ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ಖಾಸಗಿ ಬಸ್‌ನಲ್ಲಿ 1 ಕೋಟಿ ರೂಪಾಯಿಗಳ ದಾಖಲೆ ರಹಿತ ಹಣವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಈ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಖಾಸಗಿ ಬಸ್‌ನ ದಿನನಿತ್ಯದ ತಪಾಸಣೆ ವೇಳೆ, ಪೊಲೀಸರು ಕಶಕುಮಾರ್ ಮತ್ತು ಬೊಂಬ್ರಾ ರಾಮ್ ಎಂಬ ಇಬ್ಬರ ಬ್ಯಾಗ್‌ಗಳಲ್ಲಿ 1 ಕೋಟಿ ರೂಪಾಯಿಗಳ ದಾಖಲೆ ರಹಿತ ಹಣವನ್ನು ಪತ್ತೆ ಮಾಡಿದ್ದಾರೆ. ಈ ಹಣವು Mxon ಎಲೆಕ್ಟ್ರಾನಿಕ್ ಹಾರ್ಡ್‌ವೇರ್ ಕಂಪನಿಗೆ ಸಂಬಂಧಿಸಿದ್ದಾಗಿದ್ದು, ತೆರಿಗೆ ವಂಚನೆಗಾಗಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ನಡೆದ ತಪಾಸಣೆಯ ಸಂದರ್ಭದಲ್ಲಿ, ಪೊಲೀಸರು ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಲ್ಪೇಶ್ ಕುಮಾರ್ ಮತ್ತು ಬೊಂಬ್ರಾ ರಾಮ್ ಎಂಬವರ ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ದೊಡ್ಡ ಪ್ರಮಾಣದ ನಗದು ಪತ್ತೆಯಾಗಿದೆ. ಈ ಹಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾನೂನಿನ ದಾಖಲೆಗಳನ್ನು ಆರೋಪಿಗಳು ಒದಗಸಿಲ್ಲಿ. ತನಿಖೆಯ ಆರಂಭಿಕ ಹಂತದಲ್ಲಿ, ಈ ಹಣವು Mxon ಎಲೆಕ್ಟ್ರಾನಿಕ್ ಹಾರ್ಡ್‌ವೇರ್ ಕಂಪನಿಯಿಂದ ಬಂದಿದ್ದು, ತೆರಿಗೆ ವಂಚನೆಗಾಗಿ ಗೋವಾದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಕಾರವಾರ ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ, ಈ ಹಣದ ಮೂಲದ ಬಗ್ಗೆ ಆದಾಯ ತೆರಿಗೆ ಇಲಾಖೆಯಿಂದ ಆಳವಾದ ತನಿಖೆ ನಡೆಯಲಿದೆ.
