ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 8ರಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ. ಜೋರಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮರಗಳ ಕೆಳಗೆ, ವಿದ್ಯುತ್ ಕಂಬಗಳ ಸಮೀಪ ಹಾಗೂ ದುರ್ಬಲ ಕಟ್ಟಡಗಳ ಬಳಿ ನಿಲ್ಲದಿರುವುದು ಒಳಿತು.
ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಮಡಿಕೇರಿಯಲ್ಲಿ ಗರಿಷ್ಠ 22 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಗರಿಷ್ಠ-ಕನಿಷ್ಠ ತಾಪಮಾನ
ಬೆಂಗಳೂರು 27°C – 21°C, ಮಂಗಳೂರು28°C – 25°C , ಶಿವಮೊಗ್ಗ 26°C – 22°C ,ಬೆಳಗಾವಿ 26°C – 22°C ,ಮೈಸೂರು 27°C – 22°C ,ಮಂಡ್ಯ 28°C – 22°C, ಮಡಿಕೇರಿ 22°C – 20°C, ರಾಮನಗರ 28°C – 22°C, ಹಾಸನ 25°C – 21°C, ಚಾಮರಾಜನಗರ 28°C – 22°C, ಚಿಕ್ಕಬಳ್ಳಾಪುರ 27°C – 21°C, ಹುಬ್ಬಳ್ಳಿ 27°C – 23°Cಚಿತ್ರದುರ್ಗ 27°C – 22°C, ಹಾವೇರಿ 27°C – 23°C, ಬಳ್ಳಾರಿ 31°C – 24°C, ಗದಗ 28°C – 22°C, ಕೊಪ್ಪಳ 30°C – 23°C, ರಾಯಚೂರು 32°C – 25°C, ಯಾದಗಿರಿ 31°C – 25°C, ವಿಜಯಪುರ 31°C – 24°C, ಕಲಬುರಗಿ 32°C – 24°C, ಬಾಗಲಕೋಟೆ 30°C – 23°C
ಒಟ್ಟಾರೆ ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಹಾಗೂ ಗುಡುಗು-ಸಿಡಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸುವುದು ಸೂಕ್ತ.
