ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ
ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಈ ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶವು 35°C-39°C ನಡುವೆ ದಾಖಲಾಗುತ್ತಿದೆ.
ಕಲಬುರಗಿಯಲ್ಲಿ 39.2°C ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ದಾವಣಗೆರೆಯಲ್ಲಿ 13.5°C ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ ಕಾರವಾರ, ಪಣಂಬೂರು ಹಾಗೂ ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ.