ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ KSRTC ಬಸ್: 29 ಪ್ರಯಾಣಿಕರಿಗೆ ಗಾಯ

Untitled design 2025 11 17T093437.068

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ 29 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ವಿವರ

ಬಾದಾಮಿ ಪ್ರದೇಶದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಸೂಳೆಮೂರ್ಕಿ ಕ್ರಾಸ್ ಬಳಿ ತೀವ್ರ ವೇಗದಲ್ಲಿ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಿಂದ ಹಳ್ಳಕ್ಕೆ ಉರುಳಿ ಪಲ್ಟಿಯಾಗಿದೆ. ಲಕ್ಷ ದೀಪೋತ್ಸದ ಹಿನ್ನೆಲೆ  ಅನೇಕ ಭಕ್ತರು ಬಾದಾಮಿಯಿಂದ ಧರ್ಮಸ್ಥಳಕ್ಕೆ ಸಾರಿಗೆ ಬಸ್ ಮೂಲಕ ಪ್ರಯಾಣಿಸುತ್ತಿದ್ದರು.. ಬಸ್‌ನಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ ವಿವಿಧ ವಯೋಮಾನದ ಪ್ರಯಾಣಿಕರು ಇದ್ದರು. ಉರುಳಿದ ಬಸ್ ಹಳ್ಳದಲ್ಲಿ ಸಿಲುಕಿ ಹಾಕಿಕೊಂಡಿದ್ದು, ಸ್ಥಳೀಯರು ಮತ್ತು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳ ಚಾಲಕರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಗಾಯಗೊಂಡ 29 ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದರೆ, ಕೆಲವರಿಗೆ ಗಂಭಿರ ಗಾಯಗಳಾಗಿವೆ. ತಲೆಗೆ, ಕೈಕಾಲುಗಳಿಗೆ ಮತ್ತು ಬೆನ್ನಿನ ಭಾಗಕ್ಕೆ ಗಾಯಗಳಾಗಿವೆ. ಸ್ಥಳೀಯರು ಮತ್ತು ಪೊಲೀಸರು ಆಗಮಿಸಿ ಗಾಯಾಳುಗಳನ್ನು ತಕ್ಷಣ ಹೊನ್ನಾವರ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡ ತುರ್ತು ಚಿಕಿತ್ಸೆ ನೀಡಲಾಗಿತ್ತಿದೆ. ಕೆಲವು ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಅಥವಾ ಮಂಗಳೂರಿನ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ.

 ಭೀಕರ ಬಸ್ ಅಪಘಾತ: 25ಕ್ಕೂ ಹೆಚ್ಚು ಜನರಿಗೆ ಗಾಯ

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಂಗಮ ಬಳಿಯ ಟೂರಿಸ್ಟ್ ಸ್ಥಳದ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಎರಡು ಖಾಸಗಿ ಬಸ್‌ಗಳು ಈ ಅಪಘಾತಕ್ಕೀಡಾಗಿವೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಬ್ರೇಕ್ ಫೇಲ್ ಆಗಿ ಬಸ್ ಹಳ್ಳಕ್ಕೆ ಉರುಳಿದ ಭಯಾನಕ ಕ್ಷಣ:

ಪ್ರವಾಸಿಗರನ್ನು ಕರೆದುಕೊಂಡು ಸಾಗುತ್ತಿದ್ದ ಒಂದು ಖಾಸಗಿ ಬಸ್, ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿಬಿದ್ದಿದೆ. ಬಸ್ ಪೂರ್ತಿಯಾಗಿ ಹಳ್ಳದಲ್ಲಿ ನುಗ್ಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ಭಾರೀ ಆಘಾತ ಬೀರಿದೆ. ಪರಿಣಾಮ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಇನ್ನೊಂದು ಬಸ್ ಮರಕ್ಕೆ ಡಿಕ್ಕಿ:

ಹಳ್ಳಕ್ಕೆ ಬಿದ್ದ ಬಸ್ ಹಿಂದೆ ಸಾಗುತ್ತಿದ್ದ ಮತ್ತೊಂದು ಖಾಸಗಿ ಬಸ್ ಕೂಡಾ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ದೊಡ್ಡ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಲ್ಲಿಯೂ ಕೆಲ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿರುವುದು ತಿಳಿದುಬಂದಿದೆ.

ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆ:

ಅಪಘಾತದ ತಕ್ಷಣದ ನಂತರ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಕನಕಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಕೆಲವರ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಗರದಲ್ಲಿನ ವಿವಿಧ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹಬ್ಬದ ಪ್ರಯಾಣ ದುರ್ಘಟನೆಯಾಗಿ ಪರ್ಯವಸಾನ:

ಘಟನೆಯಲ್ಲಿದ್ದವರಲ್ಲೊಬ್ಬರು ತಿಳಿಸಿದಂತೆ, ಅಪಘಾತಕ್ಕೆ ಒಳಗಾದ ಪ್ರವಾಸಿಗರು ಕ್ರಿಶ್ಚಿಯನ್ ಹಬ್ಬದ ನಿಮಿತ್ತ ಮೊದಲು ಬೆಂಗಳೂರಿನಿಂದ ರಾಮನಗರದ ಹಲಸೂರು ಗ್ರಾಮದ ಬೆಟ್ಟಕ್ಕೆ ಭೇಟಿ ನೀಡಿದ್ದರು. ಅಲ್ಲಿ ಹಬ್ಬದ ಊಟ ಮುಗಿಸಿ, ನಂತರ ಸಂಗಮ ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ರಸ್ತೆ ತಿರುವಿನಲ್ಲಿ ಈ ದುರ್ಘಟನೆಯಾಗಿರುವುದು ಸ್ಪಷ್ಟವಾಗಿದೆ. ಅಪಘಾತಕ್ಕೀಡಾದವರಲ್ಲಿ ಬಹುಪಾಲು ಬೆಂಗಳೂರಿನ ಈಜಿಪುರ ಪ್ರದೇಶದ ನಿವಾಸಿಗಳಾಗಿದ್ದಾರೆ ಎನ್ನಲಾಗಿದೆ.

 

Exit mobile version