ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆ ಚುರುಕಾಗಿದ್ದು, ಆಗಸ್ಟ್ 10 ಮತ್ತು 11ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 10ರಂದು ಬಹುತೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಕಳೆದ ಕೆಲವು ದಿನಗಳಿಂದ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಕಡೆ ಹಗುರ ಮಳೆಯಾಗಬಹುದು. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೂ ಮಳೆ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲೂ ಆಗಸ್ಟ್ 10ರಂದು ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಆಗಸ್ಟ್ 11ರಂದು ಹೇಗಿರಲಿದೆ ಮಳೆ?
ಆಗಸ್ಟ್ 11ರಂದು ಕೂಡ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಬಹುದು.
ಇದೇ ವೇಳೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಪ್ರಸ್ತುತ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಕರಾವಳಿಯಲ್ಲಿ ಬಹುತೇಕ ಕಡೆ, ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.





