• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 11, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರದಿಂದ ಬಾಕಿ ಇರುವ ಅನುದಾನ ಬಿಡುಗಡೆಗೆ ಡಿಕೆಶಿ ಮನವಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 18, 2025 - 5:02 pm
in Flash News, ಕರ್ನಾಟಕ
0 0
0
Add a subheading (61)

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ 2047 ರಲ್ಲಿ ಭಾರತದ ಜಲ ಸಮೃದ್ಧಿ ರಾಷ್ಟ್ರ ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.

RelatedPosts

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

ಟ್ರಯಾಂಗಲ್ ಲವ್ ಸ್ಟೋರಿ: ಪ್ರೀತಿಯ ಜಗಳಕ್ಕೆ ಸ್ನೇಹಿತರು ಬಲಿ

BREAKING: ಬಿಹಾರ ವಿಧಾನಸಭಾ ಚುನಾವಣೆ EXIT POLL-ಮತ್ತೆ NDA ದಿಗ್ವಿಜಯ..?

ಪತಿ RJD, ಪತ್ನಿ BJP: ವೋಟ್ ಗುಟ್ಟು ರಟ್ಟಾಗ್ತಿದ್ದಂತೆ ಹೊಡೆದಾಡಿಕೊಂಡ ದಂಪತಿ..!

ADVERTISEMENT
ADVERTISEMENT

“ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ ಜಲಶಕ್ತಿ ಸಚಿವಾಲಯವು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಂಡು ಅನುಮತಿ ಕೊಡಿಸಬೇಕು. ಮೇಕೆದಾಟು ಯೋಜನೆಗೆ ಡಿಪಿಆರ್ ಪರಿಗಣಿಸಿ, ಅನುಮತಿ ನೀಡುವಂತೆ ಸಿಡಬ್ಲ್ಯೂಸಿಗೆ ನಿರ್ದೇಶನ ನೀಡಬೇಕು. ಇದರಿಂದ ತಮಿಳುನಾಡಿಗೆ ಪ್ರತಿ ತಿಂಗಳ ಲೆಕ್ಕಾಚಾರದ ನೀರು ನೀಡಬಹುದು. ಜತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

2023-24ರ ಕೇಂದ್ರ ಬಜೆಟ್ ನಲ್ಲಿ ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಿದ್ದರೂ ಈವರೆಗೂ ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಬೇಗನೆ ಯೋಜನೆ ಪೂರ್ಣಗೊಳಿಸಲು ಹಣ ಬಿಡುಗಡೆ ಮಾಡುವಂತೆ ಸಚಿವಾಲಯಕ್ಕೆ ವಿನಂತಿಸುತ್ತೇನೆ ಎಂದರು.

“2011 ರ ಸೆಪ್ಟೆಂಬರ್ 16 ರಂದು ನೀಡಿರುವ ತೀರ್ಪಿನಲ್ಲಿ ಕೆಲವು ಬದಲಾವಣೆ ಮಾಡಲು ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜತೆಗೆ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿಯು (KWDT-II) 2010ರಲ್ಲಿ ನೀಡಿರುವ ತೀರ್ಪಿನ ಅನ್ವಯ ತನಗೆ ಮೀಸಲಾಗಿರುವ ನೀರನ್ನು ಕರ್ನಾಟಕ ಬಳಸಿಕೊಳ್ಳಲು ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ” ಎಂದು ಹೇಳಿದರು.

“ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಮೇಲೆ ಒತ್ತಡ ತಂದು, 2018ರ ಆಗಸ್ಟ್ ನಲ್ಲಿ ಮಹದಾಯಿ ಜಲ ವಿವಾದ ನ್ಯಾಯಮಂಡಳಿ ನೀಡಿದ ತೀರ್ಪಿನ ಅನ್ವಯ ಕಳಸಾ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ದೊರಕಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಜಲಶಕ್ತಿ ಸಚಿವಾಲಯವು ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಮೇಲೆ ಒತ್ತಡ ಹೇರಿ, ನದಿ ಜೋಡಣೆ ಯೋಜನೆಯಡಿ ಗೋದಾವರಿ- ಕಾವೇರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಪಾಲನ್ನು ಮರುಪರಿಶೀಲನೆ ಮಾಡಬೇಕು. ಈ ಯೋಜನೆಯಡಿ ಪ್ರಸ್ತುತ ಕರ್ನಾಟಕಕ್ಕೆ ಕೇವಲ 15.891 ಟಿಎಂಸಿ (ಶೇ. 10.74) ನೀರನ್ನು ಮಾತ್ರ ಹಂಚಿಕೆ ಮಾಡಲಾಗಿದೆ” ಎಂದರು.

“ನಮ್ಮ ದೇಶವು ಪ್ರಪಂಚದ ಶೇ.18 ರಷ್ಟು ಜನಸಂಖ್ಯೆ ಹೊಂದಿದೆ. ಆದರೆ ಶೇ. 4 ರಷ್ಟು ಮಾತ್ರ ಶುದ್ದ ಕುಡಿಯುವ ನೀರಿನ ಮೂಲವನ್ನು ಹೊಂದಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ದೇಶವು ಸಾಕಷ್ಟು ಸವಾಲು ಎದುರಿಸಬೇಕಿದೆ. ಕೃಷಿ ಅಗತ್ಯಗಳಿಗೆ, ಬೆಳೆಯುತ್ತಿರುವ ಜನಸಂಖ್ಯೆಗೆ, ನಗರಗಳ ವಿಸ್ತರಣೆಗೆ, ಕೈಗಾರಿಕೆಗಳಿಗೆ ನೀರು ಬೇಡಿಕೆ ಪೂರೈಸಲು ಈಗಿನಿಂದಲೇ ಸನ್ನದ್ಧವಾಗಿರಬೇಕು” ಎಂದು ಹೇಳಿದರು.

“ದೇಶದಲ್ಲಿ ಈವರೆಗೆ ಸುಮಾರು 253 ಶತಕೋಟಿ ಘನ ಮೀಟರ್ (BCM) ನೀರಿನ ಸಂಗ್ರಹಣಾ ಸಾಮರ್ಥ್ಯವಿದೆ. ನಮ್ಮ ದೇಶವು ಸುಸ್ಥಿರ ಪ್ರಗತಿ ಸಾಧಿಸಲು ನೀರಿನ ಸಂಪನ್ಮೂಲ ಬಲಪಡಿಸುವ ಅಗತ್ಯವಿದೆ. ನೀರಿನ ಸಂಗ್ರಹ ಸಾಮರ್ಥ್ಯ ಮತ್ತು ಜಿಡಿಪಿ ಬೆಳವಣಿಗೆ ನಡುವೆ ನೇರ ಸಂಬಂಧವಿದೆ ಎಂದು ಅನೇಕ ತಜ್ಞರು ಹೇಳಿದ್ದಾರೆ” ಎಂದರು.

“ನೀರು ವಿಶಿಷ್ಟ ಸಂಪನ್ಮೂಲ. ಸುಸ್ಥಿರ ಆರ್ಥಿಕ ಬೆಳವಣಿಗೆಗೆ, ಮಾನವನ ಮೂಲಭೂತ ಅಗತ್ಯ ಪೂರೈಸಲು, ಪರಿಸರ ಸಮತೋಲನ ಕಾಯ್ದುಕೊಳ್ಳಲು ನೀರು ಮೂಲಾಧಾರ. ಹವಾಮಾನ ಬದಲಾವಣೆ, ಹೆಚ್ಚುತ್ತಿರುವ ನೀರಿನ ಮಾಲಿನ್ಯ ಮತ್ತು ವಿವಿಧ ವಲಯಗಳು ಅಥವಾ ಬಳಕೆದಾರರ ನಡುವಿನ ಸ್ಪರ್ಧೆಯಿಂದ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ” ಎಂದರು.

“ಕರ್ನಾಟಕವು ಪರಿಣಾಮಕಾರಿ ನಿರ್ವಹಣೆ ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸಾಧಿಸಲು ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ನೀರಾವರಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳಿಂದ ಅಕ್ರಮವಾಗಿ ನೀರು ಬಳಸಿಕೊಳ್ಳುವುದನ್ನು ತಡೆಯಲು ಕರ್ನಾಟಕ ನೀರಾವರಿ ಕಾಯ್ದೆಗೆ 1965ಕ್ಕೆ, 2024ರ ಆಗಸ್ಟ್ ನಲ್ಲಿ ತಿದ್ದುಪಡಿ ಮಾಡಲಾಯಿತು. ಕಾಲುವೆಗಳ ಮೂಲಕ ಅಕ್ರಮವಾಗಿ ನೀರು ಮೇಲೆತ್ತುವುದನ್ನು ತಪ್ಪಿಸಿ, ಕಾಲುವೆ ಕೊನೆ ಭಾಗದ ರೈತರಿಗೆ ನೀರು ಹೋಗುವಂತೆ ಮಾಡಲು ಈ ತಿದ್ದುಪಡಿ ಮಾಡಲಾಗಿದೆ. ಇದರ ವ್ಯಾಜ್ಯಗಳ ವಿಚಾರಣೆಗೆ ನೀರಾವರಿ ನ್ಯಾಯಾಲಯ ಸ್ಥಾಪನೆಗೆ ಅಗತ್ಯ ಸೆಕ್ಷನ್ ಗಳನ್ನು ಕಾಯ್ದೆಯಲ್ಲಿ ಸೇರಿಸಲಾಗಿದೆ, ಅಕ್ರಮಗಳ ವಿಚಾರಣೆ ನಡೆಸಲು ಅಧಿಕಾರಿಗಳಿಗೆ ಸೂಕ್ತ ಅಧಿಕಾರ ನೀಡಲಾಗಿದ್ದು, ಪೊಲೀಸರನ್ನು ಒಳಗೊಂಡ ಕಾರ್ಯಪಡೆಗೆ ಅವಕಾಶ ನಿಡುವ ಕುರಿತು ಈ ತಿದ್ದುಪಡಿ ಮಾಡಲಾಗಿದೆ” ಎಂದು ತಿಳಿಸಿದರು.

“ನೀರಾವರಿ ವಲಯದ ಪರಿಣಾಮಕಾರಿ ನಿರ್ವಹಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನೂತನ ರಾಜ್ಯ ಜಲ ನೀತಿಯನ್ನು 2022 ರಲ್ಲಿ ಜಾರಿಗೆ ತರಲಾಯಿತು. ಜಲ ಸಂರಕ್ಷಣೆ ಹಾಗೂ ಆರೋಗ್ಯ, ಆಹಾರ, ಇಂಧನ, ಪರಿಸರ ಉದ್ದೇಶಕ್ಕೆ ನೀರಿನ ಮೂಲಗಳ ಸಮರ್ಪಕ ಬಳಕೆಗೆ ಒತ್ತು ನೀಡಲು ಕೆಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಅವುಗಳೆಂದರೆ, ಪ್ರಸ್ತುತ ಜಲ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 29 ವಿವಿಧ ಶಾಸನಗಳಿದ್ದು, ಆ ಪೈಕಿ 14 ಕೇಂದ್ರ ಸರ್ಕಾರ ಹಾಗೂ 15 ರಾಜ್ಯ ಸರ್ಕಾರಗಳ ಕಾಯ್ದೆಗಳಾಗಿವೆ. ಮುಂದಿನ ದಿನಗಳಲ್ಲಿ ನೀರಿನ ಪರಿಣಾಮಕಾರಿ ಬಳಕೆಗೆ ಇನ್ನಷ್ಟು ತಿದ್ದುಪಡಿ ಮಾಡುವುದರ ಜತೆಗೆ ಹೊಸ ಕಾಯ್ದೆಗಳನ್ನು ಜಾರಿಗೆ ತರಬೇಕು. ಅಧಿಕಾರಗಳು, ಪ್ರಾಧಿಕಾರಗಳು, ಸಿಬ್ಬಂದಿ ಮತ್ತು ಸಂಪನ್ಮೂಲಗಳೊಂದಿಗೆ ಹೊಸ ಆಡಳಿತ ಸಂಸ್ಥೆಗಳ ಸ್ಥಾಪನೆ ಮಾಡಬೇಕು. ಸರ್ಕಾರಿ ಇಲಾಖೆಗಳ, ಸಂಸ್ಥೆಗಳ ಪುನರ್ ರಚನೆ. ಇವುಗಳ ನಿರ್ವಹಣೆಗಾಗಿ ನೂತನ ನಿರ್ದಿಷ್ಟ ಕಾರ್ಯಾಚರಣಾ ಪ್ರಕ್ರಿಯೆಗಳ (Standard Operating Procedures) ಅಭಿವೃದ್ಧಿ ಮತ್ತು ಅಳವಡಿಕೆ ಮಾಡಿಕೊಳ್ಳಬೇಕಿದೆ” ಎಂದರು.

“ಮಾನ್ಯ ಕೇಂದ್ರ ಸಚಿವರು ಕರ್ನಾಟಕದ ಬಾಕಿ ಇರುವ ಸಮಸ್ಯೆಗಳನ್ನು ಪರಿಗಣಿಸಲು ಮತ್ತು ಪರಿಹರಿಸಬೇಕಾಗಿ ಮನವಿ ಮಾಡುತ್ತೇನೆ. ಉತ್ತಮ ಸಂದರ್ಭದಲ್ಲಿ ನೀರಿನ ಕುರಿತು ಜಲ ಸಮ್ಮೇಳನವನ್ನು ಆಯೋಜಿಸಿದ್ದಕ್ಕಾಗಿ ಜಲಶಕ್ತಿ ಸಚಿವಾಲಯಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (50)

ದೆಹಲಿ ಸ್ಫೋಟ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ಸಿಎಂ ರೇಖಾ ಗುಪ್ತಾ

by ಶ್ರೀದೇವಿ ಬಿ. ವೈ
November 11, 2025 - 11:03 pm
0

Web (49)

ಮಾಲೂರು ಕ್ಷೇತ್ರದ ಮರುಎಣಿಕೆ ಮುಕ್ತಾಯ: ತೃಪ್ತಿಯಾಗಿಲ್ಲ ಎಂದ ಬಿಜೆಪಿ ಅಭ್ಯರ್ಥಿ

by ಶ್ರೀದೇವಿ ಬಿ. ವೈ
November 11, 2025 - 10:21 pm
0

Web (48)

ಬಿಗ್ ಬಾಸ್ ಕನ್ನಡ ಸೀಸನ್ 12: ಸೈಲೆಂಟ್ ಕ್ಯಾಪ್ಟನ್ ಮಾಳು ಈಗ ವಿಲನ್

by ಶ್ರೀದೇವಿ ಬಿ. ವೈ
November 11, 2025 - 9:08 pm
0

Web (47)

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

by ಶ್ರೀದೇವಿ ಬಿ. ವೈ
November 11, 2025 - 8:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (47)
    ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!
    November 11, 2025 | 0
  • Web (45)
    BREAKING: ಬಿಹಾರ ವಿಧಾನಸಭಾ ಚುನಾವಣೆ EXIT POLL-ಮತ್ತೆ NDA ದಿಗ್ವಿಜಯ..?
    November 11, 2025 | 0
  • Web (41)
    ಪತಿ RJD, ಪತ್ನಿ BJP: ವೋಟ್ ಗುಟ್ಟು ರಟ್ಟಾಗ್ತಿದ್ದಂತೆ ಹೊಡೆದಾಡಿಕೊಂಡ ದಂಪತಿ..!
    November 11, 2025 | 0
  • Untitled design 2025 11 11T144430.957
    BREAKING: ಕೆಂಪುಕೋಟೆ ಘಟನೆ ಬೆನ್ನಲ್ಲೇ ಇಸ್ಲಾಮಾಬಾದ್‌ನಲ್ಲಿ ಕಾರು ಸ್ಫೋಟ: ಐವರು ಸಾವು, 25 ಮಂದಿಗೆ ಗಾಯ
    November 11, 2025 | 0
  • Untitled design 2025 11 11T134935.286
    ದೆಹಲಿ ಸ್ಫೋಟ ಆತ್ಮಾಹುತಿ ಭಯೋತ್ಪಾದಕ ದಾಳಿಯಾ..?
    November 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version