್ಯರ್ಥಿಗಳು ಮತ್ತು ಬಿಜೆಪಿಯ 2 ಅಭ್ಯರ್ಥಿಗಳು ವಿಜಯದ ನಗೆ ಬೀರಿದರೆ, ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಸೋಲುಂಡಿದ್ದಾರೆ.

ಡಿಕೆಶಿ ರಣತಂತ್ರ ಯಶಸ್ವಿ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರಿಗೆ ಸಿಕ್ಕಿರುವ ಅತಿದೊಡ್ಡ ರಾಜಕೀಯ ಗೆಲುವು ಇದು. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಆರಂಭದಲ್ಲೇ ಗುರಿ ಹೊಂದಿದ್ದರು. ಅದರಂತೆ, ತಲಾ 28 ಶಾಸಕರ ಮತಗಳಂತೆ 4 ಅಭ್ಯರ್ಥಿಗಳಿಗೆ 112 ಪ್ರಾಶಸ್ತ್ರದ ಮತಗಳು ಚಲಾವಣೆಯಾಗಿವೆ. ಇನ್ನು ಕಾಂಗ್ರೆಸ್ ಬಳಿ ಉಳಿದ 23 ಮತಗಳ ಜೊತೆಗೆ ಮೂವರು ಪಕ್ಷೇತರ ಶಾಸಕರು ಮತ್ತು ಬಿಜೆಪಿಯ ಇಬ್ಬರು ಉಚ್ಚಾಟಿತ ಶಾಸಕರ ಬೆಂಬಲದೊಂದಿಗೆ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅವರು 32 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. 

ಜೆಡಿಎಸ್‌‌ಗೆ ಬಿಗಿ ಶಾಕ್

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ಗೆ ತೀವ್ರ ನಿರಾಸೆಯಾಗಿದೆ. ನಿರೀಕ್ಷಿತ ಮತಗಳು ಸಿಗದೇ ಇರುವುದು ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ. ಅಡ್ಡ ಮತದಾನದ ಭೀತಿಯಲ್ಲಿ ಜೆಡಿಎಸ್ ತನ್ನ 18 ಶಾಸಕರನ್ನು ಬುಧವಾರ ದೇವನಹಳ್ಳಿಯ ಖಾಸಗಿ ರೆಸಾರ್ಟ್ ಗೆ ಶಿಫ್ಟ್ ಮಾಡಿತ್ತು. ಆದರೂ, ಈ ಲೆಕ್ಕಾಚಾರ ವಿಫಲವಾಗಿದ್ದು, ಪಕ್ಷದ ಅಭ್ಯರ್ಥಿ ಗೋವಿಂದರಾಜು ಅವರಿಗೆ ಕೇವಲ 14 ಮತಗಳಷ್ಟೇ ಬಂದಿವೆ. 

ಕ್ರಾಸ್ ವೋಟಿಂಗ್ ಸಂಚಲನ

ಈ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಪ್ರಮುಖ ಸಂಚಲನವಾಗಿದೆ. ಬಿಜೆಪಿಯ ಮೂವರು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಜೆಡಿಎಸ್‌ನ ಮೂವರು ಶಾಸಕರು ಸಹ ಕ್ರಾಸ್ ವೋಟಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಗೋವಿಂದರಾಜು ಅವರಿಗೆ 14 ಮತಗಳು ಮಾತ್ರ ಬಂದಿವೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳು 28 ಮತಗಳ ಮ್ಯಾಜಿಕ್ ನಂಬರ್ ತಲುಪಿ ಯಶಸ್ವಿಯಾಗಿದ್ದಾರೆ.

ಮತದಾನ ಅಂಕಿಅಂಶಗಳು

  • ಒಟ್ಟು ಶಾಸಕರ ಸಂಖ್ಯೆ: 222

  • ಅಸಿಂಧು ಮತ: 1 (ತಿರಸ್ಕೃತ)

  • ಸಿಂಧು ಮತಗಳು: 221

  • ಗೆಲುವಿಗೆ ಬೇಕಾದ ಮತಗಳು (ಮ್ಯಾಜಿಕ್ ನಂಬರ್): 28

ಪಕ್ಷವಾರು ಶಾಸಕರ ಬಲ

  • ಕಾಂಗ್ರೆಸ್: 135

  • ಬಿಜೆಪಿ: 62

  • ಬಿಜೆಪಿ ಉಚ್ಚಾಟಿತರು: 3

  • ಜೆಡಿಎಸ್: 18

  • ಸರ್ವೋದಯ ಪಕ್ಷ: 1

  • ಕಲ್ಯಾಣ ರಾಜ್ಯ ಪ್ರಗತಿ ಪಕ್ಷ: 1

  • ಪಕ್ಷೇತರರು: 2

ಗೆದ್ದ ಅಭ್ಯರ್ಥಿಗಳ ಪಟ್ಟಿ

ಕಾಂಗ್ರೆಸ್ (5)

  1. ಬಿ.ಕೆ. ಹರಿಪ್ರಸಾದ್ – ಕೆಪಿಸಿಸಿ ಅಧ್ಯಕ್ಷರು

  2. ತಿಪ್ಪಣ್ಣಪ್ಪ ಕಮಕನೂರ

  3. ಬಿ.ಎಸ್. ಶಿವಣ್ಣ (ಮಳವಳ್ಳಿ)

  4. ಪಿ.ವಿ. ಮೋಹನ್

  5. ವಿನಯ್ ಕಾರ್ತಿಕ್

ಬಿಜೆಪಿ (2)

  1. ಲಿಂಗರಾಜ್ ಪಾಟೀಲ್

  2. ರಘು ಕೌಟಿಲ್ಯ (ಮೈಸೂರು)

ಈ ಫಲಿತಾಂಶದೊಂದಿಗೆ ಡಿ.ಕೆ. ಶಿವಕುಮಾರ್ ಅವರ ಪ್ರಭಾವ ಮತ್ತು ಸಂಘಟನಾ ಸಾಮರ್ಥ್ಯ ಮತ್ತೊಮ್ಮೆ ಸಾಬೀತಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಇದು ಯಶಸ್ಸು ತಂದಿದೆ. ಇನ್ನೊಂದೆಡೆ, ಬಿಜೆಪಿ ತನ್ನ 2 ಸ್ಥಾನಗಳನ್ನು ಕಾಯ್ದುಕೊಂಡಿದ್ದು, ಸಮಾಧಾನಕರ ಫಲಿತಾಂಶವೆಂದು ಪರಿಗಣಿಸಬಹುದು. ಆದರೆ ಜೆಡಿಎಸ್ ಪಾಲಿಗೆ ಇದು ದೊಡ್ಡ ಹಿನ್ನಡೆಯಾಗಿದ್ದು, ಅಡ್ಡ ಮತದಾನದ ಕಾರಣಗಳನ್ನು ಪಕ್ಷದ ನಾಯಕರು ಗಂಭೀರವಾಗಿ ಪರಿಶೀಲಿಸುವ ಸಾಧ್ಯತೆಯಿದೆ. 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಅದ್ವೈತ್ (9)

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by ಕವಿತಾ
August 12, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version