• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇದು ಕನ್ನಡಿಗರಿಗೆ ಸೇರಿದ ಜಮೀನು, ಬಾಂಗ್ಲಾದವರಿಗೆ ನೀಡಲು ಬಿಡುವುದಿಲ್ಲ: ಆರ್‌.ಅಶೋಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 5, 2026 - 3:52 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 05T154849.270

ಬೆಂಗಳೂರು, ಜನವರಿ 5: ಬಾಂಗ್ಲಾದೇಶದ ಜನರಿಗೆ ಕೋಗಿಲು ಕ್ರಾಸ್‌ನಲ್ಲಿ ಒಂದು ಮನೆ ನೀಡಿದರೂ ಅದು ಕೆಟ್ಟ ಪರಂಪರೆಗೆ ನಾಂದಿ ಹಾಡಲಿದೆ. ಕನ್ನಡಿಗರಿಗೆ ಸೇರಿದ ಜಮೀನನ್ನು ಬಾಂಗ್ಲಾ ಜನರಿಗೆ ನೀಡಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು.

ಕೋಗಿಲು ಕ್ರಾಸ್‌ ಬಳಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ ಬೇರೆ ಬೇರೆ ಜಿಲ್ಲೆಗಳಿಂದ ಬಡವರು ಬಂದಿದ್ದಾರೆ. ಅನೇಕರು ಮನೆ ಇಲ್ಲದೆ ಪಾದಚಾರಿ ಮಾರ್ಗದಲ್ಲಿ ಮಲಗುತ್ತಿದ್ದಾರೆ. ಇಂತಹವರು ಸಿಎಂ ಸಿದ್ದರಾಮಯ್ಯನವರಿಗೆ ಕಾಣುವುದಿಲ್ಲ. ಆದರೆ ಬಾಂಗ್ಲಾದೇಶದಿಂದ ಬಂದವರು ಇವರಿಗೆ ಸುಲಭವಾಗಿ ಕಾಣುತ್ತಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಬಾಂಗ್ಲಾ ಟು ಬೆಂಗಳೂರು ಎಂಬ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಆರಂಭವಾಗಲಿದೆ. ಸರ್ಕಾರದ ದಾಖಲೆ ಪ್ರಕಾರ, ರಾಜ್ಯದಲ್ಲಿ 36 ಲಕ್ಷ ಬಡವರು ಮನೆ ಹಾಗೂ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಂತಹವರಿಗೆ ಮನೆ ನೀಡಿಲ್ಲ. ಇವರೆಲ್ಲರೂ ಗೃಹಮಂಡಳಿ ಬಳಿ ಹೋದರೆ ನಾಳೆ ಬಾ ಎನ್ನುತ್ತಾರೆ ಎಂದರು.

RelatedPosts

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಸರ್ಜಾಪುರದಲ್ಲಿ ಬೈಕ್ ಜೊತೆಗೆ ಸುಟ್ಟ ಯುವಕನ ಶವ ಪತ್ತೆ: ಕೊಲೆ ಶಂಕೆ

ಕ್ವಾರಿ ದುರಂತ: ಆರ್‌ಆರ್ ಆಸ್ಪತ್ರೆಗೆ ಡಿಕೆ ಶಿವಕುಮಾರ್ ಭೇಟಿ, ನಾಲ್ವರು ವಶಕ್ಕೆ

ADVERTISEMENT
ADVERTISEMENT

ಕೋಗಿಲು ಕ್ರಾಸ್‌ನಲ್ಲಿ ಇಡೀ ಸರ್ಕಾರ ಬಂದು ನಿಂತಿದೆ. ಕಂದಾಯ ಅಧಿಕಾರಿಗಳು, ಪೊಲೀಸರು ಎಲ್ಲರೂ ಇಲ್ಲೇ ಇದ್ದು ಆ ಜನರಿಗೆ ರಕ್ಷಣೆ ನೀಡುತ್ತಿದ್ದಾರೆ. ಕೇವಲ ಮತಕ್ಕಾಗಿ ಇವರಿಗೆ ಸರ್ಕಾರ ಪ್ರೀತಿ ತೋರಿಸುತ್ತಿದೆ. ಬಾಂಗ್ಲಾದೇಶದಲ್ಲಿರುವ 16 ಕೋಟಿ ಜನರ ಪೈಕಿ, 3 ಕೋಟಿ ಜನರು ಕಾಣೆಯಾಗಿ ಭಾರತಕ್ಕೆ ಬಂದಿದ್ದಾರೆ. ಬೆಂಗಳೂರು, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮೊದಲಾದ ಕಡೆಗಳಲ್ಲಿ ಅವರು ವಾಸಿಸುತ್ತಿದ್ದಾರೆ. ಇಂದು ಕಾಶ್ಮೀರದಲ್ಲಿ ಸಾಮಾನ್ಯ ಜನರು ಓಡಾಡಲು ಭಾರತೀಯ ಸೇನೆಯ ರಕ್ಷಣೆ ಬೇಕಾಗಿದೆ. ಜಮ್ಮು ಕಾಶ್ಮೀರವನ್ನು ಉಳಿಸಲು ಅತ್ಯಧಿಕ ಹಣ ಖರ್ಚು ಮಾಡಲಾಗುತ್ತಿದೆ. ಬೆಂಗಳೂರಿಗೆ ಇಂತಹ ಸ್ಥಿತಿ ಬರಬಾರದು ಎಂದರು.

ಇಲ್ಲಿ 150 ಅಕ್ರಮ ಮನೆಗಳನ್ನು ಒಡೆದು ಹಾಕಲಾಗಿದೆ. ಆದರೆ ಈಗ 280 ನಿವಾಸಿಗಳು ಬಂದಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇಷ್ಟಾದರೂ ಬ್ಯಾಟರಾಯನಪುರ ಶಾಸಕರು ಪತ್ತೆಯೇ ಇಲ್ಲ. ಪ್ರತಿಭಟನೆ ಮಾಡಲು ಬಂದರೆ ಪೊಲೀಸರು 60 ಕ್ಕೂ ಅಧಿಕ ಬಸ್‌ಗಳನ್ನು ತಡೆದಿದ್ದಾರೆ. ಈ ಸರ್ಕಾರ ಎರಡು ವರ್ಷವೂ ಇರುವುದಿಲ್ಲ. ಪ್ರತಿಭಟನಾಕಾರರನ್ನು ತಡೆದರೆ ಇನ್ನಷ್ಟು ಉಗ್ರವಾಗಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಓಂ ಶಕ್ತಿ ಮಾಲಾಧಾರಿಗಳು ಮೆರವಣಿಗೆ ಹೋಗುವಾಗ ಕಲ್ಲು ತೂರಾಟ ನಡೆದಿದೆ. ಗಣೇಶ ಮೆರವಣಿಗೆ ನಡೆದರೂ ಹೀಗೆಯೇ ಆಗುತ್ತಿದೆ. ಗಣೇಶನ ಮೂರ್ತಿಯನ್ನು ಪೊಲೀಸರು ಠಾಣೆಯಲ್ಲಿ ಇಟ್ಟಿದ್ದರು. ಮತ ಕೊಟ್ಟ ಹಿಂದೂಗಳಿಗೆ ಕಾಂಗ್ರೆಸ್‌ ದ್ರೋಹ ಎಸಗಿದೆ. ಕೋಗಿಲು ಕ್ರಾಸ್‌ಗೆ ಬೇರೆ ಭಾಗಗಳಿಂದ ಮುಸ್ಲಿಮರನ್ನು ಕರೆದು ತಂದು ಆಧಾರ್‌ ಕಾರ್ಡ್‌ ತೋರಿಸುತ್ತಿದ್ದಾರೆ. ಒಬ್ಬ ಮಹಿಳೆ ಪೆನುಗೊಂಡದಿಂದ ಬಂದಿದ್ದು, ಅವರನ್ನು ಪ್ರಶ್ನಿಸಿದರೆ 25 ವರ್ಷದ ಹಿಂದೆಯೇ ಬಂದೆ ಎಂದು ಹೇಳಿದರು.

ಅಂದರೆ ಅವರು 2 ವರ್ಷದ ಮಗುವಾಗಿದ್ದಾಗಲೇ ಇಲ್ಲಿ ಮನೆ ಕಟ್ಟಿದ್ದರು. ಇಂತಹ ಘಟನೆಗಳು ನಡೆಯುವುದು ಕರ್ನಾಟಕದ ಉದ್ದಾರಕ್ಕೆ ಅಲ್ಲ. ಕೇರಳ ಚುನಾವಣೆಗಾಗಿ ಹಾಗೂ ಕಾಂಗ್ರೆಸ್‌ ನಾಯಕ ವೇಣುಗೋಪಾಲ್‌ ಮುಖ್ಯಮಂತ್ರಿಯಾಗಲು, ಅವರ ಮಾತು ಕೇಳಿಕೊಂಡು ಇಲ್ಲಿನ ಕಾಂಗ್ರೆಸ್‌ ಹೀಗೆ ಮಾಡುತ್ತಿದೆ. ಅಲ್ಲಿನ ಸಿಎಂ ಪಿಣರಾಯಿ ವಿಜಯನ್‌ ಸಿಎಂ ಆಗಿ ಉಳಿಯಲು ಟೀಕೆ ಮಾಡುತ್ತಿದ್ದಾರೆ. ಆದರೆ ಇಲ್ಲಿ 600 ಕೋಟಿ ರೂ. ಬೆಲೆಬಾಳುವ ಜಮೀನನ್ನು ಇವರಿಗೆ ನೀಡಲಾಗಿದೆ ಎಂದರು.

ರಾಜೀವ್‌ ಗಾಂಧಿ ವಸತಿ ನಿಗಮದಲ್ಲಿ ಮನೆಗಾಗಿ ಆನ್‌ಲೈನ್‌ ಅರ್ಜಿ ಸಲ್ಲಿಸಬೇಕು. ಅರ್ಜಿ ಅಂತಿಮವಾಗಲು ಎರಡು ವರ್ಷ ಬೇಕಾಗುತ್ತದೆ. ಆದರೆ ಇಲ್ಲಿನ ನಿವಾಸಿಗಳಿಗೆ ಎರಡೇ ದಿನದಲ್ಲಿ ಮನೆ ಮಂಜೂರು ಮಾಡುತ್ತಿದ್ದಾರೆ. ಇದು ಇಡೀ ಕನ್ನಡಿಗರ ಪ್ರಶ್ನೆ. ಬಾಂಗ್ಲಾದವರು ಬಂದು ಇಲ್ಲಿಯೇ ಇದ್ದರೆ ಕಳ್ಳತನ, ದರೋಡೆ, ಡ್ರಗ್ಸ್‌ ಮಾಫಿಯಾ ಹೆಚ್ಚಲಿದೆ. ಆದ್ದರಿಂದ ಕರ್ನಾಟಕವನ್ನು ಕನ್ನಡಿಗರಿಗೆ ಉಳಿಸಿ ಎಂಬ ಸಂದೇಶ ನೀಡುತ್ತಿದ್ದೇವೆ ಎಂದರು.

ಕೋಗಿಲು ಕ್ರಾಸ್‌ನ ಜಮೀನು ಕಾಂಗ್ರೆಸ್‌ ಪಕ್ಷದ್ದಲ್ಲ. ಕಾಂಗ್ರೆಸ್‌ ನಾಯಕ ವೇಣುಗೋಪಾಲ್‌ ಮಾತು ಕೇಳಿಕೊಂಡು ಇಲ್ಲಿ ಜಾಗ ನೀಡಬೇಕಿಲ್ಲ. ಹಿಂದೂಗಳ ಕೊಲೆಯಾದರೂ ಕಾಂಗ್ರೆಸ್‌ ನಾಯಕರು ಮಾತನಾಡಲ್ಲ. ಆದರೆ ಬಾಂಗ್ಲಾದ ಜನರಿಗೆ ಏನೇ ಆದರೂ ಮಾತಾಡುತ್ತಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡದೆ ಹೋರಾಟ ಮಾಡಲಾಗುವುದು. ಮುಂದಿನ ಅಧಿವೇಶನದಲ್ಲೂ ಹೋರಾಡುತ್ತೇವೆ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (34)

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

by ಕವಿತಾ
July 2, 2026 - 11:30 pm
0

Untitled design (33)

ಭಾರತ ಜಪಾನ್ ಭರ್ಜರಿ ಪ್ಲಾನ್ :ಬಿದಿರಿನಿಂದ ತೈಲ ತಯಾರಿಸಲು ಭಾರತ ಜಪಾನ್ ಒಪ್ಪಂದ

by Hemanth Kumar S
July 2, 2026 - 11:01 pm
0

Untitled design (32)

ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

by ಕವಿತಾ
July 2, 2026 - 10:56 pm
0

Untitled design (31)

ಸರ್ಜಾಪುರದಲ್ಲಿ ಬೈಕ್ ಜೊತೆಗೆ ಸುಟ್ಟ ಯುವಕನ ಶವ ಪತ್ತೆ: ಕೊಲೆ ಶಂಕೆ

by ಕವಿತಾ
July 2, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • New Project (5)
    ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ರಿಲೀಸ್
    July 2, 2026 | 0
  • ಅಲರ್ಟ್ (13)
    ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ
    July 2, 2026 | 0
  • ಅಲರ್ಟ್ (12)
    ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ
    July 2, 2026 | 0
  • ಅಲರ್ಟ್ (10)
    ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ
    July 2, 2026 | 0
  • ಅಲರ್ಟ್ (9)
    ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version