ರಾಜ್ಯದಲ್ಲಿ ಮತ್ತೆ ಭಾರೀ ಮಳೆ! ಐಎಂಡಿ ಆರೆಂಜ್ ಅಲರ್ಟ್ ಘೋಷಣೆ

BeFunky collage (36)

ಬಿಸಿಲ ಝಳದ ನಡುವೆ ಕರ್ನಾಟಕದಲ್ಲಿ ಮತ್ತೆ ಮಳೆರಾಯನ ಆಗಮನವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯಕ್ಕೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಮುಖ್ಯ ಮುನ್ಸೂಚನೆಗಳು:

ಮುಂಗಾರು ಆಗಮನ :

ಜೂನ್ ೪ರಿಂದ ಕರಾವಳಿ ಭಾಗದಲ್ಲಿ ಮುಂಗಾರು ರೀತಿಯ ಮೋಡದ ಚಲನೆ ಆರಂಭವಾಗುವ ನಿರೀಕ್ಷೆ ಇದೆ. ಜೂನ್ ೮ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆಗಳಿವೆ.

ಎಚ್ಚರಿಕೆ ಸಂದೇಶ:

ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಮತ್ತು ರೈತರು ವಿಶೇಷ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಕೆಳಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ.

ಸಲಹೆಗಳು:

ಹವಾಮಾನ ಬದಲಾವಣೆಯ ನಿರಂತರ ಅಪ್‌ಡೇಟ್‌ಗಳಿಗಾಗಿ ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರಿ.

Exit mobile version