ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

06

ಕರ್ನಾಟಕದಲ್ಲಿ ಜೂನ್ ಆರಂಭದಲ್ಲಿ ನಿರೀಕ್ಷೆಗೂ ತಕ್ಕಂತೆ ಚುರುಕಾಗದಿದ್ದ ಮುಂಗಾರು ಈಗ ಮತ್ತೆ ವೇಗ ಪಡೆದುಕೊಳ್ಳುತ್ತಿದೆ. ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚು ಮಳೆ, ಕೆಲವೆಡೆ ಭಾರೀ ಮಳೆಯೂ ಆಗಬಹುದು; ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಗುಡುಗು-ಮಿಂಚು, ಗಾಳಿ ಸಹಿತ ಮಳೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕದ ಕರ್ನಾಟಕ ಜಿಲ್ಲೆಗಳು — ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಹೆಚ್ಚು. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಭಾಗಗಳಲ್ಲೂ ಮಳೆಯ ತೀವ್ರತೆ ಹೆಚ್ಚಿರಬಹುದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಭಾಗಗಳಲ್ಲಿ ಮಧ್ಯಮದಿಂದ ಭಾರೀ ಮಳೆ, ಕೆಲವೆಡೆ ಬಿರುಗಾಳಿ-ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. IMD ಎಚ್ಚರಿಕೆ ಪ್ರಕಾರ ಕೆಲವು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬಂಗಾಳ ಕೊಲ್ಲಿಯ ವಾಯುವ್ಯ ಭಾಗದಲ್ಲಿ ರೂಪುಗೊಂಡ ಕಡಿಮೆ ಒತ್ತಡದ ಪ್ರದೇಶದ ಪರಿಣಾಮ ಮುಂಗಾರು ಮತ್ತೆ “ಆಕ್ಟಿವ್ ಫೇಸ್” ಗೆ ಬಂದಿದೆ. ಇದರ ಪರಿಣಾಮವಾಗಿ ದಕ್ಷಿಣ ಪೆನಿನ್ಸುಲಾ ಭಾಗಗಳಲ್ಲೂ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಆರಂಭದಲ್ಲಿ ಮಳೆ ಕೊರತೆ ಕಂಡಿದ್ದರೂ, ಜುಲೈ ಮೊದಲ ವಾರದಿಂದ ಪರಿಸ್ಥಿತಿ ಸುಧಾರಿಸುವ ಸೂಚನೆಗಳು ಕಾಣಿಸುತ್ತಿವೆ.

ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಭೂಕುಸಿತ/ಮರಬೀಳು ಅಪಾಯ, ನಗರ ಪ್ರದೇಶಗಳಲ್ಲಿ ಟ್ರಾಫಿಕ್ ವ್ಯತ್ಯಯ ಉಂಟಾಗಬಹುದು. ಅಗತ್ಯವಿಲ್ಲದ ಪ್ರಯಾಣ ತಪ್ಪಿಸುವುದು, ವಿದ್ಯುತ್ ಕಂಬ/ಮರಗಳ ಕೆಳಗೆ ನಿಲ್ಲದಿರುವುದು, ಸ್ಥಳೀಯ ಜಿಲ್ಲಾಡಳಿತ ಹಾಗೂ IMD ಎಚ್ಚರಿಕೆಗಳನ್ನು ಗಮನಿಸುವುದು ಉತ್ತಮ. ವಿಶೇಷವಾಗಿ ಕರಾವಳಿ ಮತ್ತು ಘಾಟ್ ರಸ್ತೆಗಳಲ್ಲಿ ಎಚ್ಚರಿಕೆಯಿಂದ ಸಂಚರಿಸುವುದು ಸೂಕ್ತ.

ಒಟ್ಟಾರೆಯಾಗಿ ಮುಂಗಾರು ಮಳೆ ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಈಗ ಚುರುಕುಗೊಂಡಿದೆ. ಸದ್ಯ ಆಗುತ್ತಿರುವ ಪ್ರವಾಹದಂತಹ ಪರಿಸ್ಥಿತಿಗಳಿಂದ ಬತ್ತಿರುವ ನದಿಗಳಿಗೆ ಏಕಾಯಕಿ ಜೀವಕಳೆ ಬಂದಿದೆ. ಒಟ್ಟಿನಲ್ಲಿ ಮುಂಗಾರು ಚುರುಕಿನಿಂದ ರೈತರಲ್ಲಿ ಸಂತಸ ಮನೆ ಮಾಡಿದೆ..

Exit mobile version