• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಲಿನಿ ರಜನೀಶ್ ವಿರುದ್ಧದ ಆರೋಪಕ್ಕೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2026 - 3:56 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇದೀಗ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದಾರೆ. ಸಿಸಿಬಿ (CCB) ಬಂಧನ ಮತ್ತು ವಿಚಾರಣೆ ಬಳಿಕ ಅವರು ತಮ್ಮ ಆರೋಪಗಳು ತಪ್ಪು ಮಾಹಿತಿ ಆಧಾರಿತವಾಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ.

ಶನಿವಾರ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸ್ನೇಹಮಯಿ ಕೃಷ್ಣ, “ಬೆಂಗಳೂರಿನ ಸೈಬರ್ ಠಾಣೆಯಲ್ಲಿ ವಿಚಾರಣೆ ಮುಗಿಸಿಕೊಂಡು ಬಂದಿದ್ದೇನೆ. ವಿಚಾರಣೆ ವೇಳೆ ವಿನೋದ್ ಎಂಬಾತ ಶ್ರೀಮತಿ ಶಾಲಿನಿ ರಜನೀಶ್ ಅವರ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದು ತಿಳಿದು ಬಂದಿದೆ. ಆ ಮಾಹಿತಿಯನ್ನು ನಂಬಿ ನಾನು ಆರೋಪ ಮಾಡಿದ್ದೆ. ನನ್ನಿಂದ ಆಗಿರುವ ತಪ್ಪಿಗಾಗಿ ಶಾಲಿನಿ ರಜನೀಶ್ ಅವರಲ್ಲಿ ಕ್ಷಮೆ ಕೋರುತ್ತೇನೆ” ಎಂದು ಬರೆದುಕೊಂಡಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ADVERTISEMENT
ADVERTISEMENT
ಆರೋಪ ಏನು?

ಸ್ನೇಹಮಯಿ ಕೃಷ್ಣ ಅವರು ಮುಡಾ (MUDA) ಮಾಜಿ ಆಯುಕ್ತ ಡಿ.ಬಿ. ನಟೇಶ್ ಬಡ್ತಿ ಪಡೆಯಲು 1.60 ಕೋಟಿ ರೂಪಾಯಿ ಲಂಚವನ್ನು ಮುಖ್ಯ ಕಾರ್ಯದರ್ಶಿಗೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಆರೋಪವನ್ನು ಸಮರ್ಥಿಸಲು, ಹಣ ಸಾಗಿಸಲಾಗಿದೆ ಎಂದು ಹೇಳಲಾದ ಕಾರಿನ ಭಾವಚಿತ್ರವನ್ನೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.

ಸಿಸಿಬಿ ಬಂಧನ ಮತ್ತು ವಿಚಾರಣೆ

ಮುಖ್ಯ ಕಾರ್ಯದರ್ಶಿ ವಿರುದ್ಧದ ಆರೋಪ ಗಂಭೀರವಾಗಿರುವ ಹಿನ್ನೆಲೆ, ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಬಳಿಕ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಬಂಧಿಸಿ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ನೀಡಿದ ಮಾಹಿತಿಯ ಆಧಾರದ ಮೇಲೆ ಆರೋಪಗಳು ಸುಳ್ಳು ಮೂಲದಿಂದ ಬಂದಿವೆ ಎಂಬುದು ತಿಳಿದು ಬಂದಿದೆ.

ಪೊಲೀಸರ ತನಿಖೆಯಲ್ಲಿ, ‘ವಿನೋದ್’ ಎಂಬ ವ್ಯಕ್ತಿಯಿಂದ ಬಂದ ಮಾಹಿತಿ ಆಧರಿಸಿ ಸ್ನೇಹಮಯಿ ಕೃಷ್ಣ ಆರೋಪ ಮಾಡಿರುವುದು ಬಹಿರಂಗವಾಗಿದೆ. ಆದರೆ ಆ ಮಾಹಿತಿ ದೃಢಪಡಿಸದೇ ಸಾರ್ವಜನಿಕವಾಗಿ ಹಂಚಿಕೊಂಡಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅವರನ್ನು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ..

ಇತ್ತೀಚೆಗೆ ಸ್ನೇಹಮಯಿ ಕೃಷ್ಣ ಅವರು ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸುಮಾರು ಒಂದೂವರೆ ಕೋಟಿ ರೂಪಾಯಿ ಹಣ ನೀಡಿ ಮುಂಬಡ್ತಿ ಪಡೆದಿದ್ದಾರೆ ಎಂಬ ಆರೋಪ ಮಾಡಿದ್ದರು..ಈ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗಿತ್ತು.

ಈ ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಡಿ.ಬಿ. ನಟೇಶ್, ತಮ್ಮ ಮಾನಹಾನಿಗೆ ಕಾರಣವಾಗುವ ರೀತಿಯಲ್ಲಿ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರು.

ದೂರು ಸ್ವೀಕರಿಸಿದ ಬಳಿಕ ಪೊಲೀಸ್ ಆಯುಕ್ತರು ಸಂಬಂಧಿತ ಅಧಿಕಾರಿಗಳಿಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅದರಂತೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪರಿಶೀಲನೆ ಪ್ರಾರಂಭಿಸಲಾಯಿತು.

ತನಿಖೆಯ ಪ್ರಾಥಮಿಕ ಹಂತದಲ್ಲಿ ಆರೋಪಗಳ ಸ್ವರೂಪ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾದ ಮಾಹಿತಿ ಮತ್ತು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಈ ಬೆಳವಣಿಗೆಯಿಂದ ಮುಡಾ ಪ್ರಕರಣ ಮತ್ತೊಮ್ಮೆ ಸುದ್ದಿಯಲ್ಲಿದೆ. ಈಗಾಗಲೇ ಹಲವು ವಿವಾದಗಳಿಗೆ ಕಾರಣವಾಗಿದ್ದ ಈ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.

ಡಿ.ಬಿ. ನಟೇಶ್ ಅವರು ತಮ್ಮ ವಿರುದ್ಧದ ಆರೋಪಗಳು ಸಂಪೂರ್ಣ ಸುಳ್ಳು, ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿದೆ ಎಂದು ದೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಸರಕಾರದ ಉನ್ನತ ಅಧಿಕಾರಿಗಳ ಹೆಸರು ಬಳಸಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಂಧನದ ನಂತರ ಸ್ನೇಹಮಯಿ ಕೃಷ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ದಿನ ಭವಿಷ್ಯ: ಇಂದು ಈ ರಾಶಿಗೆ ಅದೃಷ್ಟ, ಅಪರೂಪದ ಉಡುಗೊರೆ ದೊರಕಲಿದೆ

by ಶಾಲಿನಿ ಕೆ. ಡಿ
April 30, 2026 - 6:42 am
0

BeFunky collage (16)

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

by ಶ್ರೀದೇವಿ ಬಿ. ವೈ
April 29, 2026 - 11:10 pm
0

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (3)
    ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!
    April 29, 2026 | 0
  • BeFunky collage (17)
    ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version