ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಮಹಿಳೆ ಆತ್ಮಹತ್ಯೆ

Untitled design 2025 08 08t170057.419

ಉತ್ತರ ಕನ್ನಡ: ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಒಂದು ಹೊತ್ತಿನ ಊಟಕ್ಕೂ ಗತಿಯಿಲ್ಲದೇ ತಮ್ಮ ದೇಹಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಘಟನೆ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಲಕ್ಷ್ಮೀ ಮಹಾದೇವ ನಾಗೇಶ ಸಿದ್ದಿ (48) ಎಂದು ಗುರುತಿಸಲಾಗಿದೆ.

ಲಕ್ಷ್ಮೀ ಸಿದ್ದಿ ತಮ್ಮ ಗಂಡನಿಂದ ಬೇರೆಯಾಗಿ ಏಕಾಂಗಿಯಾಗಿ ವಾಸಿಸುತ್ತಿದ್ದರು. ಕೌಟುಂಬಿಕ ಕಾರಣಗಳಿಂದ ಗಂಡನಿಂದ ಬೇರೆಯಾಗಿದ್ದ ಇವರು, ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಒಂದು ಹೊತ್ತಿನ ಊಟಕ್ಕೂ ಅಡುಗೆ ಸಾಮಗ್ರಿಗಳಿಲ್ಲದೆ, ಬೇರೆಯವರನ್ನು ಅವಲಂಬಿಸಬೇಕಾದ ದುಸ್ಥಿತಿಯಲ್ಲಿದ್ದರು. ಈ ಆರ್ಥಿಕ ಕೊರತೆಯಿಂದ ಮಾನಸಿಕವಾಗಿ ಕುಗ್ಗಿದ್ದ ಲಕ್ಷ್ಮೀ, ತಮ್ಮ ಮನೆಯಲ್ಲಿ ದೇಹಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸ್ಥಳೀಯರ ಸಹಕಾರದಿಂದ ತಕ್ಷಣವೇ ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಈ ಘಟನೆಯ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯರು ಈ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

Exit mobile version