• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 29, 2026 - 8:11 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 29T081040.162

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆ ಮುಂದುವರಿದಿದ್ದು, ಹಲವೆಡೆ ವರುಣನ ಅಬ್ಬರ ಕಂಡುಬರುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ಆಗಸ್ಟ್ 29ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗುವ ಸಾಧ್ಯತೆಯಿದ್ದು, ಮಲೆನಾಡು ಜಿಲ್ಲೆಗಳಲ್ಲಿಯೂ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

RelatedPosts

ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ADVERTISEMENT
ADVERTISEMENT
ಕರಾವಳಿ ಕರ್ನಾಟಕದಲ್ಲಿ ಮಳೆ, ಬಲವಾದ ಗಾಳಿ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯೊಂದಿಗೆ ಗಂಟೆಗೆ ಸುಮಾರು 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶಗಳಲ್ಲಿ ಈಗಾಗಲೇ ಮುಂಗಾರು ಚಟುವಟಿಕೆ ಸಕ್ರಿಯವಾಗಿರುವುದರಿಂದ ಮೀನುಗಾರರು, ಪ್ರವಾಸಿಗರು ಹಾಗೂ ಸಮುದ್ರ ತೀರದ ಪ್ರದೇಶಗಳಲ್ಲಿ ವಾಸಿಸುವವರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸುವುದು ಸೂಕ್ತವಾಗಿದೆ.

ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿದೆ.

ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ

ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜತೆಗೆ ಗಂಟೆಗೆ 30ರಿಂದ 40 ಕಿಮೀ ವೇಗದ ಗಾಳಿ ಬೀಸಬಹುದು.

ಮಲೆನಾಡು ಪ್ರದೇಶಗಳಲ್ಲಿ ಗುಡ್ಡಗಾಡು ಹಾಗೂ ಅರಣ್ಯ ಪ್ರದೇಶಗಳು ಹೆಚ್ಚಿರುವ ಹಿನ್ನೆಲೆ ಮಳೆಯ ಸಂದರ್ಭದಲ್ಲಿ ರಸ್ತೆ ಸಂಚಾರದ ವೇಳೆ ವಾಹನ ಸವಾರರು ಹೆಚ್ಚಿನ ಜಾಗರೂಕತೆ ವಹಿಸುವುದು ಒಳಿತು. ಸ್ಥಳೀಯವಾಗಿ ಮಳೆ ಪ್ರಮಾಣ ಹೆಚ್ಚಾದರೆ ಸಣ್ಣ ಪ್ರಮಾಣದ ಜಲಾವೃತ ಅಥವಾ ರಸ್ತೆ ಸಮಸ್ಯೆಗಳು ಎದುರಾಗುವ ಸಾಧ್ಯತೆಯೂ ಇರುತ್ತದೆ.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿಯೂ ಇಂದು ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇದರೊಂದಿಗೆ ಗಂಟೆಗೆ 30ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯೂ ಇದೆ. ಹೀಗಾಗಿ ಬೆಂಗಳೂರಿನಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರು ಮಳೆ ಮತ್ತು ಗಾಳಿಯ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ.

ಆಗಸ್ಟ್ 30ರಂದು ಯಾವ ಜಿಲ್ಲೆಗಳಲ್ಲಿ ಮಳೆ?

ಆಗಸ್ಟ್ 30ರಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದು, ಗಾಳಿಯ ವೇಗದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್ ಫೇಕ್ ವಿಡಿಯೋ ಇಬ್ಬರ ವಿರುದ್ಧ FIR

ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್‌ಫೇಕ್ ವಿಡಿಯೋ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
August 29, 2026 - 8:31 am
0

Untitled design 2026 08 29T081040.162

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ

by ಶಾಲಿನಿ ಕೆ. ಡಿ
August 29, 2026 - 8:11 am
0

Untitled design 2026 08 29T075440.305

ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು

by ಶಾಲಿನಿ ಕೆ. ಡಿ
August 29, 2026 - 7:59 am
0

ಹಾರ್ಮೋನುಗಳು ಸಮತೋಲನದಲ್ಲಿರಬೇಕಾ ಈ ಆಹಾರ ಸೇವಿಸಿ!

ಹಾರ್ಮೋನುಗಳು ಸಮತೋಲನದಲ್ಲಿರಬೇಕಾ? ಈ ಆಹಾರ ಸೇವಿಸಿ!

by ಶಾಲಿನಿ ಕೆ. ಡಿ
August 29, 2026 - 7:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T075440.305
    ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (34)
    KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version