ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಎಂದು ಗುರುತಿಸಲಾಗಿದೆ. ಕೆಂಭಾವಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆಯ ವಿವರ
ತಮ್ಮ ಇರ್ಫಾನ್‌ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ಗೂ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟರು.
ಇರ್ಫಾನ್ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು, ಆದರೆ ಶಂಶೋದ್ದೀನ್ ಕೃಷಿಯನ್ನೇ ತಮ್ಮ ಜೀವನಾಧಾರವಾಗಿ ಮಾಡಿಕೊಂಡಿದ್ದರು. ಈ ಘಟನೆಯಿಂದ ಅವರ ಕುಟುಂಬವು ಆರ್ಥಿಕವಾಗಿಯೂ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುವ ಸಾಧ್ಯತೆಯಿದೆ.