ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೇ 14ರಂದು (ನಾಳೆ) ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ತಾಪಮಾನ ಏರಿಕೆಯ ಎಚ್ಚರಿಕೆ ನೀಡಲಾಗಿದ್ದರೂ, ಕರಾವಳಿ, ದಕ್ಷಿಣ ಒಳನಾಡು ಮತ್ತು ಕೆಲವು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಮುಖ್ಯ ಮುನ್ಸೂಚನೆಗಳು :
- ಮುಕ್ಕಾಲು ಕರ್ನಾಟಕದಲ್ಲಿ ವ್ಯಾಪಕ ಮಳೆಯ ಸಾಧ್ಯತೆ
- ಗುಡುಗು, ಮಿಂಚು ಮತ್ತು ಭಾರಿ ಗಾಳಿಯ ಜೊತೆ ಮಳೆ
- ಉತ್ತರ ಒಳನಾಡಿನಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳ
- ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆ
ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಕರಾವಳಿ ಜಿಲ್ಲೆಗಳು: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸಾಧಾರಣ ಮಳೆ
ದಕ್ಷಿಣ ಒಳನಾಡು ಜಿಲ್ಲೆಗಳು: ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ ಗುಡುಗು-ಮಿಂಚು ಸಹಿತ ಮಳೆ.
ಉತ್ತರ ಒಳನಾಡು ಜಿಲ್ಲೆಗಳು: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮಳೆಯ ಸಾಧ್ಯತೆ
ಒಣ ಹವೆ ಮುಂದುವರಿಯುವ ಜಿಲ್ಲೆಗಳು: ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಮಂಡ್ಯ
ಬೆಂಗಳೂರು ಹವಾಮಾನ :
ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ನಾಳೆ ಮಳೆಯ ಸಾಧ್ಯತೆ ಇದೆ. ಗರಿಷ್ಠ ತಾಪಮಾನ: 34° ಸೆಲ್ಸಿಯಸ್ ಕನಿಷ್ಠ ತಾಪಮಾನ: 23° ಸೆಲ್ಸಿಯಸ್ ಗಾಳಿಯ ವೇಗ: ಗಂಟೆಗೆ ಸುಮಾರು 10 ಕಿ.ಮೀ.
ಸಲಹೆ : ರೈತರು, ಪ್ರಯಾಣಿಕರು ಮತ್ತು ಸಾರ್ವಜನಿಕರು ಹವಾಮಾನದ ಬದಲಾವಣೆಗೆ ಸೂಕ್ತ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
