• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೆಹಲಿಗೆ ಹಣ ಕೊಡಲು ಈ ಯೋಜನೆ ಬೇಕಾ?: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 9, 2026 - 2:45 pm
in ಕರ್ನಾಟಕ
0 0
0
ಭಾವುಕರಾದ (27)

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್–ಬಿಜೆಪಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಭೈರಮಂಗಲ ಗ್ರಾಮದಲ್ಲಿ ಚಾಲನೆ ದೊರೆತಿದೆ. ಸಸಿಗೆ ನೀರು ಹಾಕುವ ಮೂಲಕ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರೈತರ ಜಮೀನುಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಪಾದಯಾತ್ರೆ ವೇಳೆ ಮಾತನಾಡಿದ ಕುಮಾರಸ್ವಾಮಿ, ರೈತರ ಹಿತಕ್ಕಾಗಿ ಜೆಡಿಎಸ್ ಹೋರಾಟ ನಡೆಸುತ್ತಿದೆ. ಕಳೆದ 515 ದಿನಗಳಿಂದ ರೈತರು ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಹಲವು ರೀತಿಯ ಒತ್ತಡ ಮತ್ತು ಬೆದರಿಕೆಗಳ ನಡುವೆಯೂ ರೈತರು ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಈ ಹೋರಾಟ ಯಾವುದೇ ರಾಜಕೀಯ ಸ್ವಾರ್ಥಕ್ಕಾಗಿ ನಡೆಯುತ್ತಿಲ್ಲ. ರೈತರ ಭೂಮಿ ಮತ್ತು ಭವಿಷ್ಯವನ್ನು ರಕ್ಷಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು.

RelatedPosts

AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!

ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?

ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

ADVERTISEMENT
ADVERTISEMENT

ಬಿಡದಿ ಟೌನ್‌ಶಿಪ್ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ 2006ರಲ್ಲಿ ಯೋಜನೆ ಪ್ರಾರಂಭಿಸಿದಾಗ ಇದ್ದ ನಿರ್ಧಾರವೇ ಬೇರೆ ಆಗಿತ್ತು. ತಮ್ಮ ಅವಧಿಯಲ್ಲಾಗಲಿ ಅಥವಾ ಬಿಜೆಪಿ ಸರ್ಕಾರದ ಅವಧಿಯಲ್ಲಾಗಲಿ ಯೋಜನೆಗೆ ಸಂಬಂಧಿಸಿದ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆ ಹೊರಡಿಸಿರಲಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ರೈತರ ಜಮೀನಿಗೆ ಮೊದಲು 2 ಕೋಟಿ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಹೇಳಲಾಗಿತ್ತು. ಇದೀಗ 3 ಕೋಟಿ ರೂಪಾಯಿ ನೀಡುವುದಾಗಿ ಹೇಳುತ್ತಿದ್ದಾರೆ. ‘ಏನು ವ್ಯಾಪಾರ ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ರೈತರ ಭೂಮಿಯನ್ನು ಪೊಲೀಸ್ ಬಲ ಬಳಸಿ ವಶಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. 2006ರಲ್ಲಿ 2,600 ಎಕರೆ ಸರ್ಕಾರಿ ಜಮೀನು ಇತ್ತು. ಆ ಜಮೀನು ಈಗ ಎಲ್ಲಿಗೆ ಹೋಯಿತು ಎಂಬುದನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಯೋಜನೆ ಕುರಿತು ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿರುವುದನ್ನೂ ಕುಮಾರಸ್ವಾಮಿ ಪ್ರಶ್ನಿಸಿದರು. 2006ರಲ್ಲಿಯೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಆ ಸಮಿತಿ ಏನು ವರದಿ ನೀಡಿತ್ತು ಎಂಬುದನ್ನು ಸರ್ಕಾರ ಮೊದಲು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಸಚಿವ ಹೆಚ್.ಸಿ. ಬಾಲಕೃಷ್ಣ ವಿರುದ್ಧವೂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ‘ಬಾಲಕೃಷ್ಣ ನನ್ನ ಹಳೆಯ ಮಿತ್ರ’ ಎಂದು ಹೇಳುವುದಿಲ್ಲ ಎಂದು ವ್ಯಂಗ್ಯವಾಡಿದ ಅವರು, ಬಾಲಕೃಷ್ಣ ಅವರು ಜೆಡಿಎಸ್‌ನಲ್ಲಿ ಮೂರು ಬಾರಿ, ಬಿಜೆಪಿಯಲ್ಲಿ ಒಂದು ಬಾರಿ ಹಾಗೂ ಕಾಂಗ್ರೆಸ್‌ನಲ್ಲಿ ಒಂದು ಬಾರಿ ಗೆದ್ದಿದ್ದಾರೆ. ಇದೀಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಯೋಜನೆಗೆ ಕೆಲ ದಲ್ಲಾಳಿಗಳು ಮಾತ್ರ ಒಪ್ಪಿಗೆ ಸೂಚಿಸಿ ಜಮೀನು ನೀಡುತ್ತಿದ್ದಾರೆ. ಆದರೆ ಪಿತ್ರಾರ್ಜಿತ ಆಸ್ತಿ ಹೊಂದಿರುವ ರೈತರು ಹಾಗೂ ಸ್ವಾಭಿಮಾನಿ ರೈತ ಮಹಿಳೆಯರು ಯೋಜನೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ರೈತರು ಇಂತಹವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

ಇದೇ ವೇಳೆ ನೈಸ್ ರಸ್ತೆಯ ಟೋಲ್ ಸಂಗ್ರಹದ ವಿಚಾರದಲ್ಲೂ ಸರ್ಕಾರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಹೈಕೋರ್ಟ್ ತೀರ್ಪನ್ನು ಅನುಸರಿಸಿ ಜನರು ಕಾನೂನುಬಾಹಿರವಾಗಿ ಟೋಲ್ ಹಣ ಪಾವತಿಸಬಾರದು ಎಂದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (32)

ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!

by ಶಾಲಿನಿ ಕೆ. ಡಿ
September 26, 2026 - 1:46 pm
0

Your paragraph text (30)

AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!

by ಶಾಲಿನಿ ಕೆ. ಡಿ
September 26, 2026 - 1:19 pm
0

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಯೋತ್ಪಾದನೆಗೆ ತಕ್ಕ ಬೆಲೆ ತೆರಲೇಬೇಕು: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು

by ಶಾಲಿನಿ ಕೆ. ಡಿ
September 26, 2026 - 12:57 pm
0

Untitled design 2026 09 26T123255.656

ಗ್ರಾಹಕರೇ ಗಮನಿಸಿ! ಸತತ 3 ದಿನ ಬ್ಯಾಂಕ್‌ ಮುಷ್ಕರ: ಯಾವೆಲ್ಲ ಸೇವೆಗಳಲ್ಲಿ ವ್ಯತ್ಯಯ?

by ಶಾಲಿನಿ ಕೆ. ಡಿ
September 26, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (30)
    AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!
    September 26, 2026 | 0
  • Untitled design 2026 09 26T114401.424
    ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?
    September 26, 2026 | 0
  • Untitled design 2026 09 26T102648.320
    ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    September 26, 2026 | 0
  • ಜ್ಞಾನೇಶ್ (7)
    ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ
    September 25, 2026 | 0
  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version