ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೇರಲು ಸಿದ್ಧರಾಗುತ್ತಿರುವ ಹಿನ್ನೆಲೆಯಲ್ಲಿ ಮಂತ್ರಿ ಮಂಡಲ ರಚನೆಯ ಚರ್ಚೆಯು ತುತ್ತುತ್ತುಗೆ ತಲುಪಿದೆ. ಗ್ಯಾರಂಟಿ ನ್ಯೂಸ್‌ಗೆ ದೊರೆತ ವಿಶೇಷ ಮಾಹಿತಿ ಪ್ರಕಾರ, ಹೈಕಮಾಂಡ್, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿ ಬಣಗಳ ಪಟ್ಟಿಗಳನ್ನು ದೆಹಲಿಯಲ್ಲಿ ಚರ್ಚಿಸಲಾಗುತ್ತಿದೆ. ಸಮುದಾಯ ಸಮತೋಲನ, ಪ್ರಾದೇಶಿಕ ಪ್ರತಿನಿಧ್ಯ ಮತ್ತು ನಿಷ್ಠೆಯನ್ನು ಗಮನದಲ್ಲಿಟ್ಟುಕೊಂಡು ಸಚಿವ ಸ್ಥಾನಗಳ ವಿತರಣೆ ನಡೆಯುವ ಸಾಧ್ಯತೆ ಇದೆ.
ಸಂಭವನೀಯ ಸಚಿವರು:
1.ಕೃಷ್ಣಬೈರೇಗೌಡ
ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಅತ್ಯಾಪ್ತರಲ್ಲಿ ಒಬ್ಬರಾದ ಅವರು ರಾಹುಲ್ ಗಾಂಧಿ ಅವರ ಜೊತೆಯೂ ನೇರ ಸಂಪರ್ಕ ಹೊಂದಿದ್ದಾರೆ. ನಿಷ್ಠುರ ಹಾಗೂ ನೇರ ನುಡಿಗೆ ಹೆಸರಾದ ಕೃಷ್ಣ ಬೈರೇಗೌಡ ಅವರು ಸಿದ್ದರಾಮಯ್ಯ ಅವರ ನಂತರ ಕಾಂಗ್ರೆಸ್‌ನಲ್ಲಿ ಪ್ರಮುಖ ಆರ್ಥಿಕ ನಿಪುಣರಾಗಿ ಗುರುತಿಸಿಕೊಂಡಿದ್ದಾರೆ. ಯಂಗ್ ಜನರೇಷನ್ ಲೀಡರ್ ಎನಿಸಿಕೊಂಡಿರುವ ಅವರು ಹೊಸ ಅಲೋಚನೆಗಳು ಮತ್ತು ಆಧುನಿಕ ದೃಷ್ಟಿಕೋನದೊಂದಿಗೆ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದಾರೆ.
=====
2.ಸತೀಶ್ ಜಾರಕಿಹೊಳಿ
ಸಿದ್ದು, ಡಿಕೆಶಿ ಬಣ ಬಿಟ್ಟು ತನ್ನದೇ ಬಣ ಕೊಟ್ಟುವಷ್ಟು ಪ್ರಬಲಕರ್ನಾಟಕದ ಪಿ.ಡಬ್ಲ್ಯೂ.ಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಎಸ್‌ಟಿ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರ ನಂತರ ಅಹಿಂದ ನಾಯಕ ಎಂಬ ಹಣೆಪಟ್ಟಿ ಪಡೆದಿರುವ ಅವರು ಕಿತ್ತೂರು ಕರ್ನಾಟಕ ಭಾಗದಲ್ಲಿ ತನ್ನದೇ ಆದ ಬಲವಾದ ಬೆಂಬಲ ಹೊಂದಿದ್ದಾರೆ.ಶಿಗ್ಗಾಂವಿ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಗೆಲುವಿನ ರೂವಾರಿಯಾಗಿ ಕಾರ್ಯ ನಿರ್ವಹಿಸಿದ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳನ್ನು ಬಿಟ್ಟು ತನ್ನದೇ ಶಕ್ತಿಶಾಲಿ ಬಣವನ್ನು ಕಟ್ಟುವಷ್ಟು ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
======
3.ಹೆಚ್.ಸಿ ಮಹದೇವಪ್ಪ
ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅವರು ಎಸ್‌ಸಿ (ಬಲಗೈ) ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಅತ್ಯಾಪ್ತರಲ್ಲಿ ಒಬ್ಬರಾದ ಅವರು ಮೈಸೂರು ಭಾಗದಲ್ಲಿ ಬಲವಾದ ಬೆಂಬಲ ಹೊಂದಿದ್ದಾರೆ. ಬಲಗೈ ಸಮುದಾಯಕ್ಕೆ ಸೇರಿದ್ದರೂ ಎಡಗೈ ಸಮುದಾಯದಲ್ಲೂ ಗಣನೀಯ ಪ್ರಾಬಲ್ಯ ಹೊಂದಿರುವ ಮಹದೇವಪ್ಪ ಅವರು, ಸತೀಶ್ ಜಾರಕಿಹೊಳಿ ಅವರ ಜೊತೆ ನಿಕಟ ಸಂಪರ್ಕವನ್ನು ಹೊಂದಿದ್ದಾರೆ.
======
4.ಯತೀಂದ್ರ ಸಿದ್ದರಾಮಯ್ಯ
ಮಾಜಿ ಶಾಸಕ ಹಾಗೂ ಪ್ರಸ್ತುತ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ. ತಂದೆ ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ತ್ಯಾಗ ಮಾಡಿರುವುದೇ ಅವರಿಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟು, ತಾವು ಹಿಂದೆ ಸರಿದಿದ್ದ ಯತೀಂದ್ರ, ಬಾಗಲಕೋಟೆ ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಮುಂಚೂಣಿಯಲ್ಲಿದ್ದು ಶ್ರಮಿಸಿದ್ದರು. ಹೈಕಮಾಂಡ್ ನಾಯಕರು ಈಗಾಗಲೇ ಅವರಿಗೆ ಮಂತ್ರಿ ಪದವಿ ನೀಡಲು ಉತ್ಸುಕರಾಗಿದ್ದಾರೆ.
====
5.ಬೈರತಿ ಸುರೇಶ್
ಕರ್ನಾಟಕದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಕುರುಬ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಅತ್ಯಾಪ್ತರಲ್ಲಿ ಒಬ್ಬರಾದ ಅವರು, ಪಕ್ಷದ ಹೈಕಮಾಂಡ್‌ನ ಆರ್ಥಿಕ ಖಜಾನೆ ತುಂಬಿಸುವ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.ಕುರುಬ ಸಮುದಾಯದ ಓಲೈಕೆಗಾಗಿ ಮಣೆ ಹಾಕುತ್ತಿದ್ದಾರೆ. ಭೈರತಿ ಸುರೇಶ್ ಅವರು, ನಗರಾಭಿವೃದ್ಧಿ ಇಲಾಖೆಯ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
—–
6.ಕೆ.ಜೆ ಜಾರ್ಜ್
ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯ ಅವರಿಬ್ಬರಿಗೂ ಅತ್ಯಂತ ಆಪ್ತರಾಗಿರುವ ಅವರು, ಸಿದ್ದು ಬಣದಲ್ಲಿ ಅತ್ಯಂತ ಪವರ್‌ಫುಲ್ ಮಂತ್ರಿಯಾಗಿ ಗುರುತಿಸಿಕೊಂಡಿದ್ದಾರೆ.ಹೈಕಮಾಂಡ್‌ಗೆ ಟ್ಯಾಕ್ಸ್ ಪೂರ್ತಿ ಮಾಡುವ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರಾದ ಕೆ.ಜೆ. ಜಾರ್ಜ್ ಅವರು, ಪಕ್ಷದಲ್ಲಿ ತಮ್ಮದೇ ಆದ ವಿಶಿಷ್ಟ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
——-
7.ಜಮೀರ್ ಅಹ್ಮದ್ ಖಾನ್
ಕರ್ನಾಟಕದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯದ ಮುಸ್ಲಿಂ ಸಮುದಾಯದಲ್ಲೇ ಅತ್ಯಂತ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಬಣದಲ್ಲಿ ಅತ್ಯಾಪ್ತರಲ್ಲಿ ಒಬ್ಬರಾದ ಅವರು, ಹೊರ ರಾಜ್ಯಗಳ ಚುನಾವಣೆಗಳಲ್ಲೂ ಪಕ್ಷಕ್ಕೆ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿದ್ದಾರೆ.ಆದರೆ ಇತ್ತೀಚಿನ ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷಕ್ಕೆ ಬಂದ ನಷ್ಟವು ಜಮೀರ್ ಅಹ್ಮದ್ ಖಾನ್ ಅವರಿಗೆ ನೆಗೆಟಿವ್ ಆಗಿ ಪರಿಣಾಮ ಬೀರಿವ ಎಲ್ಲಾ ಸಂಭವನೀಯತೆಗಳು ಹೆಚ್ಚಾಗಿವೆ.
======
8.ಲಕ್ಷ್ಮೀ ಹೆಬ್ಬಾಳ್ಕರ್
ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಸಮುದಾಯದ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎರಡೂ ಬಣಗಳಲ್ಲಿ ಗುರುತಿಸಿಕೊಂಡಿರುವ ಇವರು, ಪಂಚಮಸಾಲಿ ಸಮುದಾಯದಲ್ಲಿ ಬಲವಾದ ಬೆಂಬಲ ಹೊಂದಿದ್ದಾರೆ. ಸಚಿವೆಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಾ ಉತ್ತಮ ಸಾಧನೆ ಮಾಡಿದ್ದಾರೆ.
=======
9.ಲಕ್ಷ್ಮಣ ಸವದಿ
ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಬಿಜೆಪಿಯನ್ನು ಬಿಟ್ಟು ಡಿ.ಕೆ. ಶಿವಕುಮಾರ್ ಅವರನ್ನು ನಂಬಿ ಕಾಂಗ್ರೆಸ್ ಪಕ್ಷ ಸೇರಿದ್ದ ಸವದಿ, ಪಕ್ಷಕ್ಕೆ ಸೇರಿದಾಗಲೇ ಡಿ.ಕೆ. ಶಿವಕುಮಾರ್ ಅವರು ಮಂತ್ರಿ ಪದವಿ ನೀಡುವ ಭರವಸೆ ನೀಡಿದ್ದರು.ಬೆಳಗಾವಿ ಭಾಗದಲ್ಲಿ ಅತ್ಯಂತ ಪ್ರಭಾವಿ ನಾಯಕರಾಗಿರುವ ಲಕ್ಷ್ಮಣ ಸವದಿ ಅವರು, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಿದ್ದಾರೆ.
=====
10.ಬಿ. ನಾಗೇಂದ್ರ
ಮಾಜಿ ಸಚಿವ ಬಿ. ನಾಗೇಂದ್ರ ಅವರು ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಎರಡೂ ಬಣಗಳಲ್ಲೂ ಸಕ್ರಿಯರಾಗಿರುವ ಅವರು, ಬಳ್ಳಾರಿ ಭಾಗದಲ್ಲಿ ವಾಲ್ಮೀಕಿ ಸಮುದಾಯದಲ್ಲಿ ಗಣನೀಯ ಬೆಂಬಲ ಹೊಂದಿದ್ದಾರೆ.ಆದರೆ ವಾಲ್ಮೀಕಿ ನಿಗಮದ ಹಗರಣದಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಹಿನ್ನಡೆಯಾಗಿದೆ.
====
11.ಎಸ್.ಎನ್. ನಾರಾಯಣಸ್ವಾಮಿ
ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ದಲಿತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಮೂರು ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿರುವ ಅವರು ಕೋಲಾರ ಜಿಲ್ಲೆಯಲ್ಲಿ ದಲಿತ ಸಮುದಾಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಯಾವುದೇ ಬಣಕ್ಕೂ ಸೇರದೆ ಸ್ವತಂತ್ರವಾಗಿ ತಮ್ಮದೇ ಆದ ಚಾಪನ್ನು ಕಾಯ್ದುಕೊಂಡಿರುವ ನಾಯಕರಾಗಿದ್ದಾರೆ.
=====
12.ಪಿ.ಎಂ. ನರೇಂದ್ರ ಸ್ವಾಮಿ
ಮಾಜಿ ಸಚಿವ ಹಾಗೂ ಪ್ರಸ್ತುತ ಪರಿಸರ ಕಾಲುಷ್ಯ ನಿಯಂತ್ರಣ ಮಂಡಳಿ (PCB) ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಅವರು ಬಲಗೈ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಮೂರು ಬಾರಿ ಶಾಸಕರಾಗಿ ಒಮ್ಮೆ ಸಚಿವರಾಗಿ ಸೇವೆ ಸಲ್ಲಿಸಿದ ಅವರು ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಬಲವಾದ ಪ್ರಭಾವ ಹೊಂದಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರಿಗೂ ಆತ್ಮೀಯರಾಗಿರುವ ನರೇಂದ್ರ ಸ್ವಾಮಿ ಅವರು, ಪಕ್ಷದಲ್ಲಿ ಎರಡೂ ಬಣಗಳ ನಡುವೆ ಸಮತೋಲನ ಕಾಯ್ದುಕೊಂಡು ಹೋಗುವ ವಿಶ್ವಾಸಾರ್ಹ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
=====
13.ಕೆ.ಹೆಚ್. ಮುನಿಯಪ್ಪ
ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಎಡಗೈ ಸಮುದಾಯದ ಪ್ರಭಾವಿ ಹಾಗೂ ಅತ್ಯಂತ ಹಿರಿಯ ನಾಯಕರಾಗಿದ್ದಾರೆ. ಹೈಕಮಾಂಡ್‌ಗೆ ಅತ್ಯಂತ ನಿಷ್ಠಾವಂತರಾಗಿರುವ ಅವರು ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಯಾವುದೇ ಬಣಕ್ಕೂ ಸೇರದೆ ಸ್ವತಂತ್ರ ಇಮೇಜ್‌ನ್ನು ಕಾಯ್ದುಕೊಂಡಿದ್ದಾರೆ.ಎಡಗೈ ಸಮುದಾಯದಲ್ಲಿ ಗಣನೀಯ ಪ್ರಭಾವ ಹೊಂದಿರುವ ಮುನಿಯಪ್ಪ ಅವರ ವಯಸ್ಸಿನ ಕಾರಣದಿಂದ ಅವರ ಪುತ್ರಿ ರೂಪಕಲಾ ಶಶಿಧರ್ ಅವರಿಗೂ ಮುಂದಿನ ದಿನಗಳಲ್ಲಿ ರಾಜಕೀಯ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಚರ್ಚೆಯಾಗುತ್ತಿದೆ.
======
14.ಟಿ.ಬಿ. ಜಯಚಂದ್ರ
ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಕುಂಚಿಟಿಗ ಒಕ್ಕಲಿಗ ಸಮುದಾಯದ ಪ್ರಭಾವಿ ಹಾಗೂ ಅತ್ಯಂತ ಹಿರಿಯ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರಿಗೂ ಆತ್ಮೀಯರಾಗಿರುವ ಅವರು ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ 풍ಬವಾದ ಅನುಭವ ಹೊಂದಿದ್ದಾರೆ.2023ರ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರೂ, ಪಕ್ಷದಲ್ಲಿ ಅವರ ಅನುಭವ ಮತ್ತು ಸಂಪರ್ಕಗಳು ಇನ್ನೂ ಮಹತ್ವಪೂರ್ಣವಾಗಿವೆ.
====
15.ಪುಟ್ಟರಂಗಶೆಟ್ಟಿ
ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರು ಅತ್ಯಂತ ಹಿಂದುಳಿದ ಉಪ್ಪಾರ ಸಮುದಾಯದ ಏಕೈಕ ಶಾಸಕರಾಗಿದ್ದಾರೆ. ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಅವರು, ಚಾಮರಾಜನಗರ ಜಿಲ್ಲೆಯ ಪ್ರತಿನಿಧಿಯಾಗಿ ಸಚಿವ ಸ್ಥಾನಕ್ಕೆ ಬಲವಾದ ಸಾಧ್ಯತೆ ಹೊಂದಿದ್ದಾರೆ.ಉಪ್ಪಾರ ಸಮುದಾಯದ ಏಕೈಕ ಪ್ರತಿನಿಧಿಯಾಗಿ ರಾಜ್ಯ ರಾಜಕೀಯದಲ್ಲಿ ವಿಶೇಷ ಗುರುತು ಪಡೆದಿರುವ ಪುಟ್ಟರಂಗಶೆಟ್ಟಿ ಅವರು, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸಕ್ರಿಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
======
16.ಕೆ.ಎನ್ ರಾಜಣ್ಣ
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಅತ್ಯಾಪ್ತರಲ್ಲಿ ಒಬ್ಬರಾದ ಅವರು, ರಾಹುಲ್ ಗಾಂಧಿ ಅವರ ಕೆಂಗಣ್ಣಿಗೆ ಗುರಿಯಾಗಿ ಮಂತ್ರಿ ಪದವಿ ಕಳೆದುಕೊಂಡಿದ್ದರು. ಸಿದ್ದರಾಮಯ್ಯ ಬಣದಲ್ಲಿ ತೀವ್ರವಾಗಿ ಸಕ್ರಿಯರಾಗಿರುವ ರಾಜಣ್ಣ ಅವರು, ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಪಟ್ಟು ಹಿಡಿದರೆ ಮಾತ್ರ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದ್ದು, ಡಿ.ಕೆ. ಶಿವಕುಮಾರ್ ಅವರು ಇದಕ್ಕೆ ವಿರೋಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಚರ್ಚೆಯಾಗುತ್ತಿದೆ.
======
17.ಅಶೋಕ್ ಪಟ್ಟಣ್
ಕಾಂಗ್ರೆಸ್ ವಿಪ್ ಅಶೋಕ್ ಪಟ್ಟಣ್ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಬಣದ ಅತ್ಯಾಪ್ತರಲ್ಲಿ ಒಬ್ಬರಾದ ಅವರು ಬೆಳಗಾವಿ ಭಾಗದಲ್ಲಿ ಲಿಂಗಾಯತ ಸಮುದಾಯದಲ್ಲಿ ಬಲವಾದ ಬೆಂಬಲ ಹೊಂದಿದ್ದಾರೆ.ಸತೀಶ್ ಜಾರಕಿಹೊಳಿ ಅವರ ಜೊತೆ ಉತ್ತಮ ರಾಜಕೀಯ ಸಂಬಂಧವನ್ನು ಕಾಯ್ದುಕೊಂಡಿರುವ ಅಶೋಕ್ ಪಟ್ಟಣ್ ಅವರು, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
….
18.ಅಪ್ಪಾಜೀ ನಾಡಗೌಡ
ಮುದ್ದೆಬಿಹಾಳ ಕ್ಷೇತ್ರದ ಶಾಸಕ ಅಪ್ಪಾಜೀ ನಾಡಗೌಡ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಆರು ಬಾರಿ ಶಾಸಕರಾಗಿ ಗೆಲುವು ಸಾಧಿಸಿದ ದೀರ್ಘ ಅನುಭವ ಹೊಂದಿರುವ ಅವರು ಸಿದ್ದರಾಮಯ್ಯ ಬಣದಲ್ಲಿ ಸಕ್ರಿಯರಾಗಿದ್ದಾರೆ.ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಲವಾದ ಪ್ರಭಾವ ಹೊಂದಿರುವ ಅಪ್ಪಾಜೀ ನಾಡಗೌಡ ಅವರು ಪ್ರಸ್ತುತ ಕರ್ನಾಟಕ ಸ್ಟೇಟ್ ಡೇರಿ ಫೆಡರೇಷನ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
………………….
19.ಬಿ.ಆರ್ ಪಾಟೀಲ್
ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರರಾಗಿರುವ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಲವಾದ ಬೆಂಬಲ ಹೊಂದಿದ್ದಾರೆ.ಸಿದ್ದರಾಮಯ್ಯ ಅವರ ಅತ್ಯಾಪ್ತರಲ್ಲಿ ಒಬ್ಬರಾದ ಬಿ.ಆರ್. ಪಾಟೀಲ್ ಅವರು ನೇರ ಮತ್ತು ನಿಷ್ಠುರವಾಗಿ ಮಾತನಾಡುವ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ತೋರಿದರೆ ಮಾತ್ರ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.
………………………….
20.ಬಸವರಾಜ ರಾಯರೆಡ್ಡಿ
ಯಲಬುರ್ಗಾ ಕ್ಷೇತ್ರದ ಬಸವರಾಜ ರಾಯರೆಡ್ಡಿ ಅವರು ರೆಡ್ಡಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಸಿಎಂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅತ್ಯಾಪ್ತರಾಗಿರುವ ರಾಯರೆಡ್ಡಿ ಅವರು ರಾಯಚೂರು, ಕೊಪ್ಪಳ ಹಾಗೂ ಕಲ್ಬುರ್ಗಿ ಜಿಲ್ಲೆಗಳಲ್ಲೂ ಪ್ರಭಾವಿ ಹಿಡಿತ ಹೊಂದಿದ್ದಾರೆ. ರಾಜ್ಯ ರಾಜಕೀಯದಲ್ಲಿ ಪ್ರಭಾವ ಹೆಚ್ಚಿಸಿಕೊಂಡಿರುವ ಇವರಿಗೆ, ಡಿ.ಕೆ ಶಿವಕುಮಾರ್ ಒಪ್ಪಿಗೆ ನೀಡಿದರೆ ಸಚಿವ ಸ್ಥಾನ ಅಥವಾ ಮಹತ್ವದ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ.
21.ಎ.ಎಸ್ ಪೊನ್ನಣ್ಣ
ವಿರಾಜಪೇಟೆ ಕ್ಷೇತ್ರದ ಎ.ಎಸ್. ಪೊನ್ನಣ್ಣ ಅವರು ಕೊಡವ ಸಮುದಾಯದ ಪ್ರಮುಖ ನಾಯಕರಾಗಿದ್ದು, ಪ್ರಾದೇಶಿಕತೆಯ ಆಧಾರದ ಮೇಲೆ ಅವರಿಗೆ ಸಚಿವ ಸ್ಥಾನಕ್ಕೆ ಅವಕಾಶ ಸಿಗುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಸ್ತುತ ಅವರು ಸಿಎಂ ಅವರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಡಿ.ಕೆ ಶಿವಕುಮಾರ್ ಜತೆಗೂ ಉತ್ತಮ ಒಡನಾಟ ಹೊಂದಿದ್ದಾರೆ.
ಇದಲ್ಲದೆ, ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ವೇಳೆ ಹೆಚ್ಚು ಸಕ್ರಿಯವಾಗಿ ಓಡಾಟ ನಡೆಸಿದ ಪೊನ್ನಣ್ಣ ಅವರಿಗೆ ಹೈಕಮಾಂಡ್ ನಾಯಕರ ಜತೆಗೂ ಒನ್ ಟು ಒನ್ ಸಂಪರ್ಕವಿದೆ.
……….
22.ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರದೀಪ್ ಈಶ್ವರ್ ಅವರು ಬಲಿಜ ಸಮುದಾಯದ ಯುವ ಹಾಗೂ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಎರಡೂ ಬಣಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿರುವ ಅವರು, ಪಕ್ಷದಲ್ಲಿ ಉದ್ಭವಿಸುವ ವಿವಾದಗಳ ಸಂದರ್ಭಗಳಲ್ಲಿ ಗುರಾಣಿಯಂತೆ ನಿಂತು ಪಕ್ಷವನ್ನು ಸಮರ್ಥವಾಗಿ ರಕ್ಷಿಸುವ ನಾಯಕರಾಗಿ ಹೆಸರು ಮಾಡಿದ್ದಾರೆ.
ಪ್ರತಿಪಕ್ಷ ನಾಯಕರನ್ನು ಮಾತಿನಲ್ಲೇ ಕಟ್ಟಿ ಹಾಕುವ ಚಾಕಚಕ್ಯತೆ ಹೊಂದಿರುವ ಪ್ರದೀಪ್ ಈಶ್ವರ್, ತಮ್ಮ ಮೊದಲ ಗೆಲುವಿನಲ್ಲೇ ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಖ್ಯಾತಿ ಪಡೆದ ಮಾತುಗಾರರಲ್ಲೊಬ್ಬರಾಗಿದ್ದಾರೆ.
—————
23.ಕೆ.ಎಂ. ಶಿವಲಿಂಗೇಗೌಡ
ಅರಸೀಕೆರೆ ಕ್ಷೇತ್ರದ ಕೆ.ಎಂ. ಶಿವಲಿಂಗೇಗೌಡ ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರಿಗೂ ಆಪ್ತರಾಗಿದ್ದಾರೆ ಎನ್ನಲಾಗುತ್ತದೆ. ಸದನದಲ್ಲಿ ಪ್ರತಿಪಕ್ಷ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವ ತಾಕತ್ತು ಹೊಂದಿರುವ ಅವರು, ತಮ್ಮ ನೇರ ನುಡಿಯ ವ್ಯಕ್ತಿತ್ವದಿಂದಲೇ ರಾಜಕೀಯ ವಲಯದಲ್ಲಿ ವಿಭಿನ್ನ ಗುರುತನ್ನು ಮೂಡಿಸಿಕೊಂಡಿದ್ದಾರೆ.
—————–
24.ಎನ್.ಎ ಹ್ಯಾರಿಸ್
ಶಾಂತಿನಗರ ಕ್ಷೇತ್ರದ ಎನ್.ಎ. ಹ್ಯಾರಿಸ್ ಅವರು ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜೊತೆ ಸದಾ ಸಕ್ರಿಯವಾಗಿ ಓಡಾಡುವ ನಾಯಕರಾಗಿರುವ ಅವರು, ನಾಯಕತ್ವ ಬದಲಾವಣೆಯ ಕ್ಲೈಮ್ಯಾಕ್ಸ್ ಸಂದರ್ಭದಲ್ಲೂ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು.
ರಾಜಕೀಯ ವಲಯದಲ್ಲಿ, ಡಿ.ಕೆ. ಶಿವಕುಮಾರ್ ಒಂದೇ ಒಂದು ಮಾತು ಹೇಳಿದರೆ ಹ್ಯಾರಿಸ್ ಅವರಿಗೆ ಸಚಿವ ಸ್ಥಾನ ಪಕ್ಕಾ ಎನ್ನುವ ಮಟ್ಟಿಗೆ ಅವರಿಬ್ಬರ ನಡುವೆ ಉತ್ತಮ ಹೊಂದಾಣಿಕೆ ಇದೆ ಎಂಬ ಚರ್ಚೆಗಳು ಕೇಳಿಬರುತ್ತಿವೆ. ಅಲ್ಪಸಂಖ್ಯಾತ ಸಮುದಾಯದಲ್ಲೂ ಬಲವಾದ ಪ್ರಭಾವ ಹೊಂದಿರುವ ಹ್ಯಾರಿಸ್ ಅವರು ಪಕ್ಷದ ಪ್ರಮುಖ ಮುಖಂಡರಲ್ಲಿ ಒಬ್ಬರಾಗಿದ್ದಾರೆ.
————
25.ರಾಮಲಿಂಗಾರೆಡ್ಡಿ
ಬಿಟಿಎಂ ಲೇಔಟ್ ಕ್ಷೇತ್ರದ ರಾಮಲಿಂಗಾರೆಡ್ಡಿ ಅವರು ರೆಡ್ಡಿ ಒಕ್ಕಲಿಗ ಸಮುದಾಯದ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಅತ್ಯಂತ ಪ್ರಭಾವಿ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾಗಿರುವ ಅವರು, ರೆಡ್ಡಿ ಸಮುದಾಯದಲ್ಲೂ ಭಾರೀ ಪ್ರಭಾವ ಹೊಂದಿದ್ದಾರೆ ಎನ್ನಲಾಗುತ್ತದೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಪ್ರಕ್ರಿಯೆಯಲ್ಲಿ ತೆರೆ ಹಿಂದಿನಿಂದಲೇ ಮಹತ್ವದ ಕೆಲಸ ಮಾಡಿದ್ದರೆಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಯೂತ್ ಕಾಂಗ್ರೆಸ್‌ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಹೈಕಮಾಂಡ್ ಮೇಲಿನ ನಿಷ್ಠೆಯೂ ದೊಡ್ಡ ಪ್ಲಸ್ ಪಾಯಿಂಟ್ ಎಂದು ಹೇಳಲಾಗುತ್ತಿದೆ.
————–
26.ರಿಜ್ವಾನ್ಅರ್ಷದ್
ಶಿವಾಜಿನಗರ ಕ್ಷೇತ್ರದ ರಿಜ್ವಾನ್ ಅರ್ಶದ್ ಅವರು ಅಲ್ಪಸಂಖ್ಯಾತ ಸಮುದಾಯದ ಯುವ ಹಾಗೂ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ರಾಹುಲ್ ಗಾಂಧಿತಂಡಕ್ಕೆ ಅತ್ಯಂತ ಆತ್ಮೀಯರಾಗಿರುವ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರ ಜತೆಗೂ ಉತ್ತಮ ಒಡನಾಟ ಹೊಂದಿದ್ದಾರೆ ಎನ್ನಲಾಗುತ್ತಿದೆ.
ಯುವ ಕೋಟಾದ ಆಧಾರದ ಮೇಲೆ ರಿಜ್ವಾನ್ ಅರ್ಶದ್ ಅವರಿಗೆ ಸಚಿವ ಸ್ಥಾನ ಅಥವಾ ಮಹತ್ವದ ಜವಾಬ್ದಾರಿ ನೀಡುವ ಸಾಧ್ಯತೆಗಳ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ಜೋರಾಗಿವೆ.
————–
27.ಶಿವಣ್ಣ
ಆನೇಕಲ್ ಕ್ಷೇತ್ರದ ಶಿವಣ್ಣ ಅವರು ಎಡಗೈ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹೊಸಕೋಟೆ ಹಾಗೂ ಕೋಲಾರ ಭಾಗಗಳಲ್ಲಿ ಉತ್ತಮ ಪ್ರಭಾವ ಹೊಂದಿದ್ದಾರೆ. ಮೂರು ಬಾರಿ ಶಾಸಕರಾಗಿ ಗೆದ್ದು ಆನೇಕಲ್ ಕ್ಷೇತ್ರದಲ್ಲಿ ತಮ್ಮದೇ ಆದ ಬಲವಾದ ಜನಬೆಂಬಲವನ್ನು ನಿರ್ಮಿಸಿಕೊಂಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಅತ್ಯಾಪ್ತರಾಗಿರುವ ಶಿವಣ್ಣ ಅವರು, ಇತರೆ ಸಹೋದ್ಯೋಗಿ ಶಾಸಕರ ಜತೆಗೂ ಉತ್ತಮ ಒಡನಾಟ ಹೊಂದಿರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
—————
28.ಬಾಲಕೃಷ್ಣ
ಮಾಗಡಿ ಕ್ಷೇತ್ರದ ಬಾಲಕೃಷ್ಣ ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದು, ಮಾಗಡಿಯಿಂದ ಬರೋಬ್ಬರಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅನುಭವ ಹೊಂದಿದ್ದಾರೆ. ರಾಮನಗರ ಭಾಗದಲ್ಲಿ ಬಲವಾದ ಜನಬೆಂಬಲ ಹಾಗೂ ರಾಜಕೀಯ ಪ್ರಭಾವ ಹೊಂದಿರುವ ಅವರು, ಕ್ಷೇತ್ರ ರಾಜಕಾರಣದಲ್ಲಿ ತಮ್ಮದೇ ಆದ ಹಿಡಿತ ನಿರ್ಮಿಸಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಅತ್ಯಾಪ್ತ ಶಾಸಕರಾಗಿ ಗುರುತಿಸಿಕೊಂಡಿರುವ ಬಾಲಕೃಷ್ಣ.
————–
29.ಚಲುವರಾಯಸ್ವಾಮಿ
ನಾಗಮಂಗಲ ಕ್ಷೇತ್ರದ ಚಲುವರಾಯಸ್ವಾಮಿ ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರಿಗೂ ಆಪ್ತರಾಗಿದ್ದಾರೆ ಎನ್ನಲಾಗುತ್ತದೆ. ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗಗಳಲ್ಲಿ ಬಲವಾದ ರಾಜಕೀಯ ಪ್ರಭಾವ ಹೊಂದಿರುವ ಅವರು, ಸಂಘಟನೆ ಮತ್ತು ಕ್ಷೇತ್ರ ರಾಜಕಾರಣದಲ್ಲಿ ಪ್ರಮುಖ ಮುಖಂಡರಾಗಿ ಗುರುತಿಸಿಕೊಂಡಿದ್ದಾರೆ.
ಕೃಷಿ ಇಲಾಖೆಯಲ್ಲಿ ಯಶಸ್ವಿ ಆಡಳಿತ ನೀಡಿರುವ ಚಲುವರಾಯಸ್ವಾಮಿ ಅವರು, ವಿವಾದಗಳಿಂದ ದೂರ ಉಳಿದು ಕಾರ್ಯನಿರ್ವಹಿಸುವ ನಾಯಕರಾಗಿ ಹೆಸರಾಗಿದ್ದಾರೆ.
————-
30.ತನ್ವೀರ್ ಸೇಠ್
ನರಸಿಂಹರಾಜ ಕ್ಷೇತ್ರದ ತನ್ವೀರ್ ಸೇಠ್ ಅವರು ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಮೈಸೂರು ಭಾಗದಲ್ಲಿ ಪ್ರಮುಖ ಮುಸ್ಲಿಂ ಮುಖಂಡರಾಗಿ ಗುರುತಿಸಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಅತ್ಯಾಪ್ತ ಶಾಸಕರಾಗಿ ಪರಿಗಣಿಸಲ್ಪಡುವ ತನ್ವೀರ್ ಸೇಠ್ ಅವರು, ಕ್ಷೇತ್ರ ಹಾಗೂ ಪಕ್ಷ ಸಂಘಟನೆಯಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ. ರಾಜಕೀಯ ವಲಯದಲ್ಲಿ, ಸಿದ್ದರಾಮಯ್ಯ ಒಪ್ಪಿಗೆ ನೀಡಿದರೆ ಅವರಿಗೆ ಮತ್ತೆ ಸಚಿವ ಸಂಪುಟಕ್ಕೆ ಎಂಟ್ರಿ ಸಿಗುವ ಸಾಧ್ಯತೆಗಳು ಹೆಚ್ಚಿದೆ.
————–
31.ಶ್ರೀನಿವಾಸ್
ಗುಬ್ಬಿ ಕ್ಷೇತ್ರದ ಶ್ರೀನಿವಾಸ್ ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದು ಡಿ.ಕೆ. ಶಿವಕುಮಾರ್ ಅವರಿಗೆ ಆಪ್ತರಾಗಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವಾಗಲೇ ಕೆಲವು ರಾಜಕೀಯ ಷರತ್ತುಗಳನ್ನು ಹಾಕಿಕೊಂಡೇ ಬಂದಿದ್ದರು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ತುಮಕೂರು ಜಿಲ್ಲೆಯ ಒಕ್ಕಲಿಗ ಸಮುದಾಯದಲ್ಲಿ ಉತ್ತಮ ಪ್ರಭಾವ ಹೊಂದಿದ್ದಾರೆ.
—————-
32.ಶರತ್ ಬಚ್ಚೇಗೌಡ
ಹೊಸಕೋಟೆ ಕ್ಷೇತ್ರದ ಶರತ್ ಬಚ್ಚೇಗೌಡ ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ಯುವ ನಾಯಕರಾಗಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಅತ್ಯಾಪ್ತರಾಗಿದ್ದಾರೆ ಎನ್ನಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಬೇಡಿಕೆಗೆ ಬೆಂಬಲ ಸೂಚಿಸಿ ಯುವಕರನ್ನು ಕರೆದುಕೊಂಡು ದೆಹಲಿಗೆ ದಂಡಯಾತ್ರೆ ನಡೆಸಿದ್ದರಿಂದ ಅವರು ಹೆಚ್ಚು ಗಮನ ಸೆಳೆದಿದ್ದರು.
ಹೊಸಕೋಟೆ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಉತ್ತಮ ಜನಬೆಂಬಲ ಮತ್ತು ಪ್ರಭಾವ ಹೊಂದಿದ್ದಾರೆ.
—————-
33.ರಘುಮೂರ್ತಿ
ಚಳ್ಳಕೆರೆ ಕ್ಷೇತ್ರದ ರಘುಮೂರ್ತಿ ಅವರು ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಚಳ್ಳಕೆರೆಯಿಂದ ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ ಅನುಭವಿ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅತ್ಯಾಪ್ತರಾಗಿರುವ ಶಾಸಕ ಎಂಬ ಹೆಗ್ಗಳಿಕೆಯನ್ನು ಕೂಡ ಪಡೆದಿದ್ದಾರೆ. ಸುಧಾಕರ್ ನಿರ್ಗಮನದಿಂದ ಚಿತ್ರದುರ್ಗ ಭಾಗಕ್ಕೆ ಸ್ಥಾನ ಸಾಧ್ಯತೆ ಇದೆ.
—————-
34.ಮಧು ಬಂಗಾರಪ್ಪ
ಸೊರಬ ಕ್ಷೇತ್ರದ ಮಧು ಬಂಗಾರಪ್ಪ ಅವರು ಈಡಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಎರಡೂ ಬಣಗಳಲ್ಲೂ ಉತ್ತಮ ಗುರುತಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅವರ ತಂದೆ, ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಆಡಳಿತ ಅವಧಿಯಲ್ಲೇ ಡಿ.ಕೆ. ಶಿವಕುಮಾರ್ ಮೊದಲ ಬಾರಿ ಸಚಿವ ಸಂಪುಟಕ್ಕೆ ಎಂಟ್ರಿಯಾಗಿದ್ದರು ಎಂಬ ರಾಜಕೀಯ ಹಿನ್ನೆಲೆಯೂ ಗಮನಾರ್ಹವಾಗಿದೆ.ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದಾರೆ.
—————-
35.ಸಂಗಮೇಶ್
ಭದ್ರಾವತಿ ಕ್ಷೇತ್ರದ ಸಂಗಮೇಶ್ ಅವರು ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಶಿವಮೊಗ್ಗ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಸಕ್ರಿಯ ಪಾತ್ರವಹಿಸಿರುವ ಅವರು, ಕ್ಷೇತ್ರ ರಾಜಕಾರಣದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ ಎನ್ನಲಾಗುತ್ತಿದೆ.-
—————-
36.ಯಶವಂತರಾಯಗೌಡ ಪಾಟೀಲ್
ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ್ ಅವರು ಉತ್ತರ ಕರ್ನಾಟಕ ಭಾಗದ ಪ್ರಭಾವಿ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕ್ಷೇತ್ರ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ಅವರು, ಪಕ್ಷ ಸಂಘಟನೆ ಹಾಗೂ ಜನಸಂಪರ್ಕದ ಮೂಲಕ ತಮ್ಮದೇ ಆದ ರಾಜಕೀಯ ಹಿಡಿತ ಸಾಧಿಸಿದ್ದಾರೆ.





