ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಡ್ಡಿ ಘಾಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬಸ್ ಚಾಲಕ, ನಿರ್ವಾಹಕ ಸೇರಿ ಒಟ್ಟು 49 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಬಚಾವ್ ಆಗಿದ್ದು, ಗಾಯಾಳುಗಳನ್ನು ಅಂಕೋಲ್ ಮತ್ತು ಕುಮಟಾ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಬಳ್ಳಾರಿಯಿಂದ ಕುಮಟಾ ಕಡೆಗೆ ಪ್ರಯಾಣಿಸುತ್ತಿದ್ದ ಬಸ್ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಚಾಲಕ ಸುರೇಶ್ ಕುಮಾರ್ (42) ಮತ್ತು ನಿರ್ವಾಹಕ ರಾಜೇಶ್ (38) ಸೇರಿದಂತೆ 49 ಜನರು ಗಾಯಗೊಂಡಿದ್ದರು. ಮಹಿಳೆಯರು, ಮಕ್ಕಳು, ವೃದ್ಧರ ಸೇರಿದಂತೆ ಎಲ್ಲರೂ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಅಂಕೋಲಾ ಠಾಣೆಯ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಪೊಲೀಸರು, ಸ್ಥಳೀಯರು ಜೊತೆಗೂಡಿ ಗಾಯಗೊಂಡ ಪ್ರಯಾಣಿಕರನ್ನು ಬಸ್ಸಿನಿಂದ ಸುರಕ್ಷಿತವಾಗಿ ಹೊರತಂದರು. ಕೆಲವರು ಗಂಭೀರವಾಗಿ ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದೆ.